Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:21 - ಕನ್ನಡ ಸಮಕಾಲಿಕ ಅನುವಾದ

21 ದುಷ್ಟರಿಗೆ ನೇಮಕವಾದ ತಿಂಗಳುಗಳು ಮುಗಿದು ಹೋದ ಮೇಲೆ ತಾವು ಬಿಟ್ಟುಹೋಗುವ ಕುಟುಂಬದವರ ಚಿಂತೆ ಅವರಿಗೆ ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನಿಗೆ ನೇಮಕವಾದ ದಿನಗಳು ಮುಗಿದುಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನ ಆಯುಸ್ಸೇ ಕತ್ತರಿಸಿಹೋದ ಮೇಲೆ ಅವನಿಗೆಲ್ಲಿಯದು ತನ್ನಾನಂತರ ಬರುವ ಸಂತತಿಯ ಚಿಂತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನ ಆಯುಸ್ಸೇ ಕತ್ತರಿಸಿಹೋದ ಮೇಲೆ ತನ್ನನ್ನು ಹಿಂಬಾಲಿಸುವ ಸಂತತಿಯವರ ಚಿಂತೆ ಏನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದುಷ್ಟನ ಜೀವಿತವು ಮುಗಿದುಹೋದ ಮೇಲೆ, ತಾನು ಬಿಟ್ಟುಹೋಗಿರುವ ತನ್ನ ಕುಟುಂಬದ ಬಗ್ಗೆ ಅವನು ಚಿಂತಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:21
8 ತಿಳಿವುಗಳ ಹೋಲಿಕೆ  

ಮನುಷ್ಯನ ದಿನಗಳು ಇಷ್ಟೇ ಎಂದು ತೀರ್ಮಾನವಾಗಿದೆ; ಅವನ ತಿಂಗಳುಗಳ ಲೆಕ್ಕ ದೇವರೇ ನಿಮ್ಮ ಬಳಿಯಲ್ಲಿ ಇದೆ; ಅವನು ದಾಟಲಾರದ ಹಾಗೆ ಅವನಿಗೆ ಮೇರೆಗಳನ್ನು ನೇಮಿಸಿದ್ದೀರಿ.


ಆದ್ದರಿಂದ ನಾನು, “ನನ್ನ ದೇವರೇ, ನನ್ನ ಆಯುಷ್ಯದ ಮಧ್ಯದಲ್ಲಿ ನನ್ನನ್ನು ತೆಗೆದುಕೊಳ್ಳಬೇಡಿರಿ; ನಿಮ್ಮ ವರ್ಷಗಳು ತಲತಲಾಂತರಗಳಿಗೂ ಇವೆ.


ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.


ಮಕ್ಕಳು ಘನತೆಯನ್ನು ಹೊಂದಿದರೆ, ಅದು ಸತ್ತವರಿಗೆ ತಿಳಿಯುವುದಿಲ್ಲ; ಅವರ ಮಕ್ಕಳು ಕಡಿಮೆ ಸ್ಥಿತಿಗೆ ಬಂದರೆ ಸಹ, ಅದನ್ನು ಸತ್ತವರು ಗ್ರಹಿಸಿಕೊಳ್ಳುವುದಿಲ್ಲ.


ದುಷ್ಟರು ತಮ್ಮ ವಿನಾಶವನ್ನು ತಾವಾಗಿಯೇ ನೋಡಲಿ; ಸರ್ವಶಕ್ತರ ದಂಡನೆಯನ್ನು ಅವನು ಅನುಭವಿಸಲಿ.


“ದೇವರಿಗೆ ಅರಿವನ್ನು ಬೋಧಿಸಬಹುದೇ? ಉನ್ನತರಿಗೂ ನ್ಯಾಯತೀರಿಸುವುದು ದೇವರೇ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು