Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 13:16 - ಕನ್ನಡ ಸಮಕಾಲಿಕ ಅನುವಾದ

16 ಇದೇ ನನ್ನ ಬಿಡುಗಡೆಗೆ ಕಾರಣವಾಗಿರುವುದು; ಭಕ್ತಿಹೀನರು ದೇವರ ಮುಂದೆ ಬರಲು ಧೈರ್ಯಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಭ್ರಷ್ಟನು ಆತನ ಮುಂದೆ ಬರುವುದಿಲ್ಲವೆಂಬುದೇ, ನಾನು ರಕ್ಷಣೆಯನ್ನು ಹೊಂದುವೆನೆಂಬುವುದಕ್ಕೆ ಆಧಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಭಕ್ತಿಹೀನನು ಆತನ ಮುಂದೆ ಬರಲಾರ ನಾನು ಉದ್ಧಾರವಾಗುವೆನೆಂಬುದಕ್ಕೆ ಇದೇ ಆಧಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಭ್ರಷ್ಟನು ಆತನ ಮುಂದೆ ಬರುವದಿಲ್ಲವೆಂಬದೇ ನಾನು ರಕ್ಷಣೆಯನ್ನು ಹೊಂದುವೆನೆಂಬದಕ್ಕೆ ಆಧಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ನಿರಪರಾಧಿಯೆಂದು ಆಗ ರುಜುವಾತಾಗುವುದು. ಯಾಕೆಂದರೆ, ದೇವರನ್ನು ಮುಖಾಮುಖಿಯಾಗಿ ಸಂಧಿಸಲು ದುಷ್ಟನಿಗೆ ಸಾಧ್ಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 13:16
15 ತಿಳಿವುಗಳ ಹೋಲಿಕೆ  

ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”


ನಿಮಗೆ ಕೃತಜ್ಞತಾವಂದನೆ ಸಲ್ಲಿಸುವೆನು; ಏಕೆಂದರೆ ನನಗೆ ನೀವು ಉತ್ತರಕೊಟ್ಟು, ನನಗೆ ರಕ್ಷಣೆಯಾದಿರಿ.


ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ: “ ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ ”


ನಿಶ್ಚಯವಾಗಿ ಗುಡ್ಡಗಳಿಂದಲೂ, ಬೆಟ್ಟಗಳ ಸಮೂಹದಿಂದಲೂ ನಮಗೆ ಮೋಸವಾಗಿದೆ. ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವ ದೇವರಲ್ಲಿಯೇ ಇದೆ.


ನನ್ನ ಬಲವೂ, ಬೆಂಬಲವೂ ಯೆಹೋವ ದೇವರೇ; ಅವರೇ ನನಗೆ ರಕ್ಷಣೆಯಾದರು.


ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ. ನಾನು ಯಾರಿಗೂ ಭಯಪಡೆನು? ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ. ನಾನು ಯಾರಿಗೂ ಹೆದರೆನು?


“ಹೃದಯದಲ್ಲಿ ಭಕ್ತಿಹೀನರಾಗಿರುವವರು ಕೋಪವನ್ನು ಕೂಡಿಸುವರು; ದೇವರು ಅವರನ್ನು ಬಂಧಿಸಿದರೂ, ಅವರು ದೇವರಿಗೆ ಮೊರೆ ಇಡುವುದಿಲ್ಲ.


ದೇವರನ್ನು ಮರೆಯುವವರೆಲ್ಲರ ದಾರಿ ಹಾಗೆಯೇ; ಭಕ್ತಿಹೀನರ ನಿರೀಕ್ಷೆಯು ನಾಶವಾಗುವುದು.


“ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ; ಅವರು ನನ್ನ ರಕ್ಷಣೆಯಾದರು; ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು; ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು.


ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ ಮತ್ತು ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ.


ದೇವರ ಸನ್ನಿಧಿಯಲ್ಲಿ ಯಥಾರ್ಥವಂತನು ತಾನು ನಿರಪರಾಧಿ ಎಂದು ದೃಢಪಡಿಸಲು ಸಾಧ್ಯ; ಅಲ್ಲಿ ನನಗೆ ನನ್ನ ನ್ಯಾಯಾಧಿಪತಿಯಿಂದ ಶಾಶ್ವತವಾಗಿ ಬಿಡುಗಡೆಯಾಗುವುದು.


“ಏಕೆಂದರೆ ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಇರುತ್ತದೆ; ದೇವರು ಮನುಷ್ಯನ ಪ್ರತಿಯೊಂದು ಹೆಜ್ಜೆಯನ್ನೂ ನೋಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು