Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:2 - ಕನ್ನಡ ಸಮಕಾಲಿಕ ಅನುವಾದ

2 “ನೀನು ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಪ್ರಸಂಗಿಸು, ಏಕೆಂದರೆ ಅವರ ಕೆಟ್ಟತನವು ನನ್ನ ಮುಂದೆ ಏರಿ ಬಂದಿದೆ,” ಎಂಬುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನೆದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಗಟ್ಟಿಯಾಗಿ ಕೂಗುತ್ತಾ ಅದನ್ನು ಖಂಡಿಸು; ಅದರ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನಿನೆವೆಯು ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಕೃತ್ಯಗಳನ್ನು ನೋಡಿದ್ದೇನೆ. ಆದ್ದರಿಂದ ನೀನು ಆ ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:2
24 ತಿಳಿವುಗಳ ಹೋಲಿಕೆ  

ಆ ದೇಶದಿಂದ ಅವನು ಅಸ್ಸೀರಿಯಕ್ಕೆ ಹೋಗಿ ನಿನೆವೆ, ರೆಹೋಬೋತೀರ್, ಕೆಲಹ ಪಟ್ಟಣಗಳನ್ನೂ


ನಿನೆವೆಯ ವಿಷಯವಾದ ಪ್ರವಾದನೆ: ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.


ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು.


“ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ, ನಾನು ನಿನಗೆ ಹೇಳಿದ ಸಂದೇಶವನ್ನು ಅದರ ನಿವಾಸಿಗಳಿಗೆ ಸಾರು,” ಎಂದು ಹೇಳಿದರು.


“ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.


ಏಕೆಂದರೆ ಆಕೆಯ ಪಾಪಗಳು ಒಂದಕ್ಕೊಂದು ಸೇರಿ ಆಕಾಶದಷ್ಟಾಗಿವೆ. ದೇವರು ಆಕೆಯ ಅಪರಾಧಗಳನ್ನು ಜ್ಞಾಪಿಸಿಕೊಂಡಿದ್ದಾರೆ.


ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.


ಆದರೆ ನಿಶ್ಚಯವಾಗಿ ನಾನು ಯಾಕೋಬಿನ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವುದಕ್ಕೆ ಯೆಹೋವ ದೇವರ ಆತ್ಮದ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.


ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು.


ಪ್ರಾರ್ಥಿಸಿದೆನು: “ನನ್ನ ದೇವರೇ, ನಾನು ನನ್ನ ಮುಖವನ್ನು ನಿಮ್ಮ ಮುಂದೆ ಎತ್ತಲಾರದೆ, ಲಜ್ಜೆಯಿಂದ ನಾಚಿಕೆಪಡುತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಮೀರಿ ಬೆಳೆದಿವೆ. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.


ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ.


ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ನಿಂತು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ.


ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.


“ಆಗ ನಾನು ಆತನನ್ನು ಕುರಿತು ಏನೂ ಹೇಳುವುದಿಲ್ಲ. ಆತನ ಹೆಸರಿನಲ್ಲಿ ಇನ್ನು ಮಾತನಾಡುವುದೇ ಇಲ್ಲ,” ಎಂದು ಅಂದುಕೊಂಡೆನು. ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲಾಗಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು. ಬಿಗಿ ಹಿಡಿದು ದಣಿದೆನು. ನನ್ನಿಂದ ಆಗದೆ ಹೋಯಿತು.


ಆದರೆ ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕ ಮಾಡುತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನೆಸಿಕೊಳ್ಳುವುದಿಲ್ಲ. ಈಗ ಅವರ ಪಾಪಗಳು ಅವರನ್ನು ಸುತ್ತಿಕೊಂಡಿವೆ. ಅವು ನನ್ನ ಮುಖದ ಮುಂದೆ ಇವೆ.


ಹೀಗೆ ಯೋನನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ನಿನೆವೆಗೆ ಹೋದನು. ನಿನೆವೆಯು ಮೂರು ದಿವಸದ ಪ್ರಯಾಣದ ಮಹಾ ದೊಡ್ಡ ಪಟ್ಟಣವಾಗಿತ್ತು.


ಯೆಹೋವ ದೇವರ ಪ್ರವಾದಿ ಒಬ್ಬನು ಅಲ್ಲಿ ಇದ್ದನು. ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯಕ್ಕೆದುರಾಗಿ ಹೊರಟುಹೋಗಿ ಅವರಿಗೆ, “ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ಯೆಹೂದದ ಮೇಲೆ ಕೋಪಗೊಂಡದ್ದರಿಂದ, ದೇವರು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿದ್ದಾರೆ. ನೀವು ಆಕಾಶಕ್ಕೆ ಮುಟ್ಟುವ ಉಗ್ರತೆಯಿಂದ ಅವರನ್ನು ಕೊಂದುಹಾಕಿದ್ದೀರಿ.


ನಿನ್ನ ಗಾಯಕ್ಕೆ ಮದ್ದಿಲ್ಲ, ನಿನ್ನ ಗಾಯ ಪ್ರಾಣನಾಶಕ. ನಿನ್ನ ಸುದ್ದಿಯನ್ನು ಕೇಳುವವರೆಲ್ಲರೂ ನಿನ್ನ ಪತನಕ್ಕಾಗಿ ಕೈ ತಟ್ಟುವರು. ಏಕೆಂದರೆ ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರಿದ್ದಾರೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು