ಯೋನನು 2:9 - ಕನ್ನಡ ಸಮಕಾಲಿಕ ಅನುವಾದ9 ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು. ನಾನು ಮಾಡಿದ ಹರಕೆಯನ್ನು ತೀರಿಸುವೆನು. ಆಗ ನಾನು, ‘ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು,’ ಎಂದು ಹೇಳಿದನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನಾದರೋ ಹಾಡಿ ಹೊಗಳುವೆ ನಿನ್ನನು ನಿನಗರ್ಪಿಸುವೆ ಸಮರ್ಪಕ ಬಲಿಯನು ಬಿಡದೆ ಸಲ್ಲಿಸುವೆ ಹೊತ್ತ ಹರಕೆಯನು ಹೊಂದುವೆ ಸ್ವಾಮಿಯಿಂದಲೆ ರಕ್ಷಣೆಯನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಾನಾದರೋ ಸ್ತೋತ್ರಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. ಯೆಹೋವನೇ, ನಾನು ನಿನಗೆ ಯಜ್ಞವನ್ನರ್ಪಿಸುವೆನು. ನಾನು ನಿನ್ನನ್ನು ಕೊಂಡಾಡಿ ಸ್ತೋತ್ರಸಲ್ಲಿಸುವೆನು. ನಾನು ನಿನಗೆ ವಿಶೇಷವಾದ ಹರಕೆಗಳನ್ನು ಮಾಡುವೆನು. ನಾನು ಕೊಟ್ಟ ವಚನಗಳನ್ನು ಪಾಲಿಸುವೆನು.” ಅಧ್ಯಾಯವನ್ನು ನೋಡಿ |
ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.