Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:7 - ಕನ್ನಡ ಸಮಕಾಲಿಕ ಅನುವಾದ

7 ಅವನು ನಿನೆವೆಯಲ್ಲಿ ಈ ಘೋಷಣೆಯನ್ನು ಮಾಡಿದನು: “ಅರಸನ ಮತ್ತು ಶ್ರೇಷ್ಠರ ತೀರ್ಪಿನ ಪ್ರಕಾರ: “ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನನ್ನೂ ರುಚಿ ನೋಡದಿರಲಿ, ಮೇಯದಿರಲಿ, ನೀರನ್ನು ಕುಡಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇದಲ್ಲದೆ ಅರಸನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿ ಹೇಳಿದ್ದೇನೆಂದರೆ: “ಜನ, ಪಶು, ಮಂದೆ, ಹಿಂಡು ಇವುಗಳು ಸಹ ಏನೂ ರುಚಿ ನೋಡುವುದಾಗಲೀ, ತಿನ್ನುವುದಾಗಲೀ, ಕುಡಿಯುವುದಾಗಲೀ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಕೂಡಲೇ ತನ್ನ ಪ್ರಜೆಗಳಿಗೆ ಈ ರಾಜಾಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿದನು: “ಅರಸನ ಹಾಗೂ ಆತನ ಆಪ್ತ ಪ್ರಮುಖರ ಆಜ್ಞೆಯಿದು: ಜನರಾಗಲೀ, ದನಕರುಗಳಾಗಲೀ, ಕುರಿಮೇಕೆಗಳಾಗಲೀ, ಯಾರೂ ಏನನ್ನೂ ತಿನ್ನಬಾರದು, ಕುಡಿಯಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇದಲ್ಲದೆ ಅವನು ತನ್ನ ಮತ್ತು ರಾಜ್ಯಾಧಿಕಾರಿಗಳ ಆಜ್ಞೆಯನ್ನಾಗಿ - ಜನ ಪಶು ಮಂದೆ ಹಿಂಡು ಇವುಗಳು ಏನೂ ರುಚಿನೋಡದಿರಲಿ; ತಿನ್ನದಿರಲಿ, ಕುಡಿಯದಿರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ತನ್ನ ಪ್ರಜೆಗಳಿಗೆ ಒಂದು ವಿಶೇಷ ಸಂದೇಶವನ್ನು ಬರೆಯಿಸಿ ನಗರದಲ್ಲೆಲ್ಲಾ ಪ್ರಚುರಪಡಿಸಿದನು. ಅದರಲ್ಲಿ ಹೀಗೆ ಬರೆದಿತ್ತು. ಇದು ಅರಸನ ಮತ್ತು ಆತನ ಆಡಳಿತಗಾರರ ಆಜ್ಞೆ: ಸ್ವಲ್ಪ ಸಮಯದವರೆಗೆ ಯಾವ ವ್ಯಕ್ತಯಾಗಲಿ ಪ್ರಾಣಿಯಾಗಲಿ ಆಹಾರವನ್ನು ತೆಗೆದುಕೊಳ್ಳಬಾರದು. ಮಂದೆಯಾಗಲಿ, ಹಿಂಡಾಗಲಿ ಹುಲ್ಲುಗಾವಲಿಗೆ ಹೋಗಬಾರದು. ನಿನೆವೆಯಲ್ಲಿ ವಾಸಿಸುವ ಯಾರೂ ಊಟಮಾಡಬಾರದು, ನೀರು ಕುಡಿಯಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:7
6 ತಿಳಿವುಗಳ ಹೋಲಿಕೆ  

ಇದನ್ನು ಕೇಳಿ ಯೆಹೋಷಾಫಾಟನು ಭಯಪಟ್ಟು ಯೆಹೋವ ದೇವರನ್ನು ಹುಡುಕಲು ನಿರ್ಣಯಿಸಿಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸ ಮಾಡಬೇಕೆಂದು ಸಾರಿದನು.


ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.


ಪಶುಗಳು ನರಳುತ್ತವೆ. ದನದ ಹಿಂಡುಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ; ಕುರಿಮಂದೆಗಳು ಸಹ ಕಷ್ಟಪಡುತ್ತಲಿವೆ.


ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು