Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:12 - ಕನ್ನಡ ಸಮಕಾಲಿಕ ಅನುವಾದ

12 ದೇವರ ಸೇನೆ ಒಟ್ಟಿಗೆ ಬಂದು, ನನಗೆ ವಿರೋಧವಾಗಿ ದಿಬ್ಬನ್ನು ಕಟ್ಟಿ, ನನ್ನ ಗುಡಾರದ ಸುತ್ತಲೂ ಇಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನ ದಂಡುಗಳು ಒಟ್ಟಿಗೆ ಮುಂದುವರೆದು ನನ್ನ ವಿರುದ್ಧವಾಗಿ ದಿಬ್ಬಹಾಕಿ, ನನ್ನ ಗುಡಾರದ ಸುತ್ತಲೂ ಇಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಮುನ್ನುಗ್ಗಿ ಬಂದಿದೆ ಆತನ ಸೇನೆ ಒಟ್ಟಿಗೆ ದಿಬ್ಬಹಾಕಿಕೊಂಡಿದೆ ಅದು ನನ್ನೆದುರಿಗೆ ನನ್ನ ಗುಡಾರದ ಎಲ್ಲಾ ಕಡೆಗೆ ದಂಡು ಇಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನ ದಂಡುಗಳು ಒಟ್ಟಿಗೆ ಮುಂದರಿದು ನನಗೆ ವಿರುದ್ಧವಾಗಿ ದಿಬ್ಬಹಾಕಿ ನನ್ನ ಗುಡಾರದ ಸುತ್ತಲೂ ಇಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನನ್ನ ಮೇಲೆ ಆಕ್ರಮಣಮಾಡಲು ದೇವರು ತನ್ನ ಸೈನ್ಯವನ್ನು ಕಳುಹಿಸಿದ್ದಾನೆ. ಅವರು ನನಗೆ ವಿರುದ್ಧವಾಗಿ ದಿಬ್ಬಹಾಕಿದ್ದಾರೆ. ಅವರು ನನ್ನ ಗುಡಾರದ ಸುತ್ತಲೂ ಪಾಳೆಯ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:12
7 ತಿಳಿವುಗಳ ಹೋಲಿಕೆ  

ಬಲಗಡೆಯಲ್ಲಿ ಯುವಕರು ಎದ್ದಿದ್ದಾರೆ; ಅವರು ನನ್ನ ಕಾಲುಗಳಿಗೆ ಬಲೆ ಹಾಕಿದ್ದಾರೆ. ನನ್ನನ್ನು ನಾಶಮಾಡಲು ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಿದ್ದಾರೆ.


ಆದರೆ ನಾವು ಹಾದುಹೋಗುವಂತೆ, ನೀನು ನೆಲಕ್ಕೆ ಬೀಳು ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ ಮತ್ತು ನೀನು ಹಾದುಹೋದವರಿಗೆ ನಿನ್ನ ಶರೀರವನ್ನು ನೆಲದಂತೆಯೂ, ಬೀದಿಯಂತೆಯೂ ಮಾಡಿಕೊಂಡಿಯಲ್ಲಾ.”


ದೇವರ ಬಾಣಗಳು ನನ್ನನ್ನು ಸುತ್ತುವರಿದಿವೆ; ನಾನು ಕರುಣೆಯಿಲ್ಲದೆ ನೆಲದ ಮೇಲೆ ಪಿತ್ತವನ್ನು ಸುರಿದು ಬಿದ್ದವನಂತೆ ಇದ್ದೇನೆ. ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾರೆ.


ದೇವರು ನನ್ನನ್ನು ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾರೆ; ಹೌದು, ದುಷ್ಟರ ಕೈಗೆ ನನ್ನನ್ನು ಎಸೆದುಬಿಟ್ಟಿದ್ದಾರೆ.


ಸರ್ವಶಕ್ತರ ಬಾಣಗಳು ನನ್ನಲ್ಲಿ ನಾಟಿವೆ; ಅವುಗಳ ವಿಷವನ್ನು ನನ್ನ ಆತ್ಮವು ಹೀರುತ್ತಿದೆ; ದೇವರ ವಿಷಯವಾದ ಹೆದರಿಕೆಗಳು ನನ್ನನ್ನು ಸುತ್ತುವರೆದಿವೆ.


ಇಕ್ಕಟ್ಟೂ, ಸಂಕಟವೂ ಅವನನ್ನು ಹೆದರಿಸಿ, ಆಕ್ರಮಣ ಮಾಡಲು ಸಿದ್ಧನಾದ ರಾಜನಂತೆ ತೊಂದರೆಗಳು ಅವನನ್ನು ಆವರಿಸುತ್ತವೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು