ಯೋನನು 1:11 - ಕನ್ನಡ ಸಮಕಾಲಿಕ ಅನುವಾದ11 ಆಗ ಬಿರುಗಾಳಿ ಮತ್ತಷ್ಟು ತೀವ್ರಗೊಳ್ಳುತ್ತಿತ್ತು. ನಾವಿಕರು ಯೋನನಿಗೆ, “ಸಮುದ್ರ ಶಾಂತವಾಗಬೇಕಾದರೆ, ನಿನ್ನನ್ನು ಏನು ಮಾಡಬೇಕು? ಹೇಳು,” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಸಮುದ್ರವು ಮತ್ತಷ್ಟು ಅಲ್ಲೋಲಕಲ್ಲೋಲವಾದ ಕಾರಣ ಅವರು ಯೋನನಿಗೆ “ಸಮುದ್ರವು ಶಾಂತವಾಗುವ ಹಾಗೆ ನಿನ್ನನ್ನು ಏನು ಮಾಡೋಣ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ಬಿರುಗಾಳಿ ಮತ್ತಷ್ಟು ತೀವ್ರಗೊಳ್ಳುತ್ತಿತ್ತು. ನಾವಿಕರು ಯೋನನಿಗೆ: “ಸಮುದ್ರವು ಶಾಂತವಾಗಬೇಕಾದರೆ ನಿನ್ನನ್ನು ಏನು ಮಾಡಬೇಕು? ಹೇಳು,” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಬಳಿಕ ಸಮುದ್ರವು ಹೆಚ್ಚೆಚ್ಚಾಗಿ ಅಲ್ಲಕಲ್ಲೋಲವಾದ ಕಾರಣ ಅವರು - ನಮ್ಮ ಮೇಲೆ ಎದ್ದಿರುವ ಸಮುದ್ರವು ಶಾಂತವಾಗುವ ಹಾಗೆ ನಿನ್ನನ್ನು ಏನು ಮಾಡೋಣ ಎಂದು ಪ್ರಶ್ನೆಮಾಡಲು ಅವನು ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬಿರುಗಾಳಿಯೂ ಸಮುದ್ರದ ತೆರೆಗಳೂ ಇನ್ನೂ ಬಲವಾಗಿ ಬೀಸತೊಡಗಿದವು. ಆಗ ಅವರು ಯೋನನಿಗೆ, “ನಮ್ಮನ್ನು ರಕ್ಷಿಸಿಕೊಳ್ಳಲು ನಾವು ಏನು ಮಾಡಬೇಕು? ಸಮುದ್ರವು ಶಾಂತವಾಗಬೇಕಾದರೆ ನಾವೀಗ ನಿನಗೆ ಏನು ಮಾಡಬೇಕು?” ಎಂದು ಕೇಳಿದಾಗ ಅಧ್ಯಾಯವನ್ನು ನೋಡಿ |