Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:27 - ಕನ್ನಡ ಸಮಕಾಲಿಕ ಅನುವಾದ

27 ಆಕಾಶವು ಅವನ ಅಪರಾಧವನ್ನು ಪ್ರಕಟಿಸುವುದು; ಭೂಮಿಯು ಅವನಿಗೆ ವಿರೋಧವಾಗಿ ಏಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಕಾಶವು ಅವನ ಪಾಪವನ್ನು ಬಯಲುಪಡಿಸುವುದು. ಭೂಮಿಯು ಅವನ ವಿರುದ್ಧ ಸಾಕ್ಷಿಯಾಗಿ ಏಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಕಾಶವೇ ಅವನ ದೋಷವನು ಪ್ರಕಟಿಸುವುದು ಭೂಲೋಕವೇ ಅವನ ವಿರುದ್ಧ ಸಾಕ್ಷಿನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಕಾಶವು ಅವನ ಪಾಪವನ್ನು ಬೈಲುಪಡಿಸುವದು. ಭೂವಿುಯು ಅವನ ವಿರುದ್ಧಸಾಕ್ಷಿಯಾಗಿ ಏಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದುಷ್ಟನು ಅಪರಾಧಿಯೆಂದು ಪರಲೋಕವು ನಿರೂಪಿಸುತ್ತದೆ. ಭೂಮಿಯು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:27
10 ತಿಳಿವುಗಳ ಹೋಲಿಕೆ  

ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.


“ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ, ನನ್ನ ಕೂಗು ವಿಶ್ರಾಂತಿ ಹೊಂದದಿರಲಿ!


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಏಕೆಂದರೆ ಅವರು ತಮ್ಮ ನೆರೆಯವರ ಹೆಂಡರ ಸಂಗಡ ವ್ಯಭಿಚಾರ ಮಾಡಿ, ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ, ಇಸ್ರಾಯೇಲಿನಲ್ಲಿ ನೀಚತನವನ್ನು ನಡೆಸಿದರು. ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; ಅವನು ಲೋಕದಿಂದ ಬಹಿಷ್ಕರಿಸಲಾಗುವನು.


ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ, ನಿಮ್ಮ ಅಧಿಕಾರಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ಆಗ ಈ ಮಾತುಗಳನ್ನು ಅವರು ಕೇಳುವ ಹಾಗೆ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು