ಯೋನನು 1:12 - ಕನ್ನಡ ಸಮಕಾಲಿಕ ಅನುವಾದ12 ಅವನು ಅವರಿಗೆ, “ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ಶಾಂತವಾಗುವುದು. ಏಕೆಂದರೆ ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ, ನಿಮ್ಮ ಮೇಲೆ ಬಂತೆಂದು ಬಲ್ಲೆನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೋನನು ಅವರಿಗೆ “ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ಆಗ ಸಮುದ್ರವು ಶಾಂತವಾಗುವುದು; ಈ ಭೀಕರ ಬಿರುಗಾಳಿ ನಿಮಗೆ ಸಂಭವಿಸಿದ್ದು ನನ್ನ ನಿಮಿತ್ತವೇ ಎಂಬುದು ನನಗೆ ಗೊತ್ತು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಯೋನನು: “ನನ್ನನ್ನು ಎತ್ತಿ ಸಮುದ್ರಕ್ಕೆ ಎಸೆಯಿರಿ. ಆಗ ಅದು ಶಾಂತವಾಗುವುದು. ನೀವು ಇಂಥ ಭೀಕರ ಬಿರುಗಾಳಿಗೆ ತುತ್ತಾಗಲು ನಾನೇ ಕಾರಣ. ಇದನ್ನು ನಾನು ಚೆನ್ನಾಗಿ ಬಲ್ಲೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ನಿಮ್ಮ ಮೇಲೆ ಎದ್ದಿರುವ ಸಮುದ್ರವು ಶಾಂತವಾಗುವದು; ಈ ದೊಡ್ಡ ತುಫಾನು ನಿಮಗೆ ಸಂಭವಿಸಿದ್ದು ನನ್ನ ನಿವಿುತ್ತವೇ ಎಂಬದು ನನಗೆ ಗೊತ್ತು ಎಂದುತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೋನನು, “ಈ ಬಿರುಗಾಳಿಗೆ ನಾನೇ ಕಾರಣ. ಈಗ ನನ್ನನ್ನೆತ್ತಿ ಸಮುದ್ರದೊಳಗೆ ಬಿಸಾಡಿರಿ. ಆಗ ಸಮುದ್ರವು ಶಾಂತವಾಗುವುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ದಾವೀದನು ದೇವರಿಗೆ, “ಜನರಲ್ಲಿ ಯುದ್ಧ ವೀರರನ್ನು ಲೆಕ್ಕಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಈ ಕೆಟ್ಟದ್ದನ್ನು ಮಾಡಿದೆನು, ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನನ್ನ ಯೆಹೋವ ದೇವರೇ, ನಿಮ್ಮ ಹಸ್ತವು ನಿಮ್ಮ ಜನರನ್ನು ಬಾಧಿಸದೆ, ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.