Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:11 - ಕನ್ನಡ ಸಮಕಾಲಿಕ ಅನುವಾದ

11 ಯೋಬನ ಮೂವರು ಸ್ನೇಹಿತರು, ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಅವನಿಗೆ ಬಂದ ಈ ಎಲ್ಲಾ ಕಷ್ಟನಷ್ಟವನ್ನು ಕುರಿತು ಕೇಳಿ, ಯೋಬನಿಗೆ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸುವುದಕ್ಕೆ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡು, ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ, “ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ, ಅವನನ್ನು ಸಂತೈಸೋಣ ಬನ್ನಿರಿ” ಎಂದು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತೇಮಾನ್ಯನಾದ ಎಲೀಫಜನು ಶೂಹ್ಯನಾದ ಬಿಲ್ದದನು ನಾಮಾಥ್ಯನಾದ ಚೋಫರನು ಎಂಬ ಯೋಬನ ಮೂವರು ಸ್ನೇಹಿತರು ಅವನಿಗೆ ಸಂಭವಿಸಿದ ಆಪತ್ತಿನ ಸುದ್ದಿಯನ್ನು ಕೇಳಿದೊಡನೆ - ನಾವೆಲ್ಲರೂ ಕೂಡಿ ನಮ್ಮ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತಯಿಸೋಣ ಬನ್ನಿರಿ ಎಂದು ಗೊತ್ತುಮಾಡಿಕೊಂಡು ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೋಬನ ಮೂವರು ಗೆಳೆಯರು ಯಾರೆಂದರೆ: ತೇಮಾನಿನ ಎಲೀಫಜನು, ಶೂಹದ ಬಿಲ್ದದನು ಮತ್ತು ನಾಮಾಥದ ಚೋಫರನು. ಯೋಬನಿಗೆ ಸಂಭವಿಸಿದ ಆಪತ್ತುಗಳ ಬಗ್ಗೆ ಈ ಮೂವರು ಗೆಳೆಯರು ಕೇಳಿದಾಗ ತಮ್ಮ ಮನೆಯಿಂದ ಹೊರಟು ಒಟ್ಟಾಗಿ ಭೇಟಿಯಾದರು. ಯೋಬನ ಬಳಿಗೆ ಹೋಗಿ ಅನುತಾಪ ಸೂಚಿಸಿ ಸಂತೈಸಲು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:11
34 ತಿಳಿವುಗಳ ಹೋಲಿಕೆ  

ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.


ಆಗ ಯೋಬನ ಎಲ್ಲಾ ಸಹೋದರರು, ಸಹೋದರಿಯರು, ಹಿಂದಿನ ಪರಿಚಿತರೆಲ್ಲರೂ ಅವನ ಬಳಿಗೆ ಬಂದರು. ಅವರು ಯೋಬನ ಸಂಗಡ ಅವನ ಮನೆಯಲ್ಲಿ ಊಟಮಾಡಿ, ಯೆಹೋವ ದೇವರು ಅವನ ಮೇಲೆ ಬರಮಾಡಿದ ಎಲ್ಲಾ ಆಪತ್ತಿಗಾಗಿ ಸಂತಾಪ ವ್ಯಕ್ತಪಡಿಸಿ ಅವನನ್ನು ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಯೋಬನಿಗೆ ಕೊಟ್ಟರು.


ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?


ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ; ಆಪತ್ತಿನಲ್ಲಿ ಸಹಾಯಮಾಡುವಗೋಸ್ಕರ ಸಹೋದರನು ಹುಟ್ಟಿದ್ದಾನೆ.


“ಒಬ್ಬನು ಸರ್ವಶಕ್ತರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ, ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.


ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ.


ಆಕೆಯು ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.


ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯವಾಗಿ ಸಂತೈಸುವುದಕ್ಕೆ ಬಂದಿದ್ದರು.


“ಕನಿಕರಿಸಿರಿ, ನನ್ನ ಸ್ನೇಹಿತರೇ, ನನ್ನನ್ನು ಕನಿಕರಿಸಿರಿ, ಏಕೆಂದರೆ ದೇವರ ಕೈ ನನ್ನನ್ನು ದಂಡಿಸಿದೆ.


“ನಾನು ಇವುಗಳ ಹಾಗೆ ಅನೇಕ ಮಾತುಗಳನ್ನು ಕೇಳಿದ್ದೇನೆ; ನೀವೆಲ್ಲರೂ ಆದರಣೆ ಕೊಡುವವರಲ್ಲ, ಬಾಧಿಸುವವರೇ.


ತೇಮದ ವರ್ತಕರ ಗುಂಪುಗಳು ನೀರಿಗಾಗಿ ಹಂಬಲಿಸುತ್ತಾರೆ; ಶೆಬದ ವ್ಯಾಪಾರಿಗಳು ನಿರೀಕ್ಷೆಯಿಂದ ನೋಡುತ್ತಾರೆ.


ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಅವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನನಿಗೆ ಶೆಬಾ ಮತ್ತು ದೆದಾನ್ ಹುಟ್ಟಿದರು.


ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.


ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್, ಓಮಾರ್, ಚೆಫೋ, ಕೆನಜ್,


ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್.


ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.


ಈ ಎರಡು ಸಂಗತಿಗಳು ನಿನಗೆ ಸಂಭವಿಸಿವೆ, ನಿನಗೋಸ್ಕರ ಚಿಂತಿಸುವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಖಡ್ಗವೋ, ಯಾರು ನಿನ್ನನ್ನು ಸಂತೈಸುವರು?


ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.


ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.


ಯೆಹೋವ ದೇವರು ಯೋಬನ ಸಂಗಡ ಮಾತಾಡಿದ ತರುವಾಯ, ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ನನಗೆ ಕೋಪವಿದೆ. ಏಕೆಂದರೆ ನೀವು ನನ್ನ ದಾಸನಾದ ಯೋಬನಂತೆ ನೀವು ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ.


ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಕಂಡು ಅಸಹ್ಯಪಡುತ್ತಾರೆ; ನಾನು ಪ್ರೀತಿ ಮಾಡಿದವರೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಆಗ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೀಗೆಂದನು:


ಆದರೆ ನನ್ನ ಮಿತ್ರ ನನಗಾಗಿ ವಿಜ್ಞಾಪನೆಮಾಡುತ್ತಿದ್ದಾರೆ; ನನ್ನ ಕಣ್ಣುಗಳು ದೇವರ ಮುಂದೆ ಕಣ್ಣೀರು ಸುರಿಸುತ್ತವೆ.


ಆಗ ತೇಮಾನ್ಯನಾದ ಎಲೀಫಜನು ಹೀಗೆಂದನು:


ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರು ವ್ಯರ್ಥ ವೈದ್ಯರೇ.


ಆಗ, ಶೂಹ್ಯನಾದ ಬಿಲ್ದದನು ಈ ಪ್ರಕಾರ ಉತ್ತರಕೊಟ್ಟನು:


ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು.


ಅವರ ತಂದೆಯಾದ ಎಫ್ರಾಯೀಮನು ಅನೇಕ ದಿವಸಗಳು ದುಃಖಪಟ್ಟದ್ದರಿಂದ, ಅವನ ಸಹೋದರರು ಅವನನ್ನು ಆದರಿಸಲು ಬಂದರು.


ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು ಮತ್ತು ನಾಮಾಥ್ಯನಾದ ಚೋಫರನು ಹೋಗಿ ಯೆಹೋವ ದೇವರು ತಮಗೆ ಹೇಳಿದಂತೆ ಮಾಡಿದರು. ಯೆಹೋವ ದೇವರು ಯೋಬನ ಪ್ರಾರ್ಥನೆಯನ್ನು ಸ್ವೀಕರಿಸಿದರು.


ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶವಾಗುವ ಹಾಗೆ ತೇಮಾನೇ, ನಿನ್ನ ಪರಾಕ್ರಮಶಾಲಿಗಳು ಗಾಬರಿಪಡುವರು.


ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು.


ಗೆದೇರೋತ್, ಬೇತ್‌ದಾಗೋನ್, ನಾಮಾ, ಮಕ್ಕೇದಾ, ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು.


ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟನು:


ಆಗ ನಾಮಾಥ್ಯನಾದ ಚೋಫರನು ಹೀಗೆಂದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು