ಯೋನನು 1:6 - ಕನ್ನಡ ಸಮಕಾಲಿಕ ಅನುವಾದ6 ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು, “ನೀನು ನಿದ್ರೆ ಮಾಡುವುದೇಕೆ? ಎದ್ದು ನಿನ್ನ ದೇವರನ್ನು ಪ್ರಾರ್ಥಿಸು. ಒಂದು ವೇಳೆ ನಿನ್ನ ದೇವರು ನಮ್ಮ ಮೇಲೆ ಲಕ್ಷ್ಯವಿಟ್ಟು, ನಾವು ನಾಶವಾಗದಂತೆ ಕಾಪಾಡಿಯಾರು!” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗಿರಲು ಹಡಗಿನ ನೌಕಾಧಿಕಾರಿ ಅವನ ಬಳಿಗೆ ಬಂದು, “ಇದೇನು, ನೀನು ನಿದ್ದೆಮಾಡುತ್ತಿರುವುದು? ಎದ್ದೇಳು, ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾವೆಲ್ಲರು ನಾಶವಾಗದೆ ಉಳಿದೇವು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೀಗಿರಲು ಹಡಗಿನ ಯಜಮಾನನು ಅವನ ಬಳಿಗೆ ಬಂದು - ಇದೇನು, ನಿದ್ದೆ ಮಾಡುತ್ತೀ! ಎದ್ದು ನಿನ್ನ ದೇವರಿಗೆ ಮೊರೆಯಿಡು; ಒಂದು ವೇಳೆ ನಿನ್ನ ದೇವರು ನಮ್ಮನ್ನು ರಕ್ಷಿಸಾನು, ನಾಶವಾಗದೆ ಉಳಿದೇವು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹಡಗಿನ ಯಜಮಾನನು ಯೋನನನ್ನು ನೋಡಿ, “ಏಳು, ಯಾಕೆ ಮಲಗಿಕೊಂಡಿದ್ದೀಯಾ? ನಿನ್ನ ದೇವರಿಗೆ ಪ್ರಾರ್ಥಿಸು. ಒಂದುವೇಳೆ ನಿನ್ನ ದೇವರು ನಿನ್ನ ಪ್ರಾರ್ಥನೆಯನ್ನು ಕೇಳಿ ನಮ್ಮನ್ನು ರಕ್ಷಿಸಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |