Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 19:27 - ಕನ್ನಡ ಸಮಕಾಲಿಕ ಅನುವಾದ

27 ದೇವರನ್ನು ನಾನೇ ನೋಡುವೆನು; ಬೇರೆಯವರಲ್ಲ, ನನ್ನ ಕಣ್ಣಾರೆ ಅವರನ್ನು ಕಾಣುವೆನು; ಅದಕ್ಕಾಗಿ ನನ್ನ ಹೃದಯವು ನನ್ನೊಳಗೆ ಹಂಬಲಿಕೆಯಿಂದ ಹಾರೈಸುತ್ತಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು ಹಂಬಲಿಕೆಯಿಂದ ನನ್ನಲ್ಲಿ ಕುಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕಣ್ಣಾರೆ ಆತನನ್ನು ಕಾಣುವೆನು ಮತ್ತೊಬ್ಬನಾಗಲ್ಲ, ನಾನಾಗೇ ನೋಡುವೆನು. ಹಂಬಲಿಕೆಯಿಂದ ಕುಂದಿದೆ ನನ್ನ ಅಂತರಂಗವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕಣ್ಣಾರೆ ಕಾಣುವೆನು, ನಾನೇ ನಾನಾಗಿ ನೋಡುವೆನು, ಮತ್ತೊಬ್ಬನಾಗಿ ಅಲ್ಲ. ನನ್ನ ಹೃದಯವು [ಹಂಬಲಿಕೆಯಿಂದ] ನನ್ನಲ್ಲಿ ಕುಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಕಣ್ಣಾರೆ ದೇವರನ್ನು ನೋಡುವೆನು. ಬೇರೆ ಯಾರೂ ಅಲ್ಲದೆ ನಾನೇ ಆತನನ್ನು ನೋಡುವೆನು. ಈ ನಿರೀಕ್ಷೆಯಿಂದ ನನ್ನ ಹೃದಯವು ಉಲ್ಲಾಸಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 19:27
8 ತಿಳಿವುಗಳ ಹೋಲಿಕೆ  

ನನ್ನ ತನುಮನಗಳು ಕುಂದುತ್ತವೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ, ನನ್ನ ಪಾಲೂ ಆಗಿದ್ದಾರೆ.


ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.


“ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.


ಯೆಹೋವ ದೇವರು ನನ್ನ ಪರವಾಗಿದ್ದಾರೆ, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?


ಆಗ ಆ ಮನುಷ್ಯನು ದೇವರಿಗೆ ಪ್ರಾರ್ಥನೆಮಾಡುವನು; ದೇವರು ಅವನಿಗೆ ತಮ್ಮ ಮೆಚ್ಚುಗೆಯನ್ನು ನೀಡುವರು; ಅವನು ಆನಂದ ಧ್ವನಿಯಿಂದ ದೇವರ ಮುಖವನ್ನು ನೋಡುವನು; ದೇವರು ಅವನನ್ನು ನೀತಿವಂತನೆಂದು ಪುನಃಸ್ಥಾಪಿಸುವರು.


ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.


ನನ್ನ ಪ್ರಾಣವು ನಿಮ್ಮ ರಕ್ಷಣೆಯ ಬಯಕೆಯಿಂದಲೇ ಕುಗ್ಗಿ ಹೋಗುತ್ತಿದೆ, ಆದರೂ ನಾನು ನಿಮ್ಮ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.


ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವುವು. ಅತಿವಿಸ್ತಾರವಾದ ದೇಶವನ್ನು ಕಣ್ಣು ತುಂಬಾ ನೋಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು