Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:14 - ಕನ್ನಡ ಸಮಕಾಲಿಕ ಅನುವಾದ

14 ಒಬ್ಬ ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ಆದರೂ ನನಗೆ ನೇಮಕ ಮಾಡಿದ ಪರಿಶ್ರಮದ ದಿನವೆಲ್ಲಾ, ನನಗೆ ಬಿಡುಗಡೆಯಾಗುವವರೆಗೆ ನಾನು ಕಾದುಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಒಬ್ಬ ಮನುಷ್ಯನು ಸತ್ತು ಪುನಃ ಬದುಕುವನೇ? ಹಾಗಾಗುವುದಾದರೆ ನನಗೆ ಬಿಡುಗಡೆಯಾಗುವವರೆಗೆ, ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸತ್ತಮೇಲೆ ಮನುಜ ಮರಳಿ ಬದುಕುತ್ತಾನೆಯೇ? ಬದುಕುವುದಾದರೆ ಮುಕ್ತಿಹೊಂದುವವರೆಗೆ ನನ್ನ ವಾಯಿದೆಯ ದಿನವೆಲ್ಲ ನಾ ಕಾದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಬ್ಬ ಮನುಷ್ಯನು ಸತ್ತು ಪುನಃ ಬದುಕಾನೇ? ಹಾಗಾಗುವದಾದರೆ ನನಗೆ ಬಿಡುಗಡೆಯಾಗುವವರೆಗೆ ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸತ್ತ ಮನುಷ್ಯನು ಮತ್ತೆ ಬದುಕುವನೇ? ಬದುಕುವುದಾಗಿದ್ದರೆ, ನನಗೆ ಬಿಡುಗಡೆಯಾಗುವ ತನಕ ನನ್ನ ಎಲ್ಲಾ ಕಷ್ಟದ ದಿನಗಳಲ್ಲಿಯೂ ಕಾದುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:14
24 ತಿಳಿವುಗಳ ಹೋಲಿಕೆ  

ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ನೀವು ಪರಿಗಣಿಸುವುದು ಏಕೆ?


“ಮನುಷ್ಯರಿಗೆ ಭೂಮಿಯಲ್ಲಿ ಕಠಿಣ ದುಡಿತ ಇಲ್ಲವೇ? ಮಾನವನ ದಿನಗಳು ಜೀತದಾಳಿನ ದಿನಗಳ ಹಾಗಲ್ಲವೋ?


ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು.


ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.


ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು; ಅವರು ನಿನ್ನ ಹೃದಯವನ್ನು ದೃಢಪಡಿಸುವರು; ಯೆಹೋವ ದೇವರಿಗಾಗಿ ಕಾದಿರು.


ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು.


ತರುವಾಯ ಯೋಬನು ನೂರ ನಾಲ್ವತ್ತು ವರ್ಷ ಬಾಳಿದನು. ನಾಲ್ಕನೆಯ ತಲೆಮಾರು ತನಕ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಕಂಡನು.


ಮನುಷ್ಯನ ದಿನಗಳು ಇಷ್ಟೇ ಎಂದು ತೀರ್ಮಾನವಾಗಿದೆ; ಅವನ ತಿಂಗಳುಗಳ ಲೆಕ್ಕ ದೇವರೇ ನಿಮ್ಮ ಬಳಿಯಲ್ಲಿ ಇದೆ; ಅವನು ದಾಟಲಾರದ ಹಾಗೆ ಅವನಿಗೆ ಮೇರೆಗಳನ್ನು ನೇಮಿಸಿದ್ದೀರಿ.


“ದೇವರೇ, ನೀವು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿಮ್ಮ ಶಿಕ್ಷೆ ಮುಗಿಯುವವರೆಗೂ ನನ್ನನ್ನು ಅಡಗಿಸಿರಿ! ನೀವು ನನಗೆ ಒಂದು ಕಾಲವನ್ನು ನಿಗದಿಪಡಿಸಿ, ಅನಂತರ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು!


ದೇವರೇ, ನೀವು ನನ್ನನ್ನು ಕರೆಯುವಿರಿ, ನಾನು ನಿಮಗೆ ಉತ್ತರಕೊಡುವೆನು; ನಿಮ್ಮ ಈ ಸೃಷ್ಟಿಯ ಮೇಲೆ ನೀವು ಹಂಬಲಿಸುವಿರಿ.


ಆದರೆ ಬರ್ಜಿಲ್ಲೈಯು ಅರಸನಿಗೆ, “ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?


ಗೊಬ್ಬರದ ಹಾಗೆ ಶಾಶ್ವತವಾಗಿ ಅವನು ನಾಶವಾಗುವನು; ಅವನನ್ನು ನೋಡಿದವರು, ‘ಅವನೆಲ್ಲಿ?’ ಎಂದು ಕೇಳುವರು.


ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು. ಎಲ್ಲವೂ ಮಣ್ಣಿಗೆ ಸೇರುತ್ತವೆ.


ಯಾಕೋಬಿನ ವಂಶದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವ ದೇವರಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು. ನಾನು ದೇವರ ಮೇಲೆ ಭರವಸೆ ಇಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು