Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 15:8 - ಕನ್ನಡ ಸಮಕಾಲಿಕ ಅನುವಾದ

8 ನೀನು ದೇವರ ಆಲೋಚನಾ ಸಭೆಯಲ್ಲಿ ಸದಸ್ಯನೋ? ಜ್ಞಾನವು ನಿನಗೆ ಮಾತ್ರ ಮೀಸಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದೇವರ ಆಲೋಚನಾ ಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದ್ದೀಯಾ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದೇವರ ಆಲೋಚನಾಸಭೆಯಲಿ ನೀನು ಭಾಗವಹಿಸಿದ್ದೆಯೋ? ಜ್ಞಾನವೆಂಬುದು ನಿನಗೆ ಮಾತ್ರ ಮೀಸಲೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ದೇವರ ಆಲೋಚನಾಸಭೆಯಲ್ಲಿದ್ದುಕೊಂಡು ಅಲ್ಲಿ ಹೇಳಿದ್ದನ್ನು ಕೇಳಿದಿಯೇನೋ? ಜ್ಞಾನವನ್ನೆಲ್ಲಾ ನಿನ್ನ ಕಡೆಗೆ ಸೆಳೆದುಕೊಂಡಿದ್ದೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರ ರಹಸ್ಯ ಯೋಜನೆಗಳನ್ನು ಆಲಿಸಿರುವೆಯಾ? ನೀನೊಬ್ಬನೇ ಜ್ಞಾನಿಯೆಂದು ಭಾವಿಸಿಕೊಂಡಿರುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 15:8
18 ತಿಳಿವುಗಳ ಹೋಲಿಕೆ  

“ಕರ್ತದೇವರ ಮನಸ್ಸನ್ನು ಅರಿತವರು ಯಾರು? ಅವರಿಗೆ ಆಲೋಚನೆಯನ್ನು ನೀಡುವವರು ಯಾರು?”


ಆದರೆ ಯಾರು ಯೆಹೋವ ದೇವರ ಆಲೋಚನೆಯ ಸಭೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳಿದುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯವನ್ನು ಲಕ್ಷ್ಯವಿಟ್ಟು ಕೇಳಿದ್ದಾರೆ?


ಏಕೆಂದರೆ, “ಕರ್ತದೇವರ ಮನಸ್ಸನ್ನು ತಿಳಿದುಕೊಂಡು, ಅವರಿಗೆ ಉಪದೇಶಿಸುವವನಾರು?” ಆದರೆ ನಮಗೆ ಕ್ರಿಸ್ತ ಯೇಸುವಿನ ಮನಸ್ಸು ಇದೆ.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.


ಹೀಗೆ ಒಬ್ಬ ಪ್ರವಾದಿಯ ಮೂಲಕ ಹೇಳಿದ ಮಾತು ನೆರವೇರಿತು: “ನಾನು ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು. ನಾನು ಲೋಕ ಪ್ರಾರಂಭದಿಂದ ಮರೆಯಾದವುಗಳನ್ನು ಪ್ರಕಟಪಡಿಸುವೆನು.”


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.


ಏಕೆಂದರೆ ವಕ್ರಬುದ್ಧಿ ಯೆಹೋವ ದೇವರಿಗೆ ಅಸಹ್ಯ; ಆದರೆ ದೇವರ ನಂಬಿಗಸ್ತಿಕೆ ನೀತಿವಂತರೊಂದಿಗೆ ಇದೆ.


ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.


ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಸ್ನೇಹವು ನನ್ನ ಗುಡಾರದ ಮೇಲೆ ಇರುತ್ತಿತ್ತು.


“ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವುದು.


ಜ್ಞಾನದ ಮರ್ಮಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು, ನಿಜ ಜ್ಞಾನಕ್ಕೆ ಎರಡು ಬದಿಗಳಿವೆ; ದೇವರು ನಿನ್ನ ಪಾಪಗಳನ್ನು ತಮ್ಮ ಲಕ್ಷ್ಯಕ್ಕೆ ತರಲಿಲ್ಲ ಎಂದು ತಿಳಿದುಕೋ.


ರಹಸ್ಯಗಳು ನಮ್ಮ ದೇವರಾದ ಯೆಹೋವ ದೇವರಿಗೆ ಸೇರಿದ್ದು, ಆದರೆ ಪ್ರಕಟವಾದ ಈ ನಿಯಮದ ಮಾತುಗಳನ್ನೆಲ್ಲಾ ನಾವು ಕೈಕೊಳ್ಳುವ ಹಾಗೆ ನಮಗೂ, ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.


ಆಹಾ! ದೇವರ ಐಶ್ವರ್ಯ, ಜ್ಞಾನ ಮತ್ತು ವಿವೇಕಗಳು ಎಷ್ಟು ಆಳವಾದವುಗಳು! ದೇವರ ತೀರ್ಮಾನಗಳು ಪರೀಶೀಲಿಸಲು ಅಸಾಧ್ಯವಾದದ್ದು! ದೇವರ ಮಾರ್ಗಗಳನ್ನು ಕಂಡುಹಿಡಿಯುವುದು ಅಪರಿಮಿತವಾದದ್ದು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು