ಯೋಬ 10:3 - ಕನ್ನಡ ಸಮಕಾಲಿಕ ಅನುವಾದ3 ದೇವರೇ, ನಿಮ್ಮ ಕೈಕೃತಿಯಾಗಿರುವ ನನ್ನನ್ನು ಜಜ್ಜುವುದೂ ನಿಮಗೆ ಮೆಚ್ಚಿಕೆಯೋ? ನೀವು ನನ್ನನ್ನು ಅಲಕ್ಷ್ಯ ಮಾಡುವಿರೋ? ನೀವು ದುಷ್ಟರ ಯೋಜನೆಯನ್ನು ಮೆಚ್ಚುವಿರೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ, ಬಾಧಿಸುವುದು ನಿನಗೆ ಸಂತೋಷವೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನೀನು ದುಷ್ಟರ ಆಲೋಚನೆಗೆ ಪ್ರಸನ್ನನಾಗಿ ನಿನ್ನ ಕೈಕಷ್ಟದಿಂದ ಸೃಷ್ಟಿಸಿದ್ದನ್ನು ತಿರಸ್ಕರಿಸಿ ಬಾಧಿಸುವದು ನಿನಗೆ ಸಂತೋಷವೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದೇವರೇ, ನನ್ನನ್ನು ನೋಯಿಸುವುದು ನಿನಗೆ ಸಂತೋಷವೇ? ನಿನ್ನ ಸೃಷ್ಟಿಯ ಬಗ್ಗೆ ನೀನು ಚಿಂತಿಸದಂತೆ ತೋರುತ್ತಿದೆ. ದುಷ್ಟರ ಆಲೋಚನೆಗಳಲ್ಲಿ ನಿನಗೆ ಸಂತೋಷವೇ? ಅಧ್ಯಾಯವನ್ನು ನೋಡಿ |