Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 17:6 - ಕನ್ನಡ ಸಮಕಾಲಿಕ ಅನುವಾದ

6 “ದೇವರು ನನ್ನನ್ನು ಜನರ ಕಟ್ಟುಗಾದೆಗೆ ಆಸ್ಪದ ಮಾಡಿದ್ದಾರೆ; ನನ್ನನ್ನು ಕಾಣುವವರು ನನ್ನ ಮುಖಕ್ಕೆ ಉಗುಳುವಂತೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ನನ್ನನ್ನು ಅನ್ಯದೇಶದವರ ವ್ಯರ್ಥ ಆಪಾದನೆಗಳಿಗೆ ಗುರಿ ಮಾಡಿದ್ದಾನೆ, ಜನರ ಉಗುಳಿಗೆ ನನ್ನ ಮುಖ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ದೇವರು ನನ್ನನು ಈಡಾಗಿಸಿದ್ದಾನೆ ಅನ್ಯರ ಕಟ್ಟುಗಾದೆಗೆ ನನ್ನ ಮುಖ ಗುರಿಯಾಗಿದೆ ಜನರ ಉಗುಳಾಟಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ನನ್ನನ್ನು ಅನ್ಯದೇಶದವರ ಕಟ್ಟುಗಾದೆಗೆ ಆಸ್ಪದ ಮಾಡಿದ್ದಾನೆ, ಜನರ ಉಗುಳಾಟಕ್ಕೆ ನನ್ನ ಮುಖವು ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ನನ್ನ ಹೆಸರನ್ನು ಪ್ರತಿಯೊಬ್ಬರಿಗೂ ಕೆಟ್ಟಪದವನ್ನಾಗಿ ಮಾಡಿದ್ದಾನೆ. ಜನರು ನನ್ನ ಮುಖಕ್ಕೆ ಉಗುಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 17:6
11 ತಿಳಿವುಗಳ ಹೋಲಿಕೆ  

ನಮ್ಮನ್ನು ಇತರ ದೇಶಗಳವರ ಗಾದೆಗೆ ಆಸ್ಪದ ಮಾಡಿರುವಿರಿ; ಅವರು ನಮ್ಮನ್ನು ಪರಿಹಾಸ್ಯದ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ.


“ಆದರೆ ಈಗ ನಾನು ಅವರ ಹಾಸ್ಯದ ಹಾಡೂ, ಅವರಿಗೆ ಗಾದೆಯೂ ಆಗಿದ್ದೇನೆ.


ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.


ಆಗ ನಾನು ಇಸ್ರಾಯೇಲಿಗೆ ಕೊಟ್ಟ ದೇಶದೊಳಗಿಂದ ಅವರನ್ನು ತೆಗೆದುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಇಸ್ರಾಯೇಲರು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಗುರಿಯಾಗುವರು.


ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಹೋದೆ? ಏಕೆ ಮೋಸಮಾಡಿದೆ? ನನಗೆ ತಿಳಿಸಿದ್ದರೆ ಸಂತೋಷದಿಂದ ಹಾಡು, ತಾಳ, ವೀಣೆಗಳ ಸಂಗೀತದೊಂದಿಗೆ ನಿನ್ನನ್ನು ಕಳುಹಿಸುತ್ತಿದ್ದೆನು.


ಆಗ ಯೆಹೋವ ದೇವರು ಮೋಶೆಗೆ, “ಆಕೆಯ ತಂದೆ ಅವಳ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗಿರುವುದಿಲ್ಲವೇ? ಹಾಗಾದರೆ ಆಕೆಯು ಏಳು ದಿವಸ ಪಾಳೆಯದ ಹೊರಗೆ ಇರಲಿ, ತರುವಾಯ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದರು.


“ನಾನು ನೀತಿವಂತನೂ, ನಿರ್ದೋಷಿಯಾದರೂ ಗೆಳೆಯರ ಗೇಲಿ ಪರಿಹಾಸ್ಯಕ್ಕೆ ಗುರಿಯಾದೆನು; ನಾನು ದೇವರಿಗೆ ಪ್ರಾರ್ಥಿಸಿದೆ; ದೇವರು ನನಗೆ ಉತ್ತರಕೊಟ್ಟರು;


ಅಪಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರೆ; ಅವರ ಹಗೆತನದ ಬಗ್ಗೆ ನಾನು ಎಚ್ಚರವಾಗಿರಬೇಕು.


ಈಗ ನನ್ನನ್ನು ಕಂಡು ಅಸಹ್ಯಪಟ್ಟು, ನನ್ನಿಂದ ದೂರಸರಿಯುತ್ತಿದ್ದಾರೆ. ನನ್ನ ಮುಖದ ಮೇಲೆ ಉಗುಳಲೂ ಹಿಂಜರಿಯುವದಿಲ್ಲ.


ಗೋಣಿತಟ್ಟನ್ನು ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ. ಇದರಿಂದ ನಾನು ಅವರಿಗೆ ಗಾದೆಯ ಮಾತಾದೆನು.


ನಿಂದಕನ ಮತ್ತು ದೂಷಕನ ಮಾತುಗಳಿಗೂ ಮುಯ್ಯಿಗೆ ಮುಯ್ಯಿ ತೀರಿಸುವ ಶತ್ರುವಿನ ನಿಮಿತ್ತವೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು