Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:2 - ಕನ್ನಡ ಸಮಕಾಲಿಕ ಅನುವಾದ

2 ನಾನು ದೇವರಿಗೆ ಹೀಗೆ ಹೇಳುತ್ತೇನೆ: ನನ್ನನ್ನು ಅಪರಾಧಿ ಎಂದು ನಿರ್ಣಯಿಸಬೇಡಿರಿ. ನನ್ನ ಮೇಲೆ ನಿಮಗಿರುವ ಆಪಾದನೆಗಳನ್ನು ನನಗೆ ತಿಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ದೇವರಿಗೆ ಇಂತೆನ್ನುವೆ: ‘ನನ್ನನ್ನು ನಿರ್ಣಯಿಸಬೇಡ ಅಪರಾಧಿಯೆಂದು ನನ್ನ ಮೇಲೆ ನಿನಗಿರುವ ಆಪಾದನೆಯನು ತಿಳಿಸಿಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ದೇವರ ಮುಂದೆ - ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಅನ್ನುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ದೇವರಿಗೆ ಹೀಗೆ ಹೇಳುತ್ತೇನೆ: ‘ನನ್ನನ್ನು ಖಂಡಿಸದೆ ಹೇಳು! ನಾನೇನು ತಪ್ಪುಮಾಡಿರುವೆ? ನನಗೆ ವಿರೋಧವಾಗಿ ನಿನ್ನಲ್ಲಿರುವ ದೂರುಗಳೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:2
20 ತಿಳಿವುಗಳ ಹೋಲಿಕೆ  

ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.


ನಾನು ಈಗಾಗಲೇ ಅಪರಾಧಿ ಎಂದು ನಿರ್ಣಯವಾಗಿರುವಾಗ, ನಾನು ಏಕೆ ವ್ಯರ್ಥವಾಗಿ ಹೋರಾಡಬೇಕು?


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಆದರೆ ಸಾರ್ವಭೌಮ ಯೆಹೋವ ದೇವರೇ, ನಿಮ್ಮ ಹೆಸರಿಗೋಸ್ಕರ ನನಗೆ ಸಹಾಯಮಾಡಿರಿ. ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನ್ನನ್ನು ಬಿಡಿಸಿರಿ.


ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ, ನನ್ನ ತಿರುಗಿ ಬೀಳುವಿಕೆಗಳನ್ನೂ ಜ್ಞಾಪಕ ಮಾಡಿಕೊಳ್ಳಬೇಡಿರಿ. ನೀವು ಒಳ್ಳೆಯವರಾಗಿರುವುದರಿಂದ ನಿಮ್ಮ ಪ್ರೀತಿಯ ಪ್ರಕಾರ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ.


ದೇವರ ಸಂಗಡ ವ್ಯಾಜ್ಯವಾಡಲು ಮನುಷ್ಯನು ಬಯಸಿದರೂ, ದೇವರ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಕೊಡಲಾರನು.


“ಸರ್ವಶಕ್ತರಾದ ದೇವರೊಂದಿಗೇ ತಪ್ಪು ಕಂಡುಹಿಡಿಯುವ ನೀನು, ದೇವರಿಗೇ ಪಾಠ ಕಲಿಸಿಕೊಡುವೆಯಾ? ದೇವರ ಮೇಲೆಯೇ ಆರೋಪಿಸುವ ನೀನು ಈಗ ಉತ್ತರಕೊಡು!”


ಮನುಷ್ಯರನ್ನು ಕಾಯುವವರೇ, ನಾನು ಪಾಪಮಾಡಿದ್ದರೆ, ನಾವು ಮಾಡುವ ಪ್ರತಿಯೊಂದನ್ನೂ ನೋಡುವವರೇ, ನಾನು ನಿಮಗೆ ಏನು ಮಾಡಿದೆ? ನಾನು ನಿಮಗೆ ಭಾರವಾಗಿದ್ದೇನೋ? ನನ್ನನ್ನು ನಿಮ್ಮ ಗುರಿಯಾಗಿ ಇಟ್ಟುಕೊಳ್ಳುವುದು ಏಕೆ?


ನಾನು ಎಷ್ಟೋ ಅಕ್ರಮಗಳನ್ನೂ, ಪಾಪಗಳನ್ನೂ ಮಾಡಿದ್ದೇನೆ. ನನ್ನ ಅಪರಾಧವನ್ನೂ, ಪಾಪವನ್ನೂ ನನಗೆ ತೋರಿಸಿಕೊಡಿರಿ.


“ನಾನೇನು ಮನುಷ್ಯನ ವಿಷಯವಾಗಿ ದೂರು ಹೇಳುತ್ತಿದ್ದೇನೋ? ನಾನೇಕೆ ಬೇಸರಪಡಬಾರದು.


ದೇವರು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ಕೊಡಲಿಲ್ಲ ಎಂದು ನೀನು ದೇವರೊಂದಿಗೆ ವ್ಯಾಜ್ಯವಾಡುವುದೇಕೆ?


ಯೆಹೋವ ದೇವರೇ, ನಾನು ಕೂಗುವ ಸ್ವರವನ್ನು ಕೇಳಿರಿ; ನನ್ನನ್ನು ಕರುಣಿಸಿ ಉತ್ತರವನ್ನು ಕೊಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು