Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 18:18 - ಕನ್ನಡ ಸಮಕಾಲಿಕ ಅನುವಾದ

18 ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; ಅವನು ಲೋಕದಿಂದ ಬಹಿಷ್ಕರಿಸಲಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ, ಲೋಕದಿಂದಲೇ ಅಟ್ಟಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನನ್ನು ಬೆಳಕಿನಿಂದ ಕತ್ತಲೆಗೆ ನೂಕಿ ಲೋಕದಿಂದಲೇ ಅಟ್ಟಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜನರು ಅವನನ್ನು ಬೆಳಕಿನಿಂದ ತಳ್ಳಿಬಿಡುವರು; ಅವನನ್ನು ಕತ್ತಲೆಯೊಳಗೆ ನೂಕಿಬಿಡುವರು. ಅವರು ಅವನನ್ನು ಲೋಕದಿಂದಲೇ ಅಟ್ಟಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 18:18
17 ತಿಳಿವುಗಳ ಹೋಲಿಕೆ  

ಭಕ್ತಿಹೀನನು ಕನಸಿನ ಹಾಗೆ ಹಾರಿಹೋಗುವನು, ಇನ್ನೆಂದಿಗೂ ಸಿಗಲಾರನು; ಅವನು ಕತ್ತಲೆಯ ಹಾಗೆ ಕಾಣದೆ ಹೋಗುವನು.


ಆ ದೇಶದಲ್ಲಿ ಕಾರ್ಗತ್ತಲೂ, ಗಾಢಾಂಧಕಾರವೂ ಮರಣದ ತುಂಬಿರುವುದು. ಕ್ರಮವಿಲ್ಲದ ಆ ದೇಶದಲ್ಲಿ ಬೆಳಕೂ ಕತ್ತಲೆಯೇ.”


ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.


ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು.


ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದನು. ದನಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ, ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೆ ಬೆಳೆಯುವವರೆಗೆ ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.


ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.


ನಿನ್ನ ಕೈಯಲ್ಲಿರುವ ಪಾಪವನ್ನು ದೂರಮಾಡಿಬಿಟ್ಟು, ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಿಸಲು ಅನುಮತಿಸದಿದ್ದರೆ,


ಕುತಂತ್ರರು ಹಗಲಿನಲ್ಲಿಯೇ ಕತ್ತಲೆಯನ್ನು ಸಂಧಿಸುತ್ತಾರೆ; ಮಧ್ಯಾಹ್ನದಲ್ಲಿ ರಾತ್ರಿಯಂತೆ ತಡಕಾಡುತ್ತಾರೆ.


“ಕಷ್ಟದಲ್ಲಿ ಇರುವವನಿಗೆ ಬೆಳಕೂ ಕಹಿ ಮನಸ್ಸುಳ್ಳವರಿಗೆ ಜೀವವನ್ನು ಕೊಡುವುದೇಕೆ?


ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು.


ಅವನ ನಿಕ್ಷೇಪಗಳಲ್ಲಿ ಅಂಧಕಾರವು ಪೂರ್ಣವಾಗಿ ಕವಿಯುವುದು; ಯಾರೂ ಹೊತ್ತಿಸದ ಬೆಂಕಿ ಅವನನ್ನು ದಹಿಸುವುದು; ಅವನ ಗುಡಾರದಲ್ಲಿ ಉಳಿದದ್ದೆಲ್ಲ ನಾಶವಾಗುವುದು.


ಪೂರ್ವದಿಕ್ಕಿನ ಗಾಳಿ ದುಷ್ಟರನ್ನು ಬಡಿಯಲು, ಅವರು ಕೊಚ್ಚಿಕೊಂಡು ಹೋಗುವರು; ಅದು ಅವರನ್ನು ಅವರ ಸ್ಥಳದಿಂದ ಹಾರಿಸಿಬಿಡುವುದು.


ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.”


ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ತಿರುಗಿಸಿ, ವಿಸ್ತಾರವಾದ ದೇಶಕ್ಕೆ ಬಿಸಾಡುವರು. ಅಲ್ಲೇ ನೀನು ಸಾಯುವೆ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವುವು.


ಅವರು ತಮ್ಮ ಪರಿಶುದ್ಧರ ಪಾದಗಳನ್ನು ಕಾಯುವರು. ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು. “ತನ್ನ ಶಕ್ತಿಯಿಂದ ಒಬ್ಬನೂ ಜಯಿಸನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು