ಯೋನನು 4:11 - ಕನ್ನಡ ಸಮಕಾಲಿಕ ಅನುವಾದ11 ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇಂಥ ಗಿಡಕ್ಕಾಗಿ ನೀನು ಕನಿಕರಪಡುವಾಗ ಎಡಗೈ ಬಲಗೈ ತಿಳಿಯದ ಒಂದು ಲಕ್ಷದ ಇಪ್ಪತ್ತು ಸಾವಿರ ಜನರು, ಅಪಾರ ಪಶುಪ್ರಾಣಿಗಳೂ ಇರುವ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇಂಥ ಗಿಡಕ್ಕಾಗಿ ನೀನು ಕನಿಕರಪಟ್ಟಿರುವಲ್ಲಿ ಎಡಗೈ ಬಲಗೈ ತಿಳಿಯದ ಒಂದು ಲಕ್ಷ ಇಪ್ಪತ್ತು ಸಾವಿರ ನರಪ್ರಾಣಿಗಳೂ ಬಹು ಪಶುಗಳೂ ಉಳ್ಳ ಆ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಒಂದು ಗಿಡಕ್ಕಾಗಿ ನೀನು ಇಷ್ಟೊಂದು ದುಃಖಗೊಂಡರೆ, ನಿನೆವೆಯಂತಹ ಇಷ್ಟು ದೊಡ್ಡ ನಗರಕ್ಕಾಗಿ ನನಗೂ ಖಂಡಿತವಾಗಿ ದುಃಖವಾಗುತ್ತದೆ. ಈ ನಗರದಲ್ಲಿ ಅನೇಕಾನೇಕ ಜನರಿದ್ದಾರೆ! ಅನೇಕ ಪ್ರಾಣಿಗಳಿವೆ. ಈ ನಗರದಲ್ಲಿರುವ ಒಂದು ಲಕ್ಷದ ಇಪ್ಪತ್ತು ಸಾವಿರ ಮಂದಿ ಜನರಿಗೆ ತಾವು ತಪ್ಪು ಮಾಡುತ್ತಿರುವುದಾಗಿ ತಿಳಿದಿರಲಿಲ್ಲ” ಅಂದನು. ಅಧ್ಯಾಯವನ್ನು ನೋಡಿ |