Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 20:8 - ಕನ್ನಡ ಸಮಕಾಲಿಕ ಅನುವಾದ

8 ಭಕ್ತಿಹೀನನು ಕನಸಿನ ಹಾಗೆ ಹಾರಿಹೋಗುವನು, ಇನ್ನೆಂದಿಗೂ ಸಿಗಲಾರನು; ಅವನು ಕತ್ತಲೆಯ ಹಾಗೆ ಕಾಣದೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಸ್ವಪ್ನದಂತೆ ಮರೆಯಾಗಿ ಸಿಕ್ಕುವುದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸ್ವಪ್ನದಂತೆ ಅವನು ಸಿಗದೆ ಹಾರಿಹೋಗುವನು ರಾತ್ರಿಯ ಕನಸಿನಂತೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಸ್ವಪ್ನದಂತೆ ಹಾರಿಹೋಗಿ ಸಿಕ್ಕುವದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ಕನಸಿನಂತೆ ಹಾರಿಹೋಗುವನು, ಯಾರೂ ಅವನನ್ನು ಮತ್ತೆ ನೋಡುವುದಿಲ್ಲ, ರಾತ್ರಿಯ ಕೆಟ್ಟ ಕನಸಿನಂತೆ ಅವನನ್ನು ಅಟ್ಟಿಬಿಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 20:8
14 ತಿಳಿವುಗಳ ಹೋಲಿಕೆ  

ನೀವು ಜನರನ್ನು ಮರಣ ನಿದ್ರೆಯ ಪ್ರವಾಹದಂತೆ ಹೋಗಲು ಅನುಮತಿಸುತ್ತೀರಿ. ಅವರು ಬೆಳಿಗ್ಗೆ ಬೆಳೆಯುವ ಹುಲ್ಲಿನ ಹಾಗೆ ಇದ್ದಾರೆ.


ಅವರು ನಿದ್ದೆಯಿಂದ ಎಚ್ಚರಗೊಂಡ ಕನಸಿನಂತೆ ಇರುತ್ತಾರೆ. ಯೆಹೋವ ದೇವರೇ, ನಿಮ್ಮ ದೃಷ್ಟಿಯಲ್ಲಿ ಅವರು ಅಲ್ಪರಾಗಿರಲಿ.


ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.


ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; ಅವನು ಲೋಕದಿಂದ ಬಹಿಷ್ಕರಿಸಲಾಗುವನು.


ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು.


ವಿಪತ್ತುಗಳು ಪ್ರವಾಹದಂತೆ ಅಂಥವರನ್ನು ಹಿಡಿಯುವುವು; ರಾತ್ರಿಯಲ್ಲಿ ಬಿರುಗಾಳಿ ಅಂಥವರನ್ನು ಅಪಹರಿಸುವುದು.


ನಮ್ಮ ಜೀವನದ ದಿನಗಳು ಎಪ್ಪತ್ತು ವರ್ಷ, ಬಲದಿಂದಿದ್ದರೆ ಎಂಬತ್ತು ವರ್ಷ. ಆದಾಗ್ಯೂ ಅವುಗಳ ಉತ್ತಮ ವರ್ಷಗಳು ಕಷ್ಟವೂ ಪ್ರಯಾಸವೂ ಆಗಿವೆ. ನಮ್ಮ ದಿನಗಳು ಬೇಗ ತೀರಿಹೋಗುತ್ತವೆ. ನಾವು ಹಾರಿಹೋಗುತ್ತೇವೆ.


ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು. ಆದರೆ ಅವನು ಎಡವಿಬಿದ್ದು, ಕಾಣದೆ ಹೋಗುವನು.


ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.


ನನ್ನನ್ನು ನೋಡುವವನ ಕಣ್ಣು, ಇನ್ನು ಮೇಲೆ ನನ್ನನ್ನು ನೋಡದು; ನೀವು ನನ್ನನ್ನು ನೋಡಿದರೂ, ನಾನು ಬದುಕಿರುವುದಿಲ್ಲ.


ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ? ನನ್ನ ಪಾಪವನ್ನು ಕ್ಷಮಿಸಬಾರದೇ? ನಾನು ಬೇಗ ಮಣ್ಣಿಗೆ ಸೇರಿಬಿಡುವೆನು; ನೀವು ನನ್ನನ್ನು ಹುಡುಕಿದರೆ ನಾನು ಇರುವುದಿಲ್ಲ.”


ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು