Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:28 - ಕನ್ನಡ ಸಮಕಾಲಿಕ ಅನುವಾದ

28 ಹಾಳಾದ ಪಟ್ಟಣಗಳಲ್ಲಿಯೂ, ಯಾರೂ ವಾಸಿಸದ, ಕುಸಿಯಲು ಸಿದ್ಧವಾದಂಥ ಮನೆಗಳಲ್ಲಿಯೂ ವಾಸಮಾಡಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಹಾಳು ಪಟ್ಟಣಗಳಲ್ಲಿ ಸೇರಿಕೊಂಡು, ‘ದಿಬ್ಬಗಳಾಗಿ ಹೋಗಲಿ ಯಾರೂ ವಾಸಿಸದಿರಲಿ’ ಎಂದು ಶಾಪಹೊಂದಿದ ಮನೆಗಳೊಳಗೆ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಹಾಳುಮಾಡಿದ್ದ ಪಟ್ಟಣಗಳಲ್ಲೆ ಅವನು ಸೇರಿಕೊಂಡಿದ್ದ ಯಾರೂ ವಾಸಮಾಡದೆ ದಿಬ್ಬವಾಗಿ ಮಾರ್ಪಟ್ಟಿದ್ದ ಶಾಪಗ್ರಸ್ತ ಮನೆಗಳಲ್ಲಿ ವಾಸಮಾಡಿಕೊಂಡಿದ್ದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು ಹಾಳು ಪಟ್ಟಣಗಳಲ್ಲಿ ಸೇರಿಕೊಂಡು ದಿಬ್ಬಗಳಾಗಿ ಹೋಗಲಿ ಯಾರೂ ವಾಸಿಸದಿರಲಿ ಎಂದು ಶಾಪಹೊಂದಿದ ಮನೆಗಳೊಳಗೆ ವಾಸವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಪಾಳುಬಿದ್ದಿರುವ ಮನೆಗಳಲ್ಲಿ ದುಷ್ಟನು ವಾಸಿಸುವನು. ಹಾಳುದಿಬ್ಬಗಳಾಗಬೇಕೆಂಬುದೇ ಆ ಮನೆಗಳ ಗತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:28
8 ತಿಳಿವುಗಳ ಹೋಲಿಕೆ  

ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮಗಾಗಿ ಕಟ್ಟಿಸಿಕೊಂಡ ರಾಜರೊಂದಿಗೂ ಮಂತ್ರಿಗಳೊಡನೆಯೂ ನಾನಿರುತ್ತಿದ್ದೆನು.


ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.


ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.


ಬಾಬಿಲೋನ್ ದಿಬ್ಬಗಳಾಗುವುದು. ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವಾಗಿ ಆಶ್ಚರ್ಯಕ್ಕೂ, ನಾಶಕ್ಕೂ, ಸಿಳ್ಳಿಡುವಿಕೆಗೂ ಒಳಗಾಗುವುದು.


“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’


ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.


ಬೆಂಕಿಯು ಅವನ ಮನೆಯನ್ನು ಸುಡುವುದು; ಅವನ ಮನೆಯ ಮೇಲೆ ಗಂಧಕವನ್ನು ಎರಚಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು