Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 1:6 - ಕನ್ನಡ ಸಮಕಾಲಿಕ ಅನುವಾದ

6 ಒಂದು ದಿನ, ದೇವದೂತರು ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿಬಂದಾಗ, ಸೈತಾನನು ಸಹ ಅವರೊಂದಿಗೆ ಸೇರಿಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಒಂದು ದಿನ ದೇವದೂತರು ಯೆಹೋವನ ಸನ್ನಿಧಿಗೆ ಬರುವಾಗ ಸೈತಾನನು (ಆಪಾದಕ ದೂತನು) ಅವರ ಜೊತೆಯಲ್ಲಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಒಮ್ಮೆ ಸ್ವರ್ಗನಿವಾಸಿಗಳು ಸರ್ವೇಶ್ವರಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನೂ ಅಲ್ಲಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಒಂದಾನೊಂದು ದಿನ ದೇವದೂತರು ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳುವದಕ್ಕೆ ಬರಲಾಗಿ ಸೈತಾನನು [ಎಂಬ ಆಪಾದಕ ದೂತನು] ಅವರ ಜೊತೆಯಲ್ಲಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವದೂತರು ಯೆಹೋವನನ್ನು ಭೇಟಿಯಾಗುವ ದಿನ ಬಂದಿತು. ಆಗ ಸೈತಾನನು ಸಹ ಆ ದೂತರೊಂದಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 1:6
16 ತಿಳಿವುಗಳ ಹೋಲಿಕೆ  

ಇನ್ನೊಂದು ದಿನ, ದೇವದೂತರು ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿ ಬಂದಿದ್ದರು. ಸೈತಾನನು ಸಹ ಅವರೊಂದಿಗೆ ಯೆಹೋವ ದೇವರ ಮುಂದೆ ಬಂದನು.


ಉದಯದ ನಕ್ಷತ್ರಗಳು ಕೂಡಿ ಹಾಡುತ್ತಿರುವಾಗ, ದೇವದೂತರೆಲ್ಲರೂ ಹರ್ಷಧ್ವನಿಮಾಡುತ್ತಿರುವಾಗ, ಭೂಮಿಗೆ ಮೂಲೆಗಲ್ಲು ಹಾಕಿದವರಾರು?


ಆತನು ನನಗೆ, ಯೆಹೋವ ದೇವರ ದೂತನ ಮುಂದೆ ನಿಂತಿರುವ ಮಹಾಯಾಜಕನಾದ ಯೆಹೋಶುವನನ್ನೂ, ಅವನ ಮೇಲೆ ದೂರು ಹೇಳುವುದಕ್ಕೆ ಅವನ ಬಲಗಡೆಯಲ್ಲಿ ನಿಂತ ಸೈತಾನನನ್ನೂ ತೋರಿಸಿದನು.


ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು: ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ, ಎಡಗಡೆ ಮತ್ತು ಸುತ್ತಲೂ ನಿಂತಿರುವುದನ್ನೂ ನಾನು ಕಂಡೆನು.


ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.


ಆ ದಿನಗಳಲ್ಲಿ ಭೂಮಿಯ ಮೇಲೆ ನೆಫೀಲಿಯೆಂಬ ರಾಕ್ಷಸ ವಂಶದವರು ಇದ್ದರು. ನಂತರದಲ್ಲಿಯೂ ಇದ್ದರು. ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಕೂಡಿದಾಗ, ಮಕ್ಕಳು ಹುಟ್ಟಿದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಿಗಳು.


ಅದಕ್ಕೆ ಯೇಸು ಅವರಿಗೆ, “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿಕೊಂಡೆನಲ್ಲವೇ? ಆದರೆ ನಿಮ್ಮಲ್ಲಿಯೂ ಒಬ್ಬನು ಪಿಶಾಚನಾಗಿದ್ದಾನೆ,” ಎಂದರು.


“ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ.


ಕಯಿನಾನನು ಎನೋಷನ ಮಗನು, ಎನೋಷನು ಸೇಥನ ಮಗನು, ಸೇತನು ಆದಾಮನ ಮಗನು, ಆದಾಮನು ದೇವರ ಮಗನು.


ದೇವರ ದೂತರೇ, ಅವರ ಮಾತನ್ನು ಕೇಳಿ, ಅವರಿಗೆ ವಿಧೇಯರಾಗುವ ಪರಾಕ್ರಮಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ.


ಆಗ ದೇವಪುತ್ರರು, ಮನುಷ್ಯ ಪುತ್ರಿಯರ ಸೌಂದರ್ಯವನ್ನು ಕಂಡು ಅವರನ್ನು ಆರಿಸಿಕೊಂಡು, ತಮಗೆ ಹೆಂಡತಿಯರನ್ನಾಗಿ ಮಾಡಿಕೊಂಡರು.


ಅರಸನು ಅವರಿಗೆ ಉತ್ತರವಾಗಿ, “ಇಗೋ, ಕಟ್ಟಿಲ್ಲದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿರುವುದನ್ನು ನೋಡುತ್ತೇನೆ. ಅವರಿಗೆ ಯಾವ ಹಾನಿಯೂ ಇಲ್ಲ. ಅಲ್ಲದೆ ನಾಲ್ಕನೆಯವರ ರೂಪವು ದೇವಪುತ್ರನ ಹಾಗಿದೆ,” ಎಂದು ಹೇಳಿದನು.


“ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ.


ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು. “ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು.


ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ, ಯಥಾರ್ಥನೂ, ದೇವರಿಗೆ ಭಯಪಡುವವನೂ, ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನಗೆ ಸೂಚಿಸಿದರೂ, ಅವನು ಇನ್ನೂ ತನ್ನ ಯಥಾರ್ಥತೆಯಲ್ಲಿ ದೃಢವಾಗಿದ್ದಾನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು