Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 16:20 - ಕನ್ನಡ ಸಮಕಾಲಿಕ ಅನುವಾದ

20 ಆದರೆ ನನ್ನ ಮಿತ್ರ ನನಗಾಗಿ ವಿಜ್ಞಾಪನೆಮಾಡುತ್ತಿದ್ದಾರೆ; ನನ್ನ ಕಣ್ಣುಗಳು ದೇವರ ಮುಂದೆ ಕಣ್ಣೀರು ಸುರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ, ನಾನಾದರೋ ದೇವರ ಮುಂದೆ ಕಣ್ಣೀರು ಸುರಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಗೆಳೆಯರು ನನ್ನನ್ನು ಹೀಗಳೆಯುತ್ತಿರುವರು ನಾನೋ ಸುರಿಸುತ್ತಿರುವೆ ದೇವರ ಮುಂದೆ ಕಣ್ಣೀರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಕಣ್ಣೀರೇ ನನ್ನ ಪ್ರತಿನಿಧಿಯಾಗಿದೆ. ನನ್ನ ಕಣ್ಣು ದೇವರ ಉತ್ತರಕ್ಕಾಗಿ ಆಕಾಂಕ್ಷೆಯಿಂದ ಎದುರುನೋಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 16:20
15 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ದೇವರ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ದೇವರ ಮುಂದೆ ತಿಳಿಸಿದ್ದೇನೆ.


ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ; ಆದರೆ ನಾನು ಪ್ರಾರ್ಥನೆಯ ಮನುಷ್ಯನು.


ಅಪಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರೆ; ಅವರ ಹಗೆತನದ ಬಗ್ಗೆ ನಾನು ಎಚ್ಚರವಾಗಿರಬೇಕು.


ನೀವು ನನ್ನ ಸ್ಥಿತಿಯಲ್ಲಿ ಇದ್ದಿದ್ದರೆ, ನಾನು ಸಹ ನಿಮ್ಮ ಹಾಗೆ ಮಾತಾಡುತ್ತಿದ್ದೆ; ನಾನು ನಿಮ್ಮ ವಿರುದ್ಧ ಪದಪ್ರಯೋಗಿಸಿ ಮಾತಾಡಬಹುದಾಗಿತ್ತು; ಹೌದು, ನಿಮ್ಮ ವಿಷಯದಲ್ಲಿ ಗೇಲಿ ಮಾಡುತ್ತಾ, ನಾನು ನನ್ನ ತಲೆಯಾಡಿಸಬಹುದಾಗಿತ್ತು.


ದೇವರೇ, ನೀವು ನನ್ನನ್ನು ಬಲಹೀನಪಡಿಸಿದ್ದೀರಿ; ನೀವು ನನ್ನ ಕುಟುಂಬದವರನ್ನೆಲ್ಲಾ ಇಲ್ಲದಂತೆ ಮಾಡಿದ್ದೀರಿ.


ನನ್ನ ಮುಖವು ಅಳುವುದರಿಂದ ಕೆಂಪಾಯಿತು; ನನ್ನ ರೆಪ್ಪೆಗಳ ಮೇಲೆ ಮರಣದ ಅಂಧಕಾರವು ಕವಿದಿದೆ.


ಒಬ್ಬ ಮನುಷ್ಯನು ತನ್ನ ಮಿತ್ರನಿಗೋಸ್ಕರ ಬೇಡಿಕೊಳ್ಳುವಂತೆ, ಅವರು ಸಹ ಮನುಷ್ಯನಿಗಾಗಿ ದೇವರ ಮುಂದೆ ವಾದಿಸುತ್ತಿದ್ದಾರೆ.


ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಇವೆ.


“ದೇವರು ನನ್ನ ಕುಟುಂಬದವರನ್ನು ನನ್ನಿಂದ ಅಗಲಿಸಿದ್ದಾರೆ; ನನ್ನ ಪರಿಚಿತರೆಲ್ಲರೂ ನನ್ನನ್ನು ತೊರೆದಿದ್ದಾರೆ.


“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.


ದೇವರನ್ನು ಎಲ್ಲಿ ಕಂಡುಕೊಳ್ಳಬೇಕೆಂದು ನನಗೆ ತಿಳಿದಿದ್ದರೆ, ಎಷ್ಟೋ ಒಳ್ಳೆಯದು! ಸಾಧ್ಯವಾದರೆ ನಾನು ದೇವರು ವಾಸಿಸುವ ಸ್ಥಳದ ತನಕ ಹೋಗುತ್ತಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು