Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 2:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ, ಯಥಾರ್ಥನೂ, ದೇವರಿಗೆ ಭಯಪಡುವವನೂ, ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನಗೆ ಸೂಚಿಸಿದರೂ, ಅವನು ಇನ್ನೂ ತನ್ನ ಯಥಾರ್ಥತೆಯಲ್ಲಿ ದೃಢವಾಗಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಯೆಹೋವನು ಸೈತಾನನಿಗೆ, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನ್ನನ್ನು ಪ್ರೇರೇಪಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಯೆಹೋವನು ಸೈತಾನನಿಗೆ - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನನ್ನು ಕಾರಣವಿಲ್ಲದೆ ನಾಶನಮಾಡುವದಕ್ಕೆ ನೀನು ನನ್ನನ್ನು ಪ್ರೇರಿಸಿದರೂ ಅವನು ತನ್ನ ಯಥಾರ್ಥತ್ವವನ್ನು ಬಿಡದೆ ಇದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 2:3
26 ತಿಳಿವುಗಳ ಹೋಲಿಕೆ  

ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ,” ಎಂದರು.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.


ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ಬಹುದೂರ. ತನ್ನ ಮಾರ್ಗವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.


ಏಕೆಂದರೆ ದೇವರು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾರೆ; ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸುತ್ತಾರೆ.


ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ.


ಯೇಸು, “ಈ ಮನುಷ್ಯನಾಗಲಿ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ವ್ಯಕ್ತವಾಗುವಂತೆ ಹೀಗಾಯಿತು.


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.


ತನ್ನ ಯಥಾರ್ಥತೆಯಲ್ಲಿ ನಡೆಯುವವನು ಯೆಹೋವ ದೇವರಿಗೆ ಭಯಪಡುತ್ತಾನೆ, ಆದರೆ ಅವರನ್ನು ತಿರಸ್ಕರಿಸುವವರು ತಮ್ಮ ಮಾರ್ಗಗಳಲ್ಲಿ ಮೋಸ ಹೋಗುತ್ತಾರೆ.


ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ; ಆದರೆ ದುಷ್ಟತನವು ಪಾಪಿಯನ್ನು ಕೆಡವುತ್ತದೆ.


ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ, ದುಷ್ಟನು ಅದರ ಸ್ಥಳದಲ್ಲಿ ಸಿಕ್ಕಿಬೀಳುವನು.


ಆದರೆ ನೀವು ನನ್ನ ಪ್ರಾಮಾಣಿಕತೆಯ ಕಾರಣ ನನ್ನನ್ನು ಎತ್ತಿ ಹಿಡಿದಿರುವಿರಿ; ನೀವು ನನ್ನನ್ನು ನಿತ್ಯವಾಗಿ ನಿಮ್ಮ ಸಮ್ಮುಖದಲ್ಲಿ ಇರಿಸುವಿರಿ.


ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.


ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು.


ನಾನು ನೀತಿವಂತನಾಗಿದ್ದರೂ, ನನ್ನ ಸ್ವಂತ ಬಾಯೇ ನನ್ನನ್ನು ಖಂಡಿಸುತ್ತದೆ; ನಾನು ನಿರ್ದೋಷಿಯಾಗಿದ್ದರೂ, ದೇವರು ನನ್ನನ್ನು ಅಪರಾಧಿ ಎಂದು ನಿರೂಪಿಸುವರು.


ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು.


ಅದಕ್ಕೆ ಯೋವಾಬನು ಉತ್ತರವಾಗಿ, “ನಾನು ಅದನ್ನು ಎಂದಿಗೂ ಮಾಡುವುದಿಲ್ಲ. ನುಂಗುವುದನ್ನೂ ಹಾಳುಮಾಡುವುದನ್ನೂ ನಾನು ಎಂದಿಗೂ ಮಾಡುವುದಿಲ್ಲ.


ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.


ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ.


ಆಗ ಯೆಹೋವ ದೇವರು ಸೈತಾನನಿಗೆ, “ನೀನು ಎಲ್ಲಿಂದ ಬಂದೆ?” ಎಂದರು. ಸೈತಾನನು ಯೆಹೋವ ದೇವರಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗಾಡುತ್ತಾ ಇದ್ದು ಬಂದೆನು,” ಎಂದನು.


ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ,” ಎಂದ ಹಾಗೆ, “ಒಬ್ಬ ಮನುಷ್ಯನು ತನ್ನ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ಕೊಡುವನು.


ಒಂದು ದಿನ, ದೇವದೂತರು ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿಬಂದಾಗ, ಸೈತಾನನು ಸಹ ಅವರೊಂದಿಗೆ ಸೇರಿಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು