Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:21 - ಕನ್ನಡ ಸಮಕಾಲಿಕ ಅನುವಾದ

21 ಅವನಿಗೆ ಆಹಾರವು ಉಳಿಯದು; ಆದ್ದರಿಂದ ಅವನ ಸಮೃದ್ಧಿಯು ಅಸ್ಥಿರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಏನೂ ಉಳಿಯದಂತೆ ಅವನು ನುಂಗಿಬಿಟ್ಟಿದರಿಂದ; ಅವನ ಸುಖವು ಅಸ್ಥಿರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಏನನ್ನೂ ಬಿಡದೆ ಕಬಳಿಸಿದ ಅವನ ಸಂತಾನಕ್ಕೆ ಉಳಿಗಾಲವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಏನೂ ವಿುಗದಂತೆ ಅವನು ನುಂಗಿಬಿಟ್ಟದರಿಂದ ಅವನ ಸುಖವು ಅಸ್ಥಿರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅವನು ತಿಂದ ಮೇಲೆ ಏನೂ ಉಳಿದುರುವುದಿಲ್ಲ. ಅವನ ಅಭಿವೃದ್ಧಿಯು ನಿಂತುಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:21
9 ತಿಳಿವುಗಳ ಹೋಲಿಕೆ  

ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ, ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಹಾಗೆಯೇ ಇದ್ದಾನೆ. ಅವನು ತನ್ನ ಮಧ್ಯಪ್ರಾಯದಲ್ಲಿ ಅದನ್ನು ಬಿಡುವನು. ತನ್ನ ಅಂತ್ಯದಲ್ಲಿ ಅವನು ಮೂರ್ಖನೆಂದು ಸಾಬೀತಾಗುತ್ತದೆ.


ಅವನ ಜನರಲ್ಲಿ ಅವನಿಗೆ ಮಗನೂ, ಮೊಮ್ಮಗನೂ ಇರುವುದಿಲ್ಲ, ಅವನು ವಾಸಿಸಿದ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.


ದುಷ್ಟನು ಐಶ್ವರ್ಯವಂತನಾಗುವುದಿಲ್ಲ; ಆದರೂ ಅವನ ಆಸ್ತಿಯು ಸ್ಥಿರವಲ್ಲ; ಅವನ ಸೊತ್ತು ಭೂಮಿಯ ಮೇಲೆ ವಿಸ್ತಾರವಾಗುವುದಿಲ್ಲ.


ಭಯಂಕರವಾದ ಸಂಗತಿಗಳು ಅವನ ಕಿವಿಗೆ ಬೀಳುತ್ತವೆ; ಎಲ್ಲವು ಸುಖವಾಗಿರುವಾಗ ಸುಲಿಗೆ ಮಾಡುವವನು ದುಷ್ಟನ ಮೇಲೆ ದಾಳಿ ಮಾಡುತ್ತಾನೆ.


ಅಯ್ಯೋ, ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ, ಹೊಲಕ್ಕೆ ಹೊಲ ಸೇರಿಸುವ ನಿಮಗೆ ಕಷ್ಟ!


ಸೇನಾಧೀಶ್ವರ ಯೆಹೋವ ದೇವರು ನನ್ನ ಕಿವಿಗಳಲ್ಲಿ ಹೇಳುವುದೇನೆಂದರೆ: “ನಿಜವಾಗಿಯೂ ದೊಡ್ಡ ಮನೆಗಳು ಬರಿದಾಗುವುವು ಸುಂದರ ಭವನಗಳು ನಿವಾಸಿಗಳಿಲ್ಲದೆ ಹಾಳಾಗುವುವು.


“ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ, ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ವಿರೋಧಿಯು ದೇಶದ ಸುತ್ತಲೂ ಇರುವನು. ನಿನ್ನ ಬಲವನ್ನು ತಗ್ಗಿಸುವನು. ನಿನ್ನ ಅರಮನೆಗಳು ಸೂರೆಯಾಗುವುವು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು