Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:22 - ಕನ್ನಡ ಸಮಕಾಲಿಕ ಅನುವಾದ

22 ಕತ್ತಲೆಯೊಳಗಿಂದ ಪಾರಾಗುತ್ತೇನೆಂದು ದುಷ್ಟನು ನಂಬುವುದಿಲ್ಲ; ಅವನ ಖಡ್ಗವು ಅವನಿಗಾಗಿ ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕತ್ತಲೊಳಗಿಂದ ತಾನು ಹಿಂದಿರುಗುತ್ತೇನೆಂದು ಅವನು ನಂಬುವುದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕತ್ತಲಿಂದ ಹಿಂದಿರುಗುವ ನಂಬಿಕೆ ಅವನಿಗಿಲ್ಲ ಕತ್ತಿ ತನಗಾಗಿ ಕಾದಿದೆಯೆಂಬುದರಲ್ಲಿ ಸಂದೇಹವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕತ್ತಲೊಳಗಿಂದ ತಾನು ಹಿಂದಿರುಗುವೆನೆಂಬ ನಂಬಿಕೆಯಿಲ್ಲದೆ ಕತ್ತಿಯು ತನಗಾಗಿ ಕಾದಿದೆ ಎಂಬದಾಗಿಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದುಷ್ಟನಿಗೆ ಕತ್ತಲೆಯಿಂದ ಪಾರಾಗುತ್ತೇನೆ ಎಂಬ ನಿರೀಕ್ಷೆಯೇ ಇಲ್ಲ. ಅವನನ್ನು ಕೊಲ್ಲಲು ಕತ್ತಿಯು ಎಲ್ಲೋ ಕಾದುಕೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:22
12 ತಿಳಿವುಗಳ ಹೋಲಿಕೆ  

ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು.


ಅವರ ಮಕ್ಕಳು ಹೆಚ್ಚಿದರೂ ಖಡ್ಗಕ್ಕೆ ಗುರಿಯಾಗುವರು; ಅವರ ಸಂತತಿಯವರಿಗೆ ಆಹಾರದ ಕೊರತೆ ಇರುವುದು.


ನೀವು ಖಡ್ಗಕ್ಕೆ ಭಯಪಡಬೇಕಾಗುತ್ತದೆ; ಏಕೆಂದರೆ, ಕ್ರೋಧವು ದಂಡನೆಯನ್ನು ಖಡ್ಗದಿಂದ ತರುವುದು. ಆಗ ನ್ಯಾಯತೀರ್ಪು ಉಂಟೆಂದು ನಿಮಗೆ ತಿಳಿಯುವುದು.”


ನಾನು ಕರೆಯಲು ದೇವರು ನನಗೆ ಉತ್ತರ ಕೊಟ್ಟರೂ, ನನ್ನ ವಿಜ್ಞಾಪನೆಗೆ ದೇವರು ಕಿವಿಗೊಡುವರೆಂದು ನಾನು ನಂಬುತ್ತಿರಲಿಲ್ಲ.


“ನಾನು ನಿರೀಕ್ಷೆಯಿಂದಿರಲು, ನನಗೆ ಶಕ್ತಿ ಎಲ್ಲಿದೆ? ನಾನು ಸಹನೆಯಿಂದಿರಲು, ನನಗೆ ಭವಿಷ್ಯ ಏನಿದೆ?


ಎಲೀಷನು ಅವರೊಡನೆ ಮಾತನಾಡುತ್ತಿರುವಾಗಲೇ ಆ ದೂತನೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವ ದೇವರಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಅವರನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.


ಅವನು ಆಹಾರ ಎಲ್ಲಿ ಎಂದು ರಣಹದ್ದಿನ ಹಾಗೆ ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.


ಕತ್ತಲೆಯೊಳಗಿಂದ ಅವನು ಪಾರಾಗುವದಿಲ್ಲ; ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು; ದೇವರ ಬಾಯಿಯ ಶ್ವಾಸದಿಂದ ಅವನು ತೊಲಗಿ ಹೋಗುವನು.


ಮನುಷ್ಯನ ಪ್ರಾಣವನ್ನು ಕುಣಿಯಿಂದ ತಡೆಯುತ್ತಾರೆ, ಅವನ ಜೀವವನ್ನು ಖಡ್ಗದಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾರೆ.


ಅವರು ವಿಧೇಯರಾಗದಿದ್ದರೆ, ಸಂಕಟದ ಸಾಗರದಲ್ಲಿ ಸಾಗಿಹೋಗುವರು; ತಿಳುವಳಿಕೆಯಿಲ್ಲದ ಬಾಳನ್ನು ಬಾಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು