Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:1 - ಕನ್ನಡ ಸಮಕಾಲಿಕ ಅನುವಾದ

1 “ನನ್ನ ಜೀವನವೇ ನನಗೆ ಬೇಸರವಾಗಿದೆ; ನನ್ನ ದೂರುಗಳನ್ನು ಮನಬಿಚ್ಚಿ ನುಡಿಯುವೆನು; ನನ್ನ ಪ್ರಾಣದ ಕಹಿಯಿಂದ ಮಾತನಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನನ್ನ ಬಾಳೇ ನನಗೆ ಬೇಸರವಾಗಿದೆ ಎದೆಬಿಚ್ಚಿ ಮೊರೆಯಿಡುತ್ತಿರುವೆ ಕಹಿ ಮನದಿಂದ ನುಡಿಯುತ್ತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ಜೀವವೇ ನನಗೆ ಬೇಸರವಾಗಿದೆ. ಎದೆಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೋಬನು ತನ್ನ ಮಾತನ್ನು ಮುಂದುವರಿಸಿದನು: “ನನ್ನ ಜೀವಿತವೇ ನನಗೆ ಅಸಹ್ಯವಾಗಿದೆ. ಹೃದಯ ಬಿಚ್ಚಿ ಮೊರೆಯಿಡುವೆನು; ಮನೋವ್ಯಥೆಯಿಂದ ನುಡಿಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:1
21 ತಿಳಿವುಗಳ ಹೋಲಿಕೆ  

“ಆದ್ದರಿಂದ ನಾನು ನನ್ನ ಬಾಯಿ ಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ನನ್ನ ಆತ್ಮದ ಕಹಿಯಲ್ಲಿ ನಾನು ವಾದಿಸುವೆನು.


ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.


ಈ ರೀತಿಯಲ್ಲಿ ನೀವು ನನ್ನನ್ನು ನಡೆಸುವುದಾದರೆ, ಈಗಲೇ ನನ್ನನ್ನು ಕೊಂದುಬಿಡಿ. ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತರೆ, ನಾನು ನನ್ನ ಸ್ವಂತ ನಾಶವನ್ನು ಎದುರಿಸದಂತೆ ಕಾಪಾಡಿ,” ಎಂದನು.


ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.


“ನಾನು ನಿರ್ದೋಷಿಯೇ ಹೌದು, ನನ್ನ ಬಗ್ಗೆ ನನಗೆ ಚಿಂತೆ ಇಲ್ಲ; ನನ್ನ ಬಾಳನ್ನೇ ತಿರಸ್ಕಾರ ಮಾಡುತ್ತೇನೆ.


ಬರದಲ್ಲಿ ನಿನ್ನನ್ನು ಮರಣದೊಳಗಿಂದಲೂ, ಯುದ್ಧದಲ್ಲಿ ಖಡ್ಗದ ಬಲದಿಂದಲೂ ದೇವರು ವಿಮೋಚಿಸುವರು.


ಆದ್ದರಿಂದ ಯೆಹೋವ ದೇವರೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆಯಿರಿ, ಏಕೆಂದರೆ ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.


ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು. ಆದರೆ ನನ್ನ ಆತ್ಮವನ್ನು ನಾಶದಿಂದ ಬಿಡುಗಡೆ ಮಾಡಿದ್ದು ನಿಮ್ಮ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.


ಆದರೆ, ನಾನು ಏನು ಹೇಳಲಿ, ಆತನು ನನಗೆ ಮಾತುಕೊಟ್ಟು, ತಾನೇ ಅದನ್ನು ನೆರವೇರಿಸಿದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ವಿನಯದಿಂದ ನಡೆಯುವೆನು.


ನಿಜವಾಗಿ ನಾನು ತಪ್ಪು ಮಾಡಿದ್ದರೆ ನಿಮಗೇನು? ನನ್ನ ತಪ್ಪು ನನ್ನ ಸಂಗಡ ಇರಲಿ.


“ದೇವರೇ, ನೀವು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿಮ್ಮ ಶಿಕ್ಷೆ ಮುಗಿಯುವವರೆಗೂ ನನ್ನನ್ನು ಅಡಗಿಸಿರಿ! ನೀವು ನನಗೆ ಒಂದು ಕಾಲವನ್ನು ನಿಗದಿಪಡಿಸಿ, ಅನಂತರ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು!


ನಾನು ನನ್ನ ಜೀವನವನ್ನು ದ್ವೇಷಿಸುತ್ತೇನೆ; ನಿರಂತರ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟುಬಿಡಿರಿ; ನನ್ನ ಬಾಳಿನ ದಿನಗಳಿಗೆ ಅರ್ಥವಿಲ್ಲ.


ನಾನು ಹೇಳಿದ ಮಾತುಗಳನ್ನು ತಿದ್ದಬೇಕೆನ್ನುವಿರೋ? ಬೇಸರದ ನನ್ನ ಮಾತುಗಳು ನಿಮಗೆ ಗಾಳಿಮಾತುಗಳೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು