Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋನನು 4:8 - ಕನ್ನಡ ಸಮಕಾಲಿಕ ಅನುವಾದ

8 ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಸೂರ್ಯನು ಆಕಾಶದಲ್ಲಿ ಏರಿ ಬಂದಾಗ ದೇವರು ಪೂರ್ವದ ಬಿಸಿಗಾಳಿ ಬೀಸುವಂತೆ ಮಾಡಿದನು. ಬಿಸಿಲಿನ ತಾಪವು ಯೋನನ ತಲೆಯ ಮೇಲೆ ಹೆಚ್ಚಾಯಿತು. ಯೋನನಿಗೆ ಶಾಖ ತಡೆಯಲಾಗಲಿಲ್ಲ. ಬಹಳ ಬಲಹೀನನಾದನು. ನನ್ನನ್ನು ಸಾಯಿಸು ಎಂದು ಯೋನನು ದೇವರನ್ನು ಬೇಡುತ್ತಾ, “ದೇವರೇ, ನಾನು ಬದುಕುವದಕ್ಕಿಂತ ಸಾಯುವುದೇ ಲೇಸು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋನನು 4:8
23 ತಿಳಿವುಗಳ ಹೋಲಿಕೆ  

ಆದ್ದರಿಂದ ಯೆಹೋವ ದೇವರೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆಯಿರಿ, ಏಕೆಂದರೆ ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.


ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.


ಹಗಲಲ್ಲಿ ಸೂರ್ಯನೂ ನಿಮ್ಮನ್ನು ಹಾನಿಮಾಡುವುದಿಲ್ಲ. ರಾತ್ರಿಯಲ್ಲಿ ಚಂದ್ರನೂ ನಿಮ್ಮನ್ನು ಬಾಧಿಸುವುದಿಲ್ಲ.


‘ಇವರಿಗೆ ಇನ್ನೆಂದಿಗೂ ಹಸಿವೆಯಾಗಲಿ; ಬಾಯಾರಿಕೆಯಾಗಲಿ ಆಗುವುದಿಲ್ಲ. ಇದಲ್ಲದೆ ಸೂರ್ಯನ ಬಿಸಿಲಾದರೂ,’ ಯಾವ ಝಳವಾದರೂ ಇವರಿಗೆ ತಟ್ಟುವುದಿಲ್ಲ.


ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಇರದು. ಝಳವೂ, ಬಿಸಿಲೂ ಬಡಿಯದು. ಏಕೆಂದರೆ ಅವರನ್ನು ಕರುಣಿಸುವ ದೇವರು ಅವರನ್ನು ನಡೆಸುತ್ತಾ, ನೀರುಕ್ಕುವ ಒರತೆಗಳ ಬಳಿಗೆ ತರುವರು.


ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು.


ಆದರೆ ಯೆಹೋವ ದೇವರು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದರು. ಸಮುದ್ರದಲ್ಲಿ ಮಹಾ ಬಿರುಗಾಳಿ ಉಂಟಾಗಿ, ಹಡಗು ಒಡೆಯುವುದರಲ್ಲಿತ್ತು.


ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ. ನನ್ನ ಸಹೋದರರು ನನ್ನ ಮೇಲೆ ಕೋಪಮಾಡಿಕೊಂಡು, ದ್ರಾಕ್ಷಿತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ಆದರೆ ನನ್ನ ಸ್ವಂತ ದ್ರಾಕ್ಷಿತೋಟವನ್ನು ನಾನು ಅಲಕ್ಷ್ಯ ಮಾಡಬೇಕಾಯಿತು.


ನಾನು ಮೌನವಾದೆನು, ಬಾಯಿ ತೆರೆಯಲಿಲ್ಲ; ಇದನ್ನು ಮಾಡಿದವರು ನೀವೇ.


ಆದರೆ ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ? ನಾವು ದೇವರಿಂದ ಒಳ್ಳೆಯದನ್ನು ಹೊಂದಿದ್ದೇವೆ, ಕಷ್ಟವನ್ನು ಹೊಂದಬಾರದೋ?” ಎಂದನು. ಇವೆಲ್ಲವುಗಳಲ್ಲಿಯೂ ಪಾಪದ ಮಾತೊಂದೂ ಯೋಬನ ಬಾಯಿಂದ ಬರಲಿಲ್ಲ.


ಹಾಗೆಯೇ ಸಮುಯೇಲನು ಅವನಿಗೆ ಒಂದನ್ನೂ ಮರೆಮಾಡದೆ, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು, “ಅವರು ಯೆಹೋವ ದೇವರು. ಅವರಿಗೆ ಸರಿತೋರುವುದನ್ನು ಮಾಡಲಿ,” ಎಂದನು.


ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.


‘ಕಡೆಯವರಾದ ಇವರು ಒಂದೇ ತಾಸು ಕೆಲಸಮಾಡಿದ್ದಾರೆ, ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸಮಾಡಿದ ನಮ್ಮನ್ನು ನೀನು ಇವರಿಗೆ ಸಮಮಾಡಿದ್ದಿ,’ ಎಂದರು.


ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.


ಎಫ್ರಾಯೀಮು ತನ್ನ ಸಹೋದರರಲ್ಲಿ ಫಲ ಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವ ದೇವರು ಬೀಸಮಾಡುವ ಪೂರ್ವ ಗಾಳಿಯು ಬರಲು, ಅವನ ಬುಗ್ಗೆಯು ಬತ್ತುವುದು. ಅವನ ಒರತೆಯು ಒಣಗುವುದು. ಅವನ ಬೊಕ್ಕಸಗಳ ನಿಧಿಯನ್ನು ಶತ್ರುಗಳು ಸೂರೆಮಾಡುವರು.


ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.


ಅವುಗಳ ಹಿಂದೆಯೇ ಪೂರ್ವದಿಕ್ಕಿನ ಗಾಳಿಯಿಂದ ಬತ್ತಿ, ಒಣಗಿ ಹೋದ ಏಳು ತೆನೆಗಳು ಮೊಳೆತವು.


“ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವುದಿಲ್ಲ,” ಎಂದು ಇಜ್ರೆಯೇಲಿನವನಾದ ನಾಬೋತನು ಹೇಳಿದ ಮಾತಿಗೋಸ್ಕರ, ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು, ತನ್ನ ಮಂಚದ ಮೇಲೆ ಮಲಗಿ, ತನ್ನ ಮುಖವನ್ನು ತಿರುಗಿಸಿಕೊಂಡು ಊಟಮಾಡದೆ ಇದ್ದನು.


ಆದ್ದರಿಂದ ನನ್ನ ದೇಹದಲ್ಲಿ ಸಂಕಟಪಡುವುದಕ್ಕಿಂತಲೂ ಉಸಿರುಕಟ್ಟಿ, ನಾನು ನನ್ನ ಪ್ರಾಣಬಿಡುವುದು ಲೇಸು.


ನೀನು ಕೋಪಿಸಿಕೊಳ್ಳುವುದಕ್ಕೆ ಆತುರಪಡದಿರು, ಏಕೆಂದರೆ ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು