Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:27 - ಕನ್ನಡ ಸಮಕಾಲಿಕ ಅನುವಾದ

27 “ನೋಡಿರಿ, ನಿಮ್ಮ ಆಲೋಚನೆಗಳನ್ನು ನಾನು ಬಲ್ಲೆನು. ನೀವು ನನಗೆ ವಿರೋಧವಾಗಿ ಮಾಡುವ ಕುಯುಕ್ತಿಗಳನ್ನೂ ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಹಾ, ನಿಮ್ಮ ಯೋಚನೆಗಳನ್ನು ಬಲ್ಲೆ, ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಕೇಳಿ, ನಿಮ್ಮ ಆಲೋಚನೆಗಳನು ನಾನು ಬಲ್ಲೆ ನನಗೆ ವಿರುದ್ಧ ನೀವು ಮಾಡುವ ಕುಯುಕ್ತಿ ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಹಾ, ನಿಮ್ಮ ಯೋಚನೆಗಳನ್ನು ಬಲ್ಲೆ, ನೀವು ನನಗೆ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ತಿಳಿದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಆದರೆ, ನಿಮ್ಮ ಆಲೋಚನೆಗಳನ್ನು ಬಲ್ಲೆ, ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ನಾನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:27
14 ತಿಳಿವುಗಳ ಹೋಲಿಕೆ  

ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವುದೇನು?


ನಿಮ್ಮ ಆಜ್ಞೆಗಳೆಲ್ಲಾ ಭರವಸೆಗೆ ಯೋಗ್ಯವಾದವುಗಳೇ; ಕಾರಣವಿಲ್ಲದೆ ಜನರು ನನ್ನನ್ನು ಹಿಂಸಿಸುವುದರಿಂದ ನನಗೆ ಸಹಾಯಮಾಡಿರಿ.


ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅವನು ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.


ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಹಾನಿಮಾಡಲು ಸಿದ್ಧರಾಗಿದ್ದಾರೆ. ನನ್ನ ಅವಸ್ಥೆಯನ್ನು ನೋಡಿರಿ, ನನಗೆ ಸಹಾಯ ಮಾಡುವುದಕ್ಕೆ ಸಿದ್ಧರಾಗಿರಿ.


ಯೆಹೋವ ದೇವರು ಯೋಬನ ಸಂಗಡ ಮಾತಾಡಿದ ತರುವಾಯ, ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ನನಗೆ ಕೋಪವಿದೆ. ಏಕೆಂದರೆ ನೀವು ನನ್ನ ದಾಸನಾದ ಯೋಬನಂತೆ ನೀವು ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ.


ಯೋಬನ ಮೂವರು ಸ್ನೇಹಿತರ ಮೇಲೆಯೂ ಎಲೀಹು ಕೋಪಗೊಂಡನು. ಅವರು ಉತ್ತರ ಕಂಡುಕೊಳ್ಳದೆ, ಯೋಬನನ್ನು ಖಂಡಿಸಿದ್ದರಿಂದ ಎಲೀಹುವಿನ ಕೋಪ ಉರಿಯಿತು.


ದುಷ್ಟನಿಗೆ ದೇವರಿಂದ ಬರುವ ಪಾಲೂ, ಅವನಿಗೆ ನೇಮವಾಗಿರುವ ಬಾಧ್ಯತೆಯೂ ಇವೇ.”


ದುಷ್ಟರ ಜಯವು ಅಲ್ಪ ಕಾಲ, ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ.


ಇವರಿಬ್ಬರೂ ಮಣ್ಣಿಗೆ ಸೇರುತ್ತಾರೆ; ಹುಳುಗಳು ಅವರನ್ನು ಮುತ್ತಿಕೊಳ್ಳುತ್ತವೆ.


ನೀವು, ‘ಪ್ರಧಾನನ ಮನೆ ಈಗ ಎಲ್ಲಿದೆ? ದುಷ್ಟರು ವಾಸಿಸಿದ ಗುಡಾರ ಎಲ್ಲಿ?’ ಎನ್ನುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು