Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:10 - ಕನ್ನಡ ಸಮಕಾಲಿಕ ಅನುವಾದ

10 ಆದರೆ ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ? ನಾವು ದೇವರಿಂದ ಒಳ್ಳೆಯದನ್ನು ಹೊಂದಿದ್ದೇವೆ, ಕಷ್ಟವನ್ನು ಹೊಂದಬಾರದೋ?” ಎಂದನು. ಇವೆಲ್ಲವುಗಳಲ್ಲಿಯೂ ಪಾಪದ ಮಾತೊಂದೂ ಯೋಬನ ಬಾಯಿಂದ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಯೋಬನು ಆಕೆಗೆ - ಮೂರ್ಖಳು ಮಾತಾಡಿದಂತೆ ನೀನು ಮಾತಾಡುತ್ತೀ; ದೇವರ ಹಸ್ತದಿಂದ ನಾವು ಒಳ್ಳೇದನ್ನು ಹೊಂದುತ್ತೇವಷ್ಟೆ; ಕೆಟ್ಟದ್ದನ್ನು ಹೊಂದಬಾರದೋ ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತೊಂದೂ ಅವನ ತುಟಿಗಳಿಂದ ಹೊರಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೋಬನು ತನ್ನ ಹೆಂಡತಿಗೆ, “ನೀನು ಮೂರ್ಖಳಂತೆ ಮಾತಾಡುತ್ತಿರುವೆ! ದೇವರು ಒಳ್ಳೆಯವುಗಳನ್ನು ಕೊಡುವಾಗ ನಾವು ಅವುಗಳನ್ನು ಸ್ವೀಕರಿಸಿಕೊಳ್ಳುತ್ತೇವೆ. ಆತನು ಕೆಟ್ಟದ್ದನ್ನು ಕೊಡುವಾಗ ನಾವು ಸ್ವೀಕರಿಸಿಕೊಳ್ಳಬಾರದೋ?” ಎಂದು ಉತ್ತರಕೊಟ್ಟನು. ಈ ಸಂಕಟದಲ್ಲಿಯೂ ಯೋಬನು ಪಾಪ ಮಾಡಲಿಲ್ಲ ಹಾಗೂ ದೇವರ ವಿರುದ್ಧ ಯಾವ ಮಾತನ್ನು ಆಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:10
30 ತಿಳಿವುಗಳ ಹೋಲಿಕೆ  

ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ.


ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.


ಆಗ ಯೇಸು ಪೇತ್ರನಿಗೆ, “ನಿನ್ನ ಕತ್ತಿಯನ್ನು ಒರೆಯಲ್ಲಿ ಹಾಕು! ನನ್ನ ತಂದೆಯು ನನಗೆ ಕೊಟ್ಟ ಪಾತ್ರೆಯಿಂದ ನಾನು ಕುಡಿಯಬಾರದೋ?” ಎಂದು ಹೇಳಿದರು.


ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.


“ನನ್ನ ನಾಲಿಗೆಯಿಂದ ಪಾಪಮಾಡದಂತೆ ಜಾಗರೂಕನಾಗಿರುವೆನು, ನನ್ನ ಮಾರ್ಗಗಳನ್ನು ಕಾಪಾಡಿಕೊಳ್ಳುವೆನು. ದುಷ್ಟರು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಹಾಕಿಕೊಳ್ಳುವೆನು,” ಎಂದು ತೀರ್ಮಾನಿಸಿಕೊಂಡೆನು.


ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.


ಈ ಅವಮಾನವನ್ನು ಮರೆಮಾಡುವುದು ಹೇಗೆ? ನೀನು ಇಸ್ರಾಯೇಲಿನಲ್ಲಿ ದುಷ್ಟ ಮೂರ್ಖರೊಳಗೆ ಒಬ್ಬನಾಗಿ ಇರುವೆ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು. ಏಕೆಂದರೆ ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ,” ಎಂದಳು.


ಅನಂತರ ದೇವರು ಆದಾಮನಿಗೆ ಹೀಗೆ ಹೇಳಿದರು, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, “ನಿನ್ನ ನಿಮಿತ್ತ ಭೂಮಿಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ದುಡಿದು, ಅದರ ಹುಟ್ಟುವಳಿಯನ್ನು ಉಣ್ಣುವೆ.


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ಅವರಲ್ಲಿ ಐದು ಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.


ಅವರ ಬಾಯಿಯ ಪಾಪಕ್ಕೂ, ಅವರ ತುಟಿಗಳ ಮಾತಿಗೂ, ಅವರು ನುಡಿಯುವ ಶಾಪಕ್ಕೂ ಅವರ ಗರ್ವವೇ ಅವರನ್ನು ಹಿಡಿಯಲಿ.


ಏಕೆಂದರೆ ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರೂ ಸತ್ತವರಾಗಿ ಇದ್ದರೂ, ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವುದಕ್ಕೆ ಯೋಗ್ಯನೋ?” ಎಂದನು.


ಆದರೆ ದಾವೀದನು, “ಚೆರೂಯಳ ಮಕ್ಕಳೇ, ಈ ಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈ ಹೊತ್ತು ಇಸ್ರಾಯೇಲಿನಲ್ಲಿ ಯಾರಿಗೂ ಮರಣದಂಡನೆ ಆಗಬಾರದು, ಏಕೆಂದರೆ ಈ ಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ಗೊತ್ತಾಯಿತಲ್ಲಾ?” ಎಂದನು.


ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು; ಅವಳು ಅರಿವಿಲ್ಲದವಳು, ಏನೂ ತಿಳಿಯದವಳು.


“ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ ಮತ್ತು ವಿವೇಕದ ಮಾರ್ಗದಲ್ಲಿ ಹೋಗು,” ಎಂದೂ ಕೂಗುತ್ತಾಳೆ.


ನೀವು ಅವನಿಗೂ ಅವನ ಮನೆಗೂ ಅವನಲ್ಲಿ ಇರುವ ಎಲ್ಲವುಗಳ ಸುತ್ತಲು ಬೇಲಿ ಹಾಕಿದ್ದೀರಲ್ಲಾ? ಅವನು ಕೈಹಾಕಿದ ಕೆಲಸವನ್ನು ನೀವು ಆಶೀರ್ವದಿಸಿದ್ದೀರಿ, ಆದ್ದರಿಂದ ಅವನ ಕುರಿದನಗಳ ಹಿಂಡುಗಳು ಭೂಮಿಯ ಮೇಲೆಲ್ಲಾ ಹರಡುತ್ತಾ ಬಂದಿದೆ.


ಹಾಗೆಯೇ ಸಮುಯೇಲನು ಅವನಿಗೆ ಒಂದನ್ನೂ ಮರೆಮಾಡದೆ, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು, “ಅವರು ಯೆಹೋವ ದೇವರು. ಅವರಿಗೆ ಸರಿತೋರುವುದನ್ನು ಮಾಡಲಿ,” ಎಂದನು.


ಆಗ ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ಯಥಾರ್ಥತ್ವವನ್ನು ಬಿಡಲಿಲ್ಲವೇ? ದೇವರನ್ನು ಶಪಿಸಿ ಸತ್ತುಹೋಗು,” ಎಂದಳು.


ನಾನು ಮೌನವಾದೆನು, ಬಾಯಿ ತೆರೆಯಲಿಲ್ಲ; ಇದನ್ನು ಮಾಡಿದವರು ನೀವೇ.


ಸುಖ ದಿನದಲ್ಲಿ ಸಂತೋಷವಾಗಿರು. ಆದರೆ ದುಃಖ ದಿನದಲ್ಲಿ ಇದನ್ನು ಯೋಚಿಸು: ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ. ಹೀಗೆ ಮನುಷ್ಯನು ತನ್ನ ಆಯುಸ್ಸನ್ನು ಕಳೆದ ಮೇಲೆ ಭವಿಷ್ಯವನ್ನು ಗ್ರಹಿಸಲಾರನು.


ನಿಮ್ಮ ಪೆಟ್ಟನ್ನು ನನ್ನಿಂದ ತೊಲಗಿಸಿರಿ; ನಿಮ್ಮ ಕೈಯ ಹೊಡೆತದಿಂದ ನಾನು ಕುಗ್ಗಿ ಹೋಗಿದ್ದೇನೆ.


ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು