Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:2 - ಕನ್ನಡ ಸಮಕಾಲಿಕ ಅನುವಾದ

2 “ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ, ನಾನು ನಿನಗೆ ಹೇಳಿದ ಸಂದೇಶವನ್ನು ಅದರ ನಿವಾಸಿಗಳಿಗೆ ಸಾರು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದೇನೆಂದರೆ “ನೀನು ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಆಜ್ಞಾಪಿಸುವ ಸಂದೇಶವನ್ನು ಸಾರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು,” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನೆದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ನಾನು ನಿನಗೆ ಪ್ರಕಟಿಸುವದನ್ನು ಅಲ್ಲಿ ಸಾರು ಎಂದು ಎರಡನೆಯ ಸಲ ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಮಹಾನಗರವಾದ ನಿನೆವೆಗೆ ನೀನು ಎದ್ದುಹೋಗಿ ಅಲ್ಲಿ ನಾನು ಹೇಳಿದ್ದನ್ನು ಅವರಿಗೆ ಸಾರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:2
13 ತಿಳಿವುಗಳ ಹೋಲಿಕೆ  

ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು.


“ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ.


“ನೀನು ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಪ್ರಸಂಗಿಸು, ಏಕೆಂದರೆ ಅವರ ಕೆಟ್ಟತನವು ನನ್ನ ಮುಂದೆ ಏರಿ ಬಂದಿದೆ,” ಎಂಬುದು.


ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ಇಗೋ, ನೀನು ಸ್ವಸ್ಥನಾಗಿರುವೆ, ಹೆಚ್ಚಿನ ಕೇಡು ಬಾರದಂತೆ ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.


ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.


ಹೀಗೆ ಯೋನನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ನಿನೆವೆಗೆ ಹೋದನು. ನಿನೆವೆಯು ಮೂರು ದಿವಸದ ಪ್ರಯಾಣದ ಮಹಾ ದೊಡ್ಡ ಪಟ್ಟಣವಾಗಿತ್ತು.


“ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.


ಯೆಹೋವ ದೇವರ ವಾಕ್ಯವು ಎರಡನೆಯ ಸಾರಿ ಯೋನನಿಗೆ ಬಂದಿತು.


ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಯೆಹೋವ ದೇವರ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು.


ಇದಲ್ಲದೆ ಈ ಪೂರಿಮ್ ದಿನಗಳನ್ನು ಯೆಹೂದ್ಯನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಎಲ್ಲಾ ಯೆಹೂದ್ಯರಿಗೂ, ಅವರ ಸಂತಾನದವರಿಗೂ ಉಪವಾಸ ಮಾಡಿ, ದುಃಖಿಸುವ ಕಾಲವನ್ನು ಸ್ಥಿರಪಡಿಸಿದ ಪ್ರಕಾರವೇ ಈ ಪೂರಿಮ್ ದಿನವನ್ನು ಸ್ಥಿರಪಡಿಸುವುವಂತೆ ಆಜ್ಞಾಪಿಸಿದ್ದರು.


ಆಗ ಯೆಹೋವ ದೇವರು ನನಗೆ, “ ‘ನಾನು ಚಿಕ್ಕವನೆಂದು ಹೇಳಬೇಡ.’ ಏಕೆಂದರೆ ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ನೀನು ಹೋಗಬೇಕು. ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾತನಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು