ಯೋನನು 4:6 - ಕನ್ನಡ ಸಮಕಾಲಿಕ ಅನುವಾದ6 ದೇವರಾದ ಯೆಹೋವ ದೇವರು ಒಂದು ಸೋರೆ ಬಳ್ಳಿಯನ್ನು ಹಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು, ಅವನ ತಲೆಗೆ ನೆರಳು ಕೊಟ್ಟು, ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದರು. ಯೋನನು ಆ ಸೋರೆ ಬಳ್ಳಿಯ ವಿಷಯವಾಗಿ ಬಹಳ ಸಂತೋಷಪಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ದೇವರಾದ ಯೆಹೋವನು ಒಂದು ಸೋರೆಗಿಡವನ್ನು ಬೆಳೆಯುವಂತೆ ಮಾಡಿ ಅದು ಯೋನನ ತಲೆಗೆ ನೆರಳಾಗಿ ಅವನ ಮನೋವ್ಯಥೆಗೆ ಸಮಾಧಾನ ಬರುವಂತೆ ಮಾಡಿದನು. ಇದರಿಂದ ಯೋನನಿಗೆ ಬಹು ಸಂತೋಷವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ದೇವರಾದ ಸರ್ವೇಶ್ವರ ಆ ಸ್ಥಳದಲ್ಲಿ ಒಂದು ಸೋರೆಬಳ್ಳಿ ಮೊಳೆಯುವಂತೆ ಮಾಡಿದರು. ಅದು ಬೆಳೆದು ತಲೆಗೆ ನೆರಳನ್ನೂ ಮನಸ್ಸಿಗೆ ತಣಿವನ್ನೂ ನೀಡಿತು. ಯೋನನಿಗೆ ಬಹಳ ಸಂತೋಷವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ದೇವರಾದ ಯೆಹೋವನು ಯೋನನ ಮೇಲ್ಗಡೆ ಒಂದು ಸೋರೆಗಿಡವು ಹಬ್ಬಿ ಅವನ ತಲೆಗೆ ನೆರಳಾಗಿ ಅವನ ಕರಕರೆಯನ್ನು ತಪ್ಪಿಸುವಂತೆ ಏರ್ಪಡಿಸಿದನು. ಆ ಸೋರೆಗಿಡದಿಂದ ಯೋನನಿಗೆ ಬಹು ಸಂತೋಷವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರಾದ ಯೆಹೋವನು ಒಂದು ಸೋರೆ ಗಿಡವನ್ನು ಯೋನನ ಬಳಿಯಲ್ಲಿಯೇ ಶೀಘ್ರದಲ್ಲಿ ಬೆಳೆಯ ಮಾಡಿದನು. ಆ ಸೋರೆ ಗಿಡವು ಆ ಜಾಗವನ್ನು ತಂಪು ಮಾಡಿದ್ದರಿಂದ ಯೋನನಿಗೆ ತುಂಬಾ ಹಿತವಾಯಿತು ಮತ್ತು ತುಂಬಾ ಸಂತೋಷವಾಯಿತು. ಅಧ್ಯಾಯವನ್ನು ನೋಡಿ |