Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 2:5 - ಕನ್ನಡ ಸಮಕಾಲಿಕ ಅನುವಾದ

5 ನನ್ನನ್ನು ಸುತ್ತುತ್ತಿದ್ದ ನೀರು, ನನ್ನನ್ನು ಭಯಪಡಿಸಿತು. ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು. ಜಂಬು ಹುಲ್ಲು ನನ್ನ ತಲೆಗೆ ಸುತ್ತಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು, ಮಹಾಸಾಗರವು ನನ್ನನ್ನು ಆವರಿಸಿತು, ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸುತ್ತುವರಿಯೆ ಜಲರಾಶಿ, ಉಸಿರು ಕಟ್ಟಿದಂತಾಯ್ತು ಸಾಗರವು ಸಂಪೂರ್ಣವಾಗೆನ್ನ ಆವರಿಸಿತು; ಎನ್ನ ಶಿರವನು ಜೊಂಡು ಸುತ್ತುಗಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಬಂದಿತ್ತು, ಮಹಾಸಾಗರವು ನನ್ನನ್ನು ಆವರಿಸಿತು, ಪಾಚಿಯು ನನ್ನ ತಲೆಯನ್ನು ಸುತ್ತಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಸಮುದ್ರದ ನೀರು ನನ್ನನ್ನು ಮುಚ್ಚಿಬಿಟ್ಟಿತು. ನೀರು ನನ್ನ ಬಾಯಿಯನ್ನು ಮುಚ್ಚಿತು. ಆಗ ನನಗೆ ಉಸಿರಾಡಲಾಗಲಿಲ್ಲ. ನಾನು ಮುಳುಗುತ್ತಾ ಮುಳುಗುತ್ತಾ ಸಮುದ್ರದ ಆಳಕ್ಕೆ ಹೋದೆನು. ಸಮುದ್ರ ಪಾಚಿಗಳು ನನ್ನ ತಲೆಯನ್ನು ಸುತ್ತುಹಾಕಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 2:5
5 ತಿಳಿವುಗಳ ಹೋಲಿಕೆ  

ನನ್ನ ತಲೆಯ ಮೇಲೆ ನೀರು ಹರಿಯಿತು. ಆಗ ನಾನು ನಾಶವಾದೆನು ಅಂದುಕೊಂಡೆನು.


ನನ್ನನ್ನು ಜಾರುವ ಗುಂಡಿಯೊಳಗಿಂದ ಎತ್ತಿದರು. ಕೆಸರಿನ ಮಣ್ಣಿನಿಂದ ಎಬ್ಬಿಸಿದರು. ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ, ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದರು.


“ಸೈನ್ಯಗಳು ಯೆರೂಸಲೇಮಿಗೆ ಮುತ್ತಿಗೆ ಹಾಕುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲವು ಸಮೀಪಿಸಿದೆ ಎಂದು ತಿಳಿದುಕೊಳ್ಳಿರಿ.


ಯೆಹೋವ ದೇವರೇ, ನನ್ನ ವಿರೋಧಿಗಳ ನಿಮಿತ್ತ ನಿಮ್ಮ ನೀತಿಯಲ್ಲಿ ನನ್ನನ್ನು ನಡೆಸಿರಿ; ನಿಮ್ಮ ಮಾರ್ಗವನ್ನು ನನ್ನ ಮುಂದೆ ನೇರವಾಗಿ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು