Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:12 - ಕನ್ನಡ ಸಮಕಾಲಿಕ ಅನುವಾದ

12 ಅವರು ದಮ್ಮಡಿಯಿಂದಲೂ, ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರು ದಮ್ಮಡಿ ಕಿನ್ನರಿಗಳೊಡನೆ ಸ್ವರವೆತ್ತಿ, ಕೊಳಲಿನ ಧ್ವನಿಗೆ ಉಲ್ಲಾಸಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹಾಡುತ್ತಾರೆ ತಂಬೂರಿ ವೀಣೆಗಳನು ನುಡಿಸುತ್ತಾ ಉಲ್ಲಾಸಿಸುತ್ತಾರೆ ಕೊಳಲಿನ ಸ್ವರ ಕೇಳುತ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು ದಮ್ಮಡಿಕಿನ್ನರಿಗಳೊಡನೆ ಸ್ವರವೆತ್ತಿ ಕೊಳಲಿನ ಧ್ವನಿಗೆ ಉಲ್ಲಾಸಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ತಂಬೂರಿಗಳನ್ನೂ ಹಾರ್ಪ್‌ವಾದ್ಯಗಳನ್ನೂ ಬಾರಿಸುತ್ತಾ ಹಾಡುವರು; ಕೊಳಲುಗಳ ಧ್ವನಿಗೆ ಉಲ್ಲಾಸಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:12
8 ತಿಳಿವುಗಳ ಹೋಲಿಕೆ  

ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.


ಇವನ ತಮ್ಮನ ಹೆಸರು ಯೂಬಾಲನು. ಇವನು ಕಿನ್ನರಿ ಕೊಳಲುಗಳನ್ನು ನುಡಿಸುವವರ ಮೂಲಪುರುಷನು.


ಆದರೆ ಉತ್ಸಾಹವು, ಸಂತೋಷವು, ದನ ಕೊಳ್ಳುವುದು, ಕುರಿ ಕಡಿಯುವುದು, ಮಾಂಸವನ್ನು ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.


ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಹೋದೆ? ಏಕೆ ಮೋಸಮಾಡಿದೆ? ನನಗೆ ತಿಳಿಸಿದ್ದರೆ ಸಂತೋಷದಿಂದ ಹಾಡು, ತಾಳ, ವೀಣೆಗಳ ಸಂಗೀತದೊಂದಿಗೆ ನಿನ್ನನ್ನು ಕಳುಹಿಸುತ್ತಿದ್ದೆನು.


ಅವರ ಮಕ್ಕಳು ಮಂದೆಯಾಗಿ ಹೊರನಡೆಯುತ್ತಾರೆ; ಅವರ ಚಿಕ್ಕವರು ಕುಣಿದಾಡುತ್ತಾ ಹೋಗುತ್ತಾರೆ.


ಅವರು ಸಂಪತ್ತಿನಲ್ಲಿ ತಮ್ಮ ದಿನಗಳನ್ನು ಕಳೆಯುತ್ತಾರೆ; ಕೊನೆಗೆ ಸಮಾಧಾನದಿಂದ ಸಮಾಧಿಗೆ ಸೇರುತ್ತಾರೆ.


ದಮ್ಮಡಿಯಿಂದಲೂ, ನಾಟ್ಯದಿಂದಲೂ ದೇವರನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಅವರನ್ನು ಸ್ತುತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು