Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 14:7 - ಕನ್ನಡ ಸಮಕಾಲಿಕ ಅನುವಾದ

7 “ಮರಕ್ಕೆ ಸಹ ಒಂದು ನಿರೀಕ್ಷೆ ಇದೆ: ಅದೇನೆಂದರೆ, ಮರವನ್ನು ಕಡಿದು ಹಾಕಿದರೂ ತಾನು ಮತ್ತೆ ಚಿಗುರುವೆನೆಂಬ ನಿರೀಕ್ಷೆ ಅದಕ್ಕಿದೆ; ಚಿಗುರುವುದನ್ನು ಆ ಮರವು ನಿಲ್ಲಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಕಡಿದ ಮರವೂ, ತಾನು ಮೊಳೆಯುವುದನ್ನು ನಿಲ್ಲಿಸದೆ, ಮತ್ತೆ ಚಿಗುರುವೆನೆಂದು ನಿರೀಕ್ಷಿಸುತ್ತದಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮತ್ತೆ ಮೊಳೆಯುವೆನೆಂಬ, ಮರಳಿ ಚಿಗುರುವೆನೆಂಬ ನಂಬಿಕೆಯಿಂದಿದೆ ಅಲ್ಲವೆ ಕಡಿದ ವಟವೃಕ್ಷ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕಡಿದ ಮರವೂ ತಾನು ಮೊಳೆಯುವದನ್ನು ನಿಲ್ಲಿಸದೆ ಮತ್ತೆ ಚಿಗುರೇನೆಂದು ನಿರೀಕ್ಷಿಸುತ್ತದಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಮರಕ್ಕೆ ನಿರೀಕ್ಷೆಯಿದೆ. ಕಡಿದುಹಾಕಲ್ಪಟ್ಟರೂ ಅದು ಮತ್ತೆ ಚಿಗುರಬಹುದು; ಹೊಸ ಕವಲುಗಳನ್ನು ಮೊಳೆಯಿಸುತ್ತಲೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 14:7
10 ತಿಳಿವುಗಳ ಹೋಲಿಕೆ  

ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು. ಇಸ್ರಾಯೇಲು ಹೂ ಅರಳಿ ಚಿಗುರುವುದು. ಭೂಲೋಕವನ್ನೆಲ್ಲಾ ಫಲದಿಂದ ತುಂಬಿಸುವನು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು.


ಒಬ್ಬ ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ಆದರೂ ನನಗೆ ನೇಮಕ ಮಾಡಿದ ಪರಿಶ್ರಮದ ದಿನವೆಲ್ಲಾ, ನನಗೆ ಬಿಡುಗಡೆಯಾಗುವವರೆಗೆ ನಾನು ಕಾದುಕೊಂಡಿರುವೆನು.


ನನ್ನ ಸುತ್ತಲೂ ದಾಳಿಯಾಗಿದ್ದರಿಂದ, ನಾನು ಕ್ಷಯಿಸುತ್ತಿದ್ದೇನೆ; ಮರವನ್ನು ಕೀಳುವ ಹಾಗೆ ದೇವರು ನನ್ನ ನಿರೀಕ್ಷೆಯನ್ನು ಕಿತ್ತುಹಾಕಿದ್ದಾರೆ.


ಆದರೆ ಅದರ ಬುಡವೂ, ಬೇರೂ, ಕಬ್ಬಿಣ, ಕಂಚಿನ ಕಟ್ಟುಳ್ಳದ್ದಾಗಿ ನೆಲದಲ್ಲಿ ಹೊಲದ ಹುಲ್ಲಿನಲ್ಲಿ ಇರಲಿ. “ ‘ಅವನು ಆಕಾಶದ ಮಂಜಿನಿಂದ ತೇವವಾಗಲಿ, ಭೂಮಿಯ ಗಿಡಗಳ ಮಧ್ಯದಲ್ಲಿರುವ ಮೃಗಗಳೊಂದಿಗೆ ಅವನು ವಾಸಿಸಲಿ.


ಆದ್ದರಿಂದ ಅವನು ವಿಶ್ರಾಂತಿ ಪಡೆಯಲೆಂದು ನಿಮ್ಮ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸಿಬಿಡಿರಿ; ಅವನು ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.


ಅದರ ಬೇರು ಭೂಮಿಯಲ್ಲಿ ಹಳೆಯದಾದರೂ, ನೆಲದಲ್ಲಿ ಅದರ ಬುಡ ಸತ್ತಿದ್ದರೂ,


ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”


ಅದರ ಎಲೆಗಳು ಅಂದವಾಗಿದ್ದವು. ಅದರ ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರವಿತ್ತು. ಕಾಡುಮೃಗಗಳಿಗೆ ಅದರ ಕೆಳಗೆ ನೆರಳಲ್ಲಿ ಆಶ್ರಯ ದೊರಕುತ್ತಿತ್ತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು. ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ದೊರಕುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು