ಯೋಬ 14:21 - ಕನ್ನಡ ಸಮಕಾಲಿಕ ಅನುವಾದ21 ಮಕ್ಕಳು ಘನತೆಯನ್ನು ಹೊಂದಿದರೆ, ಅದು ಸತ್ತವರಿಗೆ ತಿಳಿಯುವುದಿಲ್ಲ; ಅವರ ಮಕ್ಕಳು ಕಡಿಮೆ ಸ್ಥಿತಿಗೆ ಬಂದರೆ ಸಹ, ಅದನ್ನು ಸತ್ತವರು ಗ್ರಹಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವನ ಮಕ್ಕಳು ಘನತೆಯನ್ನು ಹೊಂದುವುದು ಅವನಿಗೆ ತಿಳಿಯುವುದಿಲ್ಲ. ಅವರು ಅಧೋಗತಿಗೆ ಗುರಿಯಾದರೂ ಅವನಿಗೆ ಗೋಚರವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವನ ಮಕ್ಕಳು ಪ್ರಗತಿಹೊಂದಿದರೂ ಅವನಿಗೆ ತಿಳಿಯದು ಅವರು ಅಧೋಗತಿಗೆ ಇಳಿದರೂ ಅವನಿಗೆ ಗೋಚರವಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವನ ಮಕ್ಕಳು ಘನತೆಯನ್ನು ಹೊಂದುವದು ಅವನಿಗೆ ತಿಳಿಯುವದಿಲ್ಲ. ಅವರು ಕುಂದಿಹೋಗುವಾಗಲೂ ಅವರ ಸ್ಥಿತಿಯು ಅವನಿಗೆ ಗೋಚರವಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವನ ಮಕ್ಕಳಿಗೆ ಸನ್ಮಾನವಾದರೂ ಅವನಿಗೆ ತಿಳಿಯುವುದಿಲ್ಲ; ಅವರಿಗೆ ಅವಮಾನವಾದರೂ ಅವನಿಗೆ ಅದರ ಅರಿವೇ ಇರುವುದಿಲ್ಲ. ಅಧ್ಯಾಯವನ್ನು ನೋಡಿ |