Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:16 - ಕನ್ನಡ ಸಮಕಾಲಿಕ ಅನುವಾದ

16 ಆಗ ನೀವು ನನ್ನ ಹೆಜ್ಜೆಗಳನ್ನು ಲೆಕ್ಕಿಸುವಿರಿ; ಆದರೆ ನೀವು ನನ್ನ ಪಾಪದ ಬಗ್ಗೆ ದಾಖಲೆ ಇಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ, ನನ್ನ ಪಾಪದ ಮೇಲೆ ಕಾವಲಾಗಿದ್ದೀಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ನನ್ನ ಹೆಜ್ಜೆಹೆಜ್ಜೆಗಳನು ನೀ ಲೆಕ್ಕಿಸುವೆ ನನ್ನ ಪಾಪ ಹುಡುಕಲು ನೀ ಕಾವಲು ಇಡಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈಗ ನೀನು ನನ್ನ ಹೆಜ್ಜೆಗಳನ್ನು ಲೆಕ್ಕಿಸಿ ನನ್ನ ಪಾಪದ ಮೇಲೆ ಕಾವಲಾಗಿದ್ದೀಯಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನಿಡುವ ಪ್ರತಿ ಹೆಜ್ಜೆಯನ್ನೂ ನೀನು ಗಮನಿಸುವೆ. ಆದರೆ ನೀನು ನನ್ನ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:16
10 ತಿಳಿವುಗಳ ಹೋಲಿಕೆ  

ಏಕೆಂದರೆ ನನ್ನ ತಪ್ಪುಗಳನ್ನು ಹುಡುಕುವ ನಿಮಗೆ ಗೊತ್ತಿದೆ; ಹೌದು, ನನ್ನ ಪಾಪವನ್ನು ವಿಚಾರಿಸುವ ನಿಮಗೇ ಗೊತ್ತಿದೆ.


ದೇವರು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಾರಲ್ಲವೆ?


ನಿನ್ನ ಮಾರ್ಗಗಳು ಯೆಹೋವ ದೇವರ ಮುಂದೆಯೇ ಇವೆ. ಅವರು ನಿನ್ನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾರೆ.


“ಏಕೆಂದರೆ ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಇರುತ್ತದೆ; ದೇವರು ಮನುಷ್ಯನ ಪ್ರತಿಯೊಂದು ಹೆಜ್ಜೆಯನ್ನೂ ನೋಡುತ್ತಾರೆ.


ನೀವು ನಿಮ್ಮ ಯೋಜನೆಯಲ್ಲಿ ದೊಡ್ಡವರು, ಕ್ರಿಯೆಯಲ್ಲಿ ಬಲಿಷ್ಠರು. ನಿಮ್ಮ ಕಣ್ಣುಗಳು ಮನುಷ್ಯರ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರವಾಗಿಯೂ ಕೊಡುವ ಹಾಗೆ ತೆರೆದಿವೆ.


ದೇವರು ನನ್ನ ಕಾಲುಗಳಿಗೆ ಕೋಳ ಹಾಕಿದ್ದಾರೆ; ದೇವರು ನನ್ನ ಎಲ್ಲಾ ಹಾದಿಗಳನ್ನೂ ಪರಿಶೋಧಿಸುತ್ತಿದ್ದಾರೆ.’


ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ. ನನ್ನ ಪ್ರಾಣ ತೆಗೆಯಲು ಕುತೂಹಲದಿಂದ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.


ನನ್ನ ಪಾದಗಳನ್ನು ಸಂಕೋಲೆಗಳಿಂದ ಕಟ್ಟಿಹಾಕಿದ್ದೀರಿ, ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕಿದ್ದೀರಿ; ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡುತ್ತೀರಿ.


ಅದೇನೆಂದರೆ, ನಾನು ಒಂದು ವೇಳೆ ಪಾಪಮಾಡಿದರೆ, ನೀವು ಅದನ್ನು ಕಂಡುಹಿಡಿದು ನನ್ನ ಅಪರಾಧಕ್ಕಾಗಿ ನನ್ನನ್ನು ದಂಡಿಸದೇ ಬಿಡುವುದಿಲ್ಲ ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು