Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:17 - ಕನ್ನಡ ಸಮಕಾಲಿಕ ಅನುವಾದ

17 “ಆದರೂ ಎಷ್ಟು ಸಾರಿ ದುಷ್ಟರ ದೀಪವು ಆರಿಹೋಗುತ್ತದೆ? ಎಷ್ಟು ಸಾರಿ ವಿಪತ್ತು ಅವರ ಮೇಲೆ ಬರುತ್ತದೆ? ದೇವರು ವೇದನೆಗಳನ್ನು ತಮ್ಮ ಬೇಸರದಿಂದ ಹಂಚುವುದು ಎಷ್ಟು ಸಾರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಾರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆ ದುರುಳರ ದೀಪ ಆರಿಹೋದದ್ದು ಎಷ್ಟುಸಾರಿ? ಅವರಿಗೆ ವಿಪತ್ತು ಸಂಭವಿಸಿದ್ದು ಎಷ್ಟುಸಾರಿ? ಅವರ ಕೋಪ ಅವರಿಗೆ ಸಂಕಟ ತಂದದ್ದು ಎಷ್ಟುಬಾರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದುಷ್ಟರ ದೀಪವು ಆರಿಹೋದದ್ದು ಎಷ್ಟು ಸಾರಿ? ಎಷ್ಟು ಸಾರಿ ಉಪದ್ರವವು ಅವರಿಗೆ ಸಂಭವಿಸಿದೆ? ದೇವರು ಕೋಪಗೊಂಡು ಅವರ ಪಾಲಿಗೆ ಸಂಕಟಗಳನ್ನು ಕೊಟ್ಟದ್ದು ಎಷ್ಟು ಸಲ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಷ್ಟು ಸಲ ದುಷ್ಟರ ದೀಪವು ಆರಿಹೋಯಿತು? ಎಷ್ಟು ಸಲ ದುಷ್ಟರಿಗೆ ನಾಶನವು ಬರುವುದು? ದೇವರು ಎಷ್ಟು ಸಲ ಅವರ ಮೇಲೆ ಕೋಪಗೊಂಡು ಅವರನ್ನು ದಂಡಿಸುವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:17
13 ತಿಳಿವುಗಳ ಹೋಲಿಕೆ  

ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು, ಅವನನ್ನು ಕಠಿಣವಾಗಿ ಹೊಡಿಸಿ ಅವಿಶ್ವಾಸಿಗಳಿಗೆ ಆಗ ಸಿಕ್ಕುವ ಪಾಲನ್ನು ಅವನಿಗೆ ನೇಮಿಸುವನು.


ಬುದ್ಧಿಹೀನರು ಬುದ್ಧಿವಂತೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿರಿ, ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ,’ ಎಂದರು.


ಏಕೆಂದರೆ ಕೆಡುಕನಿಗೆ ಭವಿಷ್ಯದ ನಿರೀಕ್ಷೆ ಇರುವುದಿಲ್ಲ; ದುಷ್ಟರ ದೀಪವು ಆರಿಹೋಗುವುದು.


ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು.


ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ; ದುಷ್ಟರ ದೀಪವು ಆರಿಹೋಗುವುದು.


ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಯೆಹೋವ ದೇವರಲ್ಲಿ ಭರವಸವಿಡುವವನನ್ನು ಅದರ ಒಂಡಬಡಿಕೆಯ ಪ್ರೀತಿಯು ಸುತ್ತುವರಿಯುವುದು.


ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; ಅವನು ಲೋಕದಿಂದ ಬಹಿಷ್ಕರಿಸಲಾಗುವನು.


ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ.


ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವರು? ಸರ್ವಶಕ್ತರು ಉನ್ನತಾಕಾಶದಿಂದ ಕೊಡುವ ಬಾಧ್ಯತೆ ಯಾವುದು?


ದುಷ್ಟರಿಗೆ ವಿಪತ್ತು ಇಲ್ಲವೋ? ಕೆಡುಕರಿಗೆ ವಿನಾಶ ಇಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು