Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 1:3 - ಕನ್ನಡ ಸಮಕಾಲಿಕ ಅನುವಾದ

3 ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೆ ಯೋನನು ಯೆಹೋವನ ಸನ್ನಿಧಿಗೆ ತಪ್ಪಿಸಿಕೊಳ್ಳುವ ಹಾಗೆ ತಾರ್ಷೀಷಿಗೆ ಓಡಿಹೋಗಬೇಕೆಂದು ಹೊರಟು ಯೊಪ್ಪಕ್ಕೆ ಇಳಿದು ಅಲ್ಲಿ ತಾರ್ಷೀಷಿಗೆ ತೆರಳುವ ಹಡಗನ್ನು ಕಂಡು ಬಾಡಿಗೆಕೊಟ್ಟು ಯೆಹೋವನ ಸನ್ನಿಧಿಯಿಂದ ತಾರ್ಷೀಷಿಗೆ ಪ್ರಯಾಣಮಾಡಬೇಕೆಂದು ಹಡಗಿನವರೊಡನೆ ಅದನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನಿಗೆ ವಿಧೇಯನಾಗಲು ಯೋನನು ಇಷ್ಟಪಡದೆ ಆತನಿಂದ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿ ಯೊಪ್ಪಕ್ಕೆ ಹೋದನು. ಅಲ್ಲಿ ಬಹುದೂರದ ಪಟ್ಟಣವಾದ ತಾರ್ಷೀಷಿಗೆ ಹೋಗುವ ಹಡಗು ಹೊರಡಲು ಸಿದ್ಧವಾಗಿತ್ತು. ಅವನು ಪ್ರಯಾಣದರವನ್ನು ಕೊಟ್ಟು ಹಡಗನ್ನು ಹತ್ತಿದನು. ಆ ಜನರೊಂದಿಗೆ ತಾರ್ಷೀಷಿಗೆ ಪ್ರಯಾಣಮಾಡಿ ಯೆಹೋವನಿಂದ ದೂರಹೋಗಬೇಕೆಂಬುದೇ ಅವನ ಬಯಕೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 1:3
35 ತಿಳಿವುಗಳ ಹೋಲಿಕೆ  

ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪ ಊರಿಗೆ ಎದುರಾದ ಮೇರೆಯು ಸಹ ದೊರಕಿತು.


ಆಗ ಕಾಯಿನನು ಯೆಹೋವ ದೇವರ ಸನ್ನಿಧಿಯಿಂದ ಹೊರಟುಹೋಗಿ, ಏದೆನ್ ಸೀಮೆಗೆ ಪೂರ್ವದಲ್ಲಿದ್ದ ನೋದು ಎಂಬ ದೇಶದಲ್ಲಿ ವಾಸಿಸಿದನು.


ಯೊಪ್ಪ ಎಂಬಲ್ಲಿ ತಬಿಥಾ ಎಂಬ ಹೆಸರಿನ ದೇವಭಕ್ತೆ ಇದ್ದಳು. ಈ ಹೆಸರಿನ ಗ್ರೀಕ್ ಭಾಷಾಂತರ “ದೊರ್ಕ” ಎಂದಾಗುತ್ತದೆ. ಆಕೆ ಬಡವರಿಗೆ ಸಹಾಯ ಮಾಡುತ್ತಾ ಯಾವಾಗಲೂ ಒಳ್ಳೆಯದನ್ನೇ ಮಾಡುತ್ತಿದ್ದಳು.


ಪೇತ್ರನು ಯೊಪ್ಪದಲ್ಲಿ ಸೀಮೋನ ಎಂಬ ಹೆಸರಿನ ಚರ್ಮಕಾರನೊಂದಿಗೆ ಕೆಲವು ದಿನ ಇದ್ದನು.


ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.


ತಾರ್ಷೀಷಿಗೆ ದಾಟಿ ಹೋಗಿರಿ, ದ್ವೀಪ ನಿವಾಸಿಗಳೇ ಗೋಳಾಡಿರಿ.


ಟೈರಿನ ವಿಷಯವಾದ ಪ್ರವಾದನೆ: ತಾರ್ಷೀಷಿನ ಹಡಗುಗಳೇ, ಗೋಳಾಡಿರಿ, ಏಕೆಂದರೆ ಟೈರ್ ಹಾಳಾಗಿರುವುದರಿಂದ ನಿಮಗೆ ಮನೆಯಿಲ್ಲ ಮತ್ತು ಬಂದರವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.


ಅವನು ಅದನ್ನು ಕೇಳಿ ಎದ್ದು, ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ, ಅಲ್ಲಿ ತನ್ನ ಸೇವಕನನ್ನು ಕಳುಹಿಸಿಬಿಟ್ಟನು.


ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಸಿಕೊಳ್ಳುವ ಯಾವ ಆಸೆಯೂ ನನಗೆ ಇಲ್ಲ. ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಸಾಲಗಾರನಾಗಿದ್ದೇನೆ. ಸುವಾರ್ತೆಯನ್ನು ಸಾರದಿದ್ದರೆ, ನನ್ನ ಗತಿ ಏನೆಂದು ಹೇಳಲಿ!


“ಆದ್ದರಿಂದ ಅಗ್ರಿಪ್ಪ ರಾಜರೇ, ಆ ಪರಲೋಕದ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.


“ ‘ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು.


ತಾರ್ಷೀಷಿನ ಮಗಳೇ, ನೈಲ್ ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು. ಅಲ್ಲಿ ಇನ್ನು ನಿನ್ನನ್ನು ತಡೆಯುವವರು ಯಾರೂ ಇಲ್ಲ.


ಯೆಹೋವ ದೇವರು ಸೈತಾನನಿಗೆ, “ಅವನಲ್ಲಿರುವ ಎಲ್ಲವೂ ನಿನ್ನ ಅಧಿಕಾರದಲ್ಲಿ ಇವೆ. ಆದರೆ ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ,” ಎಂದರು. ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋದನು.


ಇದಲ್ಲದೆ ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ನೀನು ಅವುಗಳನ್ನು ಯೆರೂಸಲೇಮಿಗೆ ಒಯ್ಯಬಹುದು.”


ಆದರೆ ಪಂಫುಲ್ಯದಲ್ಲಿ ತಮ್ಮನ್ನು ಬಿಟ್ಟು ತಮ್ಮೊಂದಿಗೆ ಸೇವೆಗೆ ಸಹಕರಿಸದೆ ಹೋದ ಮಾರ್ಕನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ಪೌಲನು ಭಾವಿಸಿದನು.


ಆಗ ಯೇಸು ಅವನಿಗೆ, “ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ಯೋಗ್ಯನಲ್ಲ,” ಎಂದರು.


ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು.


ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ ನನಗೋಸ್ಕರ ದೂರದಿಂದ ನಿನ್ನ ಪುತ್ರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಯೆಹೋವ ದೇವರ ಬಳಿಗೂ, ನಿನ್ನನ್ನು ವೈಭವದಿಂದ ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವುದರಲ್ಲಿ ಮುಂದಾಗುತ್ತಿವೆ.


ಎಲ್ಲಾ ತಾರ್ಷೀಷಿನ ಹಡಗುಗಳು ನೋಡತಕ್ಕ ಮನೋಹರವಾದ ಪ್ರತಿಯೊಂದು ನೌಕೆಗಳ ಮೇಲೆಯೂ ಆ ದಿನವು ತಪ್ಪದೇ ಬರುವುದು.


ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋಗಿ, ಯೋಬನಿಗೆ ಅಂಗಾಲಿನಿಂದ ನೆತ್ತಿಯವರೆಗೆ ಕೆಟ್ಟ ಹುಣ್ಣುಗಳು ಬರುವಂತೆ ಅವನನ್ನು ಬಾಧಿಸಿದನು.


ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಅಲ್ಲಿ ಅವನಿಗೆ ಯೆಹೋವ ದೇವರ ವಾಕ್ಯವು ಬಂದು, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದರು.


ತರುವಾಯ ಯೆಹೋವ ದೇವರು, ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ, ಆ ಸ್ತ್ರೀ ಪುರುಷರು ಅವರ ಸಪ್ಪಳವನ್ನು ಕೇಳಿ, ಅವರಿಗೆ ಕಾಣಿಸಿಕೊಳ್ಳಬಾರದೆಂದು ತೋಟದ ಮರಗಳ ಮಧ್ಯದಲ್ಲಿ ಅಡಗಿಕೊಂಡರು.


ಲುದ್ದ ಊರು ಯೊಪ್ಪ ಊರಿಗೆ ಸಮೀಪದಲ್ಲಿತ್ತು. ಪೇತ್ರನು ಲುದ್ದದಲ್ಲಿರುವುದು ದೇವ ಭಕ್ತರಿಗೆ ತಿಳಿಯಲು ಅವರು, “ಕೂಡಲೇ ಬರಬೇಕು,” ಎಂದು ಹೇಳಿ ಅವನನ್ನು ಕರೆದುಕೊಂಡು ಬರಲು ಇಬ್ಬರನ್ನು ಕಳುಹಿಸಿದರು.


ಈ ವಿಷಯ ಯೊಪ್ಪದಲ್ಲಿದ್ದವರೆಲ್ಲರಿಗೂ ತಿಳಿಯಿತು. ಕರ್ತ ಯೇಸುವಿನಲ್ಲಿ ಅನೇಕರು ವಿಶ್ವಾಸವನ್ನಿಟ್ಟರು.


ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು.


ಕೆಲವರು ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗುತ್ತಾರೆ. ಅವರು ಜಲರಾಶಿಯಲ್ಲಿ ವ್ಯಾಪಾರ ಮಾಡುವವರು,


ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ.


ಆಗ ಆ ಮನುಷ್ಯರು ಬಹಳ ಭಯಪಟ್ಟು, “ನೀನು ಏನು ಮಾಡಿದ್ದೀ?” ಎಂದು ಅವನನ್ನು ಕೇಳಿದರು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಅವನು ಓಡಿ ಹೋಗುತ್ತಿದ್ದಾನೆಂದು ಆ ಮನುಷ್ಯರಿಗೆ ತಿಳಿದಿತ್ತು. ಏಕೆಂದರೆ ಅವನೇ ಇದನ್ನು ಅವರಿಗೆ ಹೇಳಿದ್ದನು.


“ಈಗ ನನ್ನ ಒಡೆಯನು ಹೇಳಿದ ಆ ಗೋಧಿಯನ್ನೂ, ಜವೆಗೋಧಿಯನ್ನೂ, ಎಣ್ಣೆಯನ್ನೂ, ದ್ರಾಕ್ಷಾರಸವನ್ನೂ ತನ್ನ ಸೇವಕರಿಗೆ ಕಳುಹಿಸಲಿ.


ಅರಸನ ಹಡಗುಗಳು ಹೀರಾಮನ ಸೇವಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.


ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು