Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:5 - ಕನ್ನಡ ಸಮಕಾಲಿಕ ಅನುವಾದ

5 ದುಷ್ಟರ ಜಯವು ಅಲ್ಪ ಕಾಲ, ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದುಷ್ಟರ ಉತ್ಸಾಹಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:5
25 ತಿಳಿವುಗಳ ಹೋಲಿಕೆ  

ಆದರೆ ನೀವು ನಿಮ್ಮ ಹೊಗಳಿಕೆಯ ಯೋಜನೆಗಳಲ್ಲಿ ಹೆಮ್ಮೆಪಡುತ್ತೀರಿ. ಅಂಥಾ ಅಹಂಭಾವವೆಲ್ಲಾ ಕೆಟ್ಟದ್ದೆ.


ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ, ಆಗ ಅವನು ತನ್ನಲ್ಲಿ ಮಾತ್ರ ಸಂತೋಷಪಡುವುದಕ್ಕೆ ಆಸ್ಪದವಾಗುವುದೇ ಹೊರತು ಮತ್ತೊಬ್ಬನಲ್ಲಿ ಅಲ್ಲ.


“ನನ್ನನ್ನು, ‘ಸ್ವಾಮೀ, ಸ್ವಾಮೀ,’ ಎಂದು ಹೇಳುವವರೆಲ್ಲರೂ ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ. ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ಅದರಲ್ಲಿ ಪ್ರವೇಶಿಸುವನು.


ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ, ಅವನಿಗೆ ನಿರೀಕ್ಷೆ ಎಲ್ಲಿ?


ಹೀಗೆ ಭಕ್ತಿಹೀನನ ಜೀವವು ಒಣಗಿಹೋಗುವುದು; ಆದರೆ ಆ ಮಣ್ಣಿನ ನೆಲದಿಂದ ಬೇರೆ ಸಸಿಗಳು ಮೊಳೆಯುವುದು.


ಮೂಢನು ಬೇರೂರುವುದನ್ನು ನಾನು ನೋಡಿದೆನು, ಕೂಡಲೇ ಅವನ ಮನೆ ಶಾಪಕ್ಕಿಡಾಗುವುದನ್ನು ಕಂಡೆನು.


ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.


ಭಕ್ತಿಹೀನನು ಆಳಬಾರದು, ಯಾರೂ ಜನರಿಗೆ ಉರುಲಾಗಬಾರದು, ಎಂಬುದೇ ಇದರಲ್ಲಿ ದೇವರ ಉದ್ದೇಶ.”


ಯೆಹೋವ ದೇವರೇ, ಎಲ್ಲಿಯವರೆಗೆ? ದುಷ್ಟರು ಎಷ್ಟರವರೆಗೆ ಹಿಗ್ಗುತ್ತಿರಬೇಕು?


ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.


ಆಗ ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯುವಕರು ಸುತ್ತಿಕೊಂಡು, ಅಬ್ಷಾಲೋಮನನ್ನು ಕೊಂದುಹಾಕಿದರು.


ನೀವು, ‘ಪ್ರಧಾನನ ಮನೆ ಈಗ ಎಲ್ಲಿದೆ? ದುಷ್ಟರು ವಾಸಿಸಿದ ಗುಡಾರ ಎಲ್ಲಿ?’ ಎನ್ನುತ್ತೀರಿ.


ಇನ್ನು ಸ್ವಲ್ಪ ಸಮಯದಲ್ಲಿ ದುಷ್ಟನು ಕಾಣದೆ ಹೋಗುವನು. ಅವನನ್ನು ಹುಡುಕಿದರೂ ಸಿಕ್ಕುವುದೇ ಇಲ್ಲ.


ಕೆಡುಕರು ಉಬ್ಬಿಕೊಂಡು ಮಾತನಾಡುತ್ತಾರೆ. ಕೇಡು ಮಾಡುವವರೆಲ್ಲರೂ ಕೊಚ್ಚಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು