Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:17 - ಕನ್ನಡ ಸಮಕಾಲಿಕ ಅನುವಾದ

17 ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ತರುತ್ತೀರಿ; ನನ್ನ ಮೇಲೆ ಅಧಿಕಬೇಸರಗೊಳ್ಳುತ್ತೀರಿ; ಅಲೆ ಅಲೆಯಾಗಿ ನಿಮ್ಮ ಸೈನ್ಯವು ನನಗೆ ಎದುರಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನನ್ನ ವಿರುದ್ಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವುದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನನಗೆ ವಿರುದ್ಧ ಹೊಸ ಹೊಸ ಸಾಕ್ಷಿಗಳನ್ನು ಬರಮಾಡುವೆ ನನ್ನ ಮೇಲೆ ಹೆಚ್ಚುಹೆಚ್ಚಾಗಿ ಸಿಟ್ಟುಗೊಳ್ಳುವೆ ಅಲೆಅಲೆಯಾಗಿ ಹಗೆಗಳನ್ನು ನನ್ನ ಮೇಲೆ ಧಾಳಿಮಾಡ ಬಿಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನಗೆ ವಿರೋಧವಾಗಿ ಹೊಸ ಹೊಸ ಸಾಕ್ಷಿಗಳನ್ನು ಬರಮಾಡಿ ಹೆಚ್ಚೆಚ್ಚಾಗಿ ನನ್ನ ಮೇಲೆ ಸಿಟ್ಟುಗೊಳ್ಳುವಿ. ಸೈನ್ಯವು ತರಂಗ ತರಂಗವಾಗಿ ನನ್ನ ಮೇಲೆ ಬೀಳುವದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನನ್ನು ದೋಷಿಯೆಂದು ನಿರೂಪಿಸಲು ನಿನ್ನ ಬಳಿಯಲ್ಲಿ ಯಾರಾದರೊಬ್ಬರು ಇದ್ದೇ ಇರುವರು. ನಿನ್ನ ಕೋಪವು ನನಗೆ ವಿರೋಧವಾಗಿ ಹೆಚ್ಚೆಚ್ಚಾಗುವುದು. ನೀನು ನನಗೆ ವಿರೋಧವಾಗಿ ಹೊಸ ಸೈನ್ಯಗಳನ್ನು ತರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:17
9 ತಿಳಿವುಗಳ ಹೋಲಿಕೆ  

ನೀವು ನನ್ನ ಮುಖವೆಲ್ಲಾ ಸುಕ್ಕುಗಳಿಂದ ತುಂಬಿಸಿದ್ದೀರಿ; ನನ್ನ ಬಿಕ್ಕಟ್ಟೇ ನನಗೆ ವಿರೋಧವಾಗಿ ಎದ್ದು ಸಾಕ್ಷಿ ಕೊಡುತ್ತವೆ;


ನಾನು ಪರಿಪೂರ್ಣಳಾಗಿ ಹೊರಟುಹೋದೆನು. ಯೆಹೋವ ದೇವರು ನನ್ನನ್ನು ಏನೂ ಇಲ್ಲದೆ ಬರಮಾಡಿದ್ದಾರೆ. ಯೆಹೋವ ದೇವರು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತರಾದ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವುದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವುದು ಸರಿಯೇ?” ಎಂದಳು.


ಆ ಕಾಲದಲ್ಲಿ, ನಾನು ಯೆರೂಸಲೇಮನ್ನು ದೀಪಗಳಿಂದ ಹುಡುಕಿಬಿಡುವೆನು. ‘ಯೆಹೋವ ದೇವರು ಒಳ್ಳೆಯದನ್ನಾದರೂ ಕೆಟ್ಟದ್ದನ್ನಾದರೂ ಮಾಡುವುದಿಲ್ಲ’ ಎಂದುಕೊಂಡು ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನೂ ದಂಡಿಸುವೆನು.


“ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯಲಾಗುವುದಿಲ್ಲ; ಸೆರೆಗೆ ಹೋಗಲಿಲ್ಲ; ಆದ್ದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.


ಆದಿಯಿಂದ ಸಿಂಹಾಸನಾರೂಢರಾಗಿರುವ ದೇವರು, ಅವರ ಮೊರೆಯನ್ನು ಕೇಳಿ ಅವರನ್ನು ತಗ್ಗಿಸುವರು, ಏಕೆಂದರೆ, ಅವರು ದೇವರಿಗೆ ಭಯಪಡುವುದಿಲ್ಲ. ದೇವರು ಬದಲಾಗುವುದಿಲ್ಲ.


“ಮನುಷ್ಯರಿಗೆ ಭೂಮಿಯಲ್ಲಿ ಕಠಿಣ ದುಡಿತ ಇಲ್ಲವೇ? ಮಾನವನ ದಿನಗಳು ಜೀತದಾಳಿನ ದಿನಗಳ ಹಾಗಲ್ಲವೋ?


ಏಕೆ ನಿಮ್ಮ ಮುಖವನ್ನು ಮರೆಮಾಡುತ್ತೀರಿ? ನನ್ನನ್ನು ನಿಮ್ಮ ಶತ್ರುವಿನ ಹಾಗೆ ಏಕೆ ಭಾವಿಸುತ್ತೀರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು