Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:13 - ಕನ್ನಡ ಸಮಕಾಲಿಕ ಅನುವಾದ

13 “ಆದರೂ ನೀವು ಇವುಗಳನ್ನು ನಿಮ್ಮ ಹೃದಯದಲ್ಲಿ ಮರೆಮಾಡಿಕೊಂಡಿದ್ದೀರಿ; ಇದು ನಿಮ್ಮ ಉದ್ದೇಶ ಎಂದು ನನಗೆ ಗೊತ್ತಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದಿ, ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆದರೂ ನನಗೆ ಚೆನ್ನಾಗಿ ಗೊತ್ತಿತ್ತು; ನಿನ್ನ ಹೃದಯದಲ್ಲಿ ಗುಟ್ಟಾದ ಯೋಜನೆಯೊಂದು ಹುದುಗಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆದರೂ ನಿನ್ನ ಹೃದಯದಲ್ಲಿ ಇವುಗಳನ್ನು ಮರೆಮಾಡಿಕೊಂಡಿದ್ದೀ, ಇವು ನಿನ್ನಲ್ಲಿ ಇದ್ದೇ ಇರುತ್ತವೆಂದು ನನಗೆ ಗೊತ್ತುಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ನಿನ್ನ ಹೃದಯದಲ್ಲಿ ಮರೆಮಾಡಿಕೊಂಡಿದ್ದು ಇದನ್ನೇ; ನಿನ್ನ ಹೃದಯದಲ್ಲಿ ನೀನು ರಹಸ್ಯವಾಗಿ ಆಲೋಚಿಸಿದ್ದೂ ಇದನ್ನೇ. ಹೌದು, ನಿನ್ನ ಮನಸ್ಸಿನಲ್ಲಿ ಇದೇ ಇತ್ತೆಂದು ನನಗೆ ಗೊತ್ತಿದೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:13
12 ತಿಳಿವುಗಳ ಹೋಲಿಕೆ  

“ಆದರೆ ದೇವರು ಬದಲಾಗದವರು; ದೇವರನ್ನು ಬದಲಾಯಿಸುವವರು ಯಾರು? ದೇವರು ತಾವು ಬಯಸಿದ್ದನ್ನು ಮಾಡುತ್ತಾರೆ.


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


ಹೀಗೆ ದೇವರು ತಮ್ಮ ನಿತ್ಯ ಉದ್ದೇಶದ ಪ್ರಕಾರ ಇದನ್ನು ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನೆರವೇರಿಸಿದರು.


ಆಹಾ! ದೇವರ ಐಶ್ವರ್ಯ, ಜ್ಞಾನ ಮತ್ತು ವಿವೇಕಗಳು ಎಷ್ಟು ಆಳವಾದವುಗಳು! ದೇವರ ತೀರ್ಮಾನಗಳು ಪರೀಶೀಲಿಸಲು ಅಸಾಧ್ಯವಾದದ್ದು! ದೇವರ ಮಾರ್ಗಗಳನ್ನು ಕಂಡುಹಿಡಿಯುವುದು ಅಪರಿಮಿತವಾದದ್ದು!


ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?


ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.


ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.


ಉತ್ತರದಲ್ಲಿ ಹುಡುಕಿದರೂ ದೇವರನ್ನು ನೋಡಲಾರೆನು; ದಕ್ಷಿಣದೆಡೆಗೆ ತಿರುಗಿಕೊಂಡರೂ ದೇವರು ಕಾಣಿಸುವುದಿಲ್ಲ.


ಅದೇನೆಂದರೆ, ನಾನು ಒಂದು ವೇಳೆ ಪಾಪಮಾಡಿದರೆ, ನೀವು ಅದನ್ನು ಕಂಡುಹಿಡಿದು ನನ್ನ ಅಪರಾಧಕ್ಕಾಗಿ ನನ್ನನ್ನು ದಂಡಿಸದೇ ಬಿಡುವುದಿಲ್ಲ ಎಂಬುದೇ.


ನನಗೆ ನೇಮಿಸಿದ್ದನ್ನು ದೇವರು ಈಡೇರಿಸುತ್ತಾರೆ. ಇಂಥ ಅನೇಕ ಯೋಜನೆಗಳು ದೇವರಲ್ಲಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು