Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:10 - ಕನ್ನಡ ಸಮಕಾಲಿಕ ಅನುವಾದ

10 ನನ್ನ ಸುತ್ತಲೂ ದಾಳಿಯಾಗಿದ್ದರಿಂದ, ನಾನು ಕ್ಷಯಿಸುತ್ತಿದ್ದೇನೆ; ಮರವನ್ನು ಕೀಳುವ ಹಾಗೆ ದೇವರು ನನ್ನ ನಿರೀಕ್ಷೆಯನ್ನು ಕಿತ್ತುಹಾಕಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾಲ್ದೆಸೆಯಿಂದ ಧಾಳಿಮಾಡಿ ನಾಶಮಾಡಿದ್ದಾನೆ ಮರ ಕೀಳುವ ಪ್ರಕಾರ ನನ್ನ ನಿರೀಕ್ಷೆಯನು ಕಿತ್ತುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆತನು ನನ್ನನ್ನು ಸುತ್ತುಮುತ್ತಲೂ ಕೆಡವಿದ್ದರಿಂದ ಇಲ್ಲದೆ ಹೋದೆನು. ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಸಾಯುವ ತನಕ ದೇವರು ನನ್ನನ್ನು ಎಲ್ಲಾ ಕಡೆಗಳಿಂದಲೂ ಅಪ್ಪಳಿಸಿ ಕೆಡುವುತ್ತಿದ್ದಾನೆ. ಬೇರುಗಳ ಸಹಿತ ಕೀಳಲ್ಪಟ್ಟ ಮರದ ಹಾಗೆ ಆತನು ನನ್ನ ನಿರೀಕ್ಷೆಯನ್ನು ತೆಗೆದುಹಾಕಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:10
15 ತಿಳಿವುಗಳ ಹೋಲಿಕೆ  

ಹೆತ್ತ ಕರುಳು ಅಂಥವರನ್ನು ಮರೆತು ಬಿಡುವುದು; ಹುಳವು ಅಂಥವರ ಹೆಣವನ್ನು ರುಚಿಯಿಂದ ತಿಂದುಬಿಡುವುದು; ಇನ್ನು ಅವರ ನೆನಪು ಇರುವುದಿಲ್ಲ; ಮರದ ಹಾಗೆ ದುಷ್ಟರು ಮುರಿದುಹೋಗುವರು.


ದೇವರು ಕೆಡವಿದ್ದನ್ನು ತಿರುಗಿ ಕಟ್ಟಲಾಗುವುದಿಲ್ಲ; ದೇವರು ಸೆರೆಯಲ್ಲಿ ಹಾಕುವ ಮನುಷ್ಯನನ್ನು ಯಾರೂ ಬಿಡಿಸಲಾಗುವುದಿಲ್ಲ.


ನನ್ನ ದಿವಸಗಳು ಸಾಯಂಕಾಲದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತಿದ್ದೇನೆ.


ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?


ನನ್ನ ದಿನಗಳು ಮುಗಿದು ಹೋದವು; ನನ್ನ ಹೃದಯದ ಬಯಕೆಯಾಗಿರುವ ನನ್ನ ಉದ್ದೇಶಗಳು ಭಂಗವಾದವು.


“ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ದಿನಗಳು ನಿರೀಕ್ಷೆ ಇಲ್ಲದೆ ಮುಗಿಯುತ್ತವೆ.


“ನಾನು ನಿರೀಕ್ಷೆಯಿಂದಿರಲು, ನನಗೆ ಶಕ್ತಿ ಎಲ್ಲಿದೆ? ನಾನು ಸಹನೆಯಿಂದಿರಲು, ನನಗೆ ಭವಿಷ್ಯ ಏನಿದೆ?


ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋಗಿ, ಯೋಬನಿಗೆ ಅಂಗಾಲಿನಿಂದ ನೆತ್ತಿಯವರೆಗೆ ಕೆಟ್ಟ ಹುಣ್ಣುಗಳು ಬರುವಂತೆ ಅವನನ್ನು ಬಾಧಿಸಿದನು.


ನೀರು ಕಲ್ಲುಗಳನ್ನು ಸವೆಯಿಸುವಂತೆಯೂ, ಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವಂತೆಯೂ, ಮನುಷ್ಯನ ನಿರೀಕ್ಷೆಯನ್ನು ನೀವು ನಾಶಮಾಡುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು