Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:17 - ಕನ್ನಡ ಸಮಕಾಲಿಕ ಅನುವಾದ

17 ಆದರೂ ನನ್ನ ಕೈಗಳಲ್ಲಿ ಹಿಂಸಾಚಾರವಿಲ್ಲ; ನನ್ನ ಪ್ರಾರ್ಥನೆಯು ಶುದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ನನ್ನ ಕೈ ಯಾವ ಬಲಾತ್ಕಾರವನ್ನೂ ಮಾಡಿಲ್ಲವಲ್ಲಾ, ನನ್ನ ವಿಜ್ಞಾಪನೆಯು ನಿರ್ಮಲವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೂ ನಾನು ಹಿಂಸಾಚಾರಕ್ಕೆ ಕೈಹಾಕಲಿಲ್ಲ ನಾನು ಮಾಡುವ ಪ್ರಾರ್ಥನೆ ನಿರ್ಮಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ನನ್ನ ಕೈ ಯಾವ ಬಲಾತ್ಕಾರವನ್ನೂ ಮಾಡಿರಲಿಲ್ಲವಲ್ಲಾ, ನನ್ನ ವಿಜ್ಞಾಪನೆಯು ನಿರ್ಮಲವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ಯಾರೊಡನೆಯೂ ಕ್ರೂರವಾಗಿ ವರ್ತಿಸಲಿಲ್ಲ. ನನ್ನ ವಿಜ್ಞಾಪನೆಯು ನಿರ್ಮಲವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:17
20 ತಿಳಿವುಗಳ ಹೋಲಿಕೆ  

ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.


ಅವರ ನೂಲು ವಸ್ತ್ರಕ್ಕಾಗದು. ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದುಕೊಳ್ಳರು. ಅವರ ಕೆಲಸಗಳು ಅಕ್ರಮದ ಕೆಲಸಗಳೇ. ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಇವೆ.


ದೇವರಿಲ್ಲದವರ ಸಹವಾಸ ಬಂಜರು, ಬೆಂಕಿಯು ಲಂಚಕೋರರ ಮನೆಗಳನ್ನು ಸುಟ್ಟುಹಾಕುವುದು.


ಜ್ಞಾನಿಗಳು ಹೇಳಿದ್ದೇನೆಂದರೆ: ದುಷ್ಟನು ತನ್ನ ಜೀವಮಾನವೆಲ್ಲಾ ವೇದನೆಪಡುತ್ತಾನೆ; ನಿರ್ದಯನು ತನ್ನ ವರ್ಷಗಳೆಲ್ಲ ತೊಂದರೆಗಳನ್ನು ಸಂಗ್ರಹಿಸುತ್ತಾನೆ.


ನಿನ್ನ ಕೈಯಲ್ಲಿರುವ ಪಾಪವನ್ನು ದೂರಮಾಡಿಬಿಟ್ಟು, ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಿಸಲು ಅನುಮತಿಸದಿದ್ದರೆ,


ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.


“ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ, ನನ್ನ ಕೂಗು ವಿಶ್ರಾಂತಿ ಹೊಂದದಿರಲಿ!


ನನ್ನ ತುಟಿಗಳು ಸುಳ್ಳನ್ನು ನುಡಿಯುವುದೇ ಇಲ್ಲ. ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವುದಿಲ್ಲ.


‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ; ನಾನು ನಿರ್ದೋಷಿ, ನನ್ನಲ್ಲಿ ಏನೂ ಪಾಪವಿಲ್ಲ.


ಯೆಹೋವ ದೇವರೇ, ನನ್ನ ಬೇಡಿಕೆ ನ್ಯಾಯವಾದದ್ದು, ನನ್ನ ಮೊರೆಗೆ ಕಿವಿಗೊಡಿರಿ. ನನ್ನ ಪ್ರಾರ್ಥನೆಯನ್ನು ಕೇಳಿರಿ, ಅದು ಕಪಟ ತುಟಿಗಳಿಂದ ಬಂದದ್ದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು