Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 10:7 - ಕನ್ನಡ ಸಮಕಾಲಿಕ ಅನುವಾದ

7 ನಾನು ಅಪರಾಧಿಯಲ್ಲವೆಂದು ನಿಮಗೆ ಗೊತ್ತಿದೆ, ನಿಮ್ಮ ಕೈಯಿಂದ ತಪ್ಪಿಸುವವರು ಯಾರೂ ಇಲ್ಲವೆಂದೂ ನಿಮಗೆ ಗೊತ್ತಿದೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಅಪರಾಧಿಯಲ್ಲವೆಂದು ನಿನಗೆ ತಿಳಿಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ಅಪರಾಧಿಯಲ್ಲವೆಂದು ನಿನಗೆ ಗೊತ್ತಾಯಿತಲ್ಲಾ; ನಿನ್ನ ಕೈಯೊಳಗಿಂದ ಬಿಡಿಸತಕ್ಕವರು ಯಾರೂ ಇಲ್ಲವಷ್ಟೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆದರೆ ನಾನು ನಿರಪರಾಧಿಯೆಂದು ನಿನಗೆ ಗೊತ್ತದೆ. ಆದರೆ ಯಾರೂ ನನ್ನನ್ನು ನಿನ್ನ ಶಕ್ತಿಯಿಂದ ಬಿಡಿಸಲಾರರು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 10:7
35 ತಿಳಿವುಗಳ ಹೋಲಿಕೆ  

“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


ನಂಬುವವರಾದ ನಿಮ್ಮೊಂದಿಗೆ ನಾವು ಎಷ್ಟೋ ಪವಿತ್ರರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿ.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.


ಈಗ ಅವಳ ತುಚ್ಚತನವನ್ನು, ಅವಳ ಪ್ರೇಮಿಗಳ ಕಣ್ಣುಗಳ ಮುಂದೆ ಬಯಲು ಪಡಿಸುವೆನು. ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.


ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು.


“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.


ನೀವು ನನ್ನ ಹೃದಯವನ್ನು ಶೋಧಿಸಿದರೂ, ನೀವು ರಾತ್ರಿಯಲ್ಲಿ ನನ್ನನ್ನು ಪರೀಕ್ಷಿಸಿ ವಿಚಾರಿಸಿದರೂ, ನಾನು ಕೆಟ್ಟಯೋಜನೆ ಮಾಡಿಕೊಳ್ಳಲಿಲ್ಲವೆಂದು ನೀವು ಕಂಡುಕೊಳ್ಳುವಿರಿ; ನನ್ನ ಬಾಯಿಯೂ ಅತಿಕ್ರಮಿಸುವುದಿಲ್ಲವೆಂದು ನಾನು ತೀರ್ಮಾನಿಸಿಕೊಂಡಿದ್ದೇನೆ.


ನನ್ನ ಯೆಹೋವ ದೇವರೇ, ನಾನು ಅನ್ಯಾಯ ಮಾಡಿದ್ದರೆ, ನನ್ನ ಕೈಗಳಲ್ಲಿ ಅಪರಾಧವಿದ್ದರೆ,


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


ಯೆಹೋವ ದೇವರು ಯೋಬನ ಸಂಗಡ ಮಾತಾಡಿದ ತರುವಾಯ, ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ನನಗೆ ಕೋಪವಿದೆ. ಏಕೆಂದರೆ ನೀವು ನನ್ನ ದಾಸನಾದ ಯೋಬನಂತೆ ನೀವು ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ.


“ನನ್ನ ಕರೆಗೆ ಕಿವಿಗೊಡತಕ್ಕವರು ಒಬ್ಬರು ಈಗ ಇದ್ದರೆ ಎಷ್ಟೋ ಲೇಸು! ಸರ್ವಶಕ್ತರು ನನಗೆ ಉತ್ತರಕೊಡಲಿ; ನನ್ನ ವಿರೋಧಿಯು ನನ್ನ ಆಪಾದನಾ ಪತ್ರವನ್ನು ಬರೆದು ಕೊಡಲಿ.


ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡುತ್ತಿದ್ದೆನು? ದೇವರು ವಿಚಾರಿಸುವಾಗ, ನಾನು ಅವರಿಗೆ ಏನು ಉತ್ತರಕೊಡುತ್ತಿದ್ದೆನು?


ದೇವರು ನ್ಯಾಯದ ತಕ್ಕಡಿಯಲ್ಲಿ ನನ್ನನ್ನು ತೂಗಿ ನೋಡಲಿ; ನಾನು ನಿರ್ದೋಷಿ ಎಂದು ದೇವರು ತಿಳಿದುಕೊಳ್ಳಲಿ.


ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.


“ದೇವಾದಿದೇವರಾದ ಯೆಹೋವ ದೇವರು ಇದಕ್ಕೆ ಸಾಕ್ಷಿ, ನಾವು ದೇವಾದಿದೇವರಾದ ಯೆಹೋವ ದೇವರಿಗೆ ವಿರುದ್ಧ ಪಾಪಮಾಡಿದವರಾಗಿದ್ದರೆ ಅಥವಾ ಅವಿಧೇಯರಾಗಿದ್ದರೆ, ಆ ದೇವರು ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.


ದೇವರು ತೆಗೆದುಕೊಂಡರೆ, ಅವರಿಗೆ ಅಡ್ಡಿ ಮಾಡುವವರು ಯಾರು? ದೇವರನ್ನು, ‘ನೀವು ಏನು ಮಾಡುತ್ತೀರಿ?’ ಎಂದು ಕೇಳುವವರ‍್ಯಾರು.


“ನಾನು ನಿರ್ದೋಷಿಯೇ ಹೌದು, ನನ್ನ ಬಗ್ಗೆ ನನಗೆ ಚಿಂತೆ ಇಲ್ಲ; ನನ್ನ ಬಾಳನ್ನೇ ತಿರಸ್ಕಾರ ಮಾಡುತ್ತೇನೆ.


ಇದೆಲ್ಲಾ ಒಂದೇ ವಿಷಯ; ಆದ್ದರಿಂದ ನಾನು ಇದನ್ನು ಹೇಳುತ್ತೇನೆ: ‘ನಿರ್ದೋಷಿಯನ್ನೂ, ಕೆಟ್ಟವನನ್ನೂ ದೇವರು ದಂಡಿಸುತ್ತಾರೆ.’


ನಾನು ಅಪರಾಧಿಯಾಗಿದ್ದರೆ ನನಗೆ ಕಷ್ಟ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತಲಾರೆ; ಏಕೆಂದರೆ, ನಾಚಿಕೆಯಿಂದ ನಾನು ತುಂಬಿದ್ದೇನೆ, ನಾನು ಬಾಧೆಯಿಂದ ಮುಳುಗಿಹೋಗಿದ್ದೇನೆ.


ಏಕೆಂದರೆ ನೀನು, ‘ನನ್ನ ನಂಬಿಕೆ ತಪ್ಪಿಲ್ಲದ್ದು, ನಿಮ್ಮ ದೃಷ್ಟಿಯಲ್ಲಿ ನಾನು ಶುದ್ಧನಾಗಿದ್ದೇನೆ,’ ಎಂದು ದೇವರಿಗೆ ಹೇಳಿದ್ದೀ.


ಇಗೋ, ನನ್ನ ನ್ಯಾಯವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯ ಹೊಂದುವುದು ನನಗೆ ಗೊತ್ತೇ ಇದೆ.


ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು.


ಯೋಬನು ತಾನು ನೀತಿವಂತನೆಂದು ಸಾಧಿಸಿದ್ದನು. ಆದ್ದರಿಂದ ಆ ಮೂರು ಸ್ನೇಹಿತರು ಯೋಬನಿಗೆ ಉತ್ತರ ಕೊಡುವುದನ್ನು ನಿಲ್ಲಸಿಬಿಟ್ಟರು.


‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ; ನಾನು ನಿರ್ದೋಷಿ, ನನ್ನಲ್ಲಿ ಏನೂ ಪಾಪವಿಲ್ಲ.


“ನನ್ನ ನ್ಯಾಯವನ್ನು ನೀನು ಅಪಕೀರ್ತಿ ಮಾಡುತ್ತೀಯೋ? ನೀನು ನಿನ್ನ ನ್ಯಾಯವನ್ನು ಸ್ಥಾಪಿಸಲು ನನ್ನನ್ನು ಅಪರಾಧಿ ಎಂದು ನಿರ್ಣಯಿಸುತ್ತೀಯೋ?


ನನ್ನ ಪಾದಗಳು ದೇವರ ಹೆಜ್ಜೆಯ ಜಾಡಿನಲ್ಲಿ ನಿಕಟವಾಗಿ ಅನುಸರಿಸಿವೆ; ದೇವರ ಮಾರ್ಗವನ್ನು ಬಿಟ್ಟು ನಾನು ತೊಲಗದಂತೆ ನೋಡಿಕೊಂಡೆನು.


ಹೌದು, ಅಂದಿನಿಂದಲೇ ನಾನಿದ್ದೇನೆ. ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?”


ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು