Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 3:8 - ಕನ್ನಡ ಸಮಕಾಲಿಕ ಅನುವಾದ

8 ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರೂ ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗಗಳನ್ನೂ, ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದು ಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಎಲ್ಲ ಜನರೂ ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು; ಪ್ರಾಣಿಗಳಿಗೂ ಹೊದಿಸಬೇಕು. ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಬೇಕು. ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿಂಸಾಚಾರವನ್ನು ಕೈಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಜನರಿಗೂ ಪಶುಗಳಿಗೂ ಗೋಣಿತಟ್ಟು ಹೊದಿಕೆಯಾಗಲಿ; ಎಲ್ಲರು ದೇವರಿಗೆ ಬಲವಾಗಿ ಮೊರೆಯಿಡಲಿ; ಒಬ್ಬೊಬ್ಬನು ತನ್ನ ತನ್ನ ದುರ್ಮಾರ್ಗವನ್ನೂ ತಾನು ನಡಿಸುತ್ತಿದ್ದ ಹಿಂಸೆಯನ್ನೂ ತೊರೆದುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರತಿ ಮನುಷ್ಯನೂ ಪ್ರಾಣಿಯೂ ಶೋಕವಸ್ತ್ರವನ್ನು ಧರಿಸಬೇಕು. ಜನರು ದೇವರಿಗೆ ಗಟ್ಟಿಯಾಗಿ ಮೊರೆಯಿಡಬೇಕು. ಪ್ರತಿಯೊಬ್ಬನು ತನ್ನ ದುಷ್ಟಜೀವಿತವನ್ನು ಬದಲಾಯಿಸಿ ದುಷ್ಟತನ ಮಾಡುವದನ್ನು ನಿಲ್ಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 3:8
23 ತಿಳಿವುಗಳ ಹೋಲಿಕೆ  

ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು, “ನೀನು ನಿದ್ರೆ ಮಾಡುವುದೇಕೆ? ಎದ್ದು ನಿನ್ನ ದೇವರನ್ನು ಪ್ರಾರ್ಥಿಸು. ಒಂದು ವೇಳೆ ನಿನ್ನ ದೇವರು ನಮ್ಮ ಮೇಲೆ ಲಕ್ಷ್ಯವಿಟ್ಟು, ನಾವು ನಾಶವಾಗದಂತೆ ಕಾಪಾಡಿಯಾರು!” ಎಂದನು.


ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.


ಆಗ ಅವರು ಯೆಹೋವ ದೇವರಿಗೆ ಕೂಗಿ, “ಯೆಹೋವ ದೇವರೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ. ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡಿರಿ. ಯೆಹೋವ ದೇವರೇ, ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?” ಎಂದು ಹೇಳಿದರು.


ಅವರ ನೂಲು ವಸ್ತ್ರಕ್ಕಾಗದು. ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದುಕೊಳ್ಳರು. ಅವರ ಕೆಲಸಗಳು ಅಕ್ರಮದ ಕೆಲಸಗಳೇ. ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಇವೆ.


ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.


ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.


“ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?


ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”


ಆದರೂ ನನ್ನ ಕೈಗಳಲ್ಲಿ ಹಿಂಸಾಚಾರವಿಲ್ಲ; ನನ್ನ ಪ್ರಾರ್ಥನೆಯು ಶುದ್ಧವಾಗಿದೆ.


ದೇವರು ಅವರ ಕಿವಿಯನ್ನು ತಿದ್ದುವಿಕೆಗಾಗಿ ತೆರೆದು, ಜನರು ದುಷ್ಟತನವನ್ನು ಬಿಟ್ಟು ತಿರುಗಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುವರು.


ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.


ಒಂದು ವೇಳೆ ಅವರು ಕೇಳಿ, ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವುದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪ ಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿಕೊಂಡಾರು.


ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು.


ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು