Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 21:33 - ಕನ್ನಡ ಸಮಕಾಲಿಕ ಅನುವಾದ

33 ಕಣಿವೆಯಲ್ಲಿನ ಮಣ್ಣು ಅವರಿಗೆ ಸಿಹಿಯಾಗಿರುತ್ತದೆ; ಪ್ರತಿಯೊಬ್ಬರೂ ಅವರನ್ನು ಹಿಂಬಾಲಿಸುತ್ತಾರೆ. ಹೀಗೆ ಅವರನ್ನು ಲೆಕ್ಕವಿಲ್ಲದಷ್ಟು ಜನರು ಹಿಂಬಾಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಕಣಿವೆಯ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು. ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವನಿಗೆ ಹಿಡಿಸುತ್ತದೆ ತಗ್ಗಿನಾ ಹೆಂಟೆಮಣ್ಣು ಅವನನು ಹಿಂಬಾಲಿಸುತ್ತಾರೆ ಅಸಂಖ್ಯಾತ ಜನರು ಮುಂದಕ್ಕೂ ಹಿಂಬಾಲಿಸುತ್ತಾರೆ ಲೆಕ್ಕವಿಲ್ಲದ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆ ತಗ್ಗಿನ ಪ್ರದೇಶದ ಹೆಂಟೆಗಳು ಅವನಿಗೆ ಒಪ್ಪಿತವಾಗಿರುವವು. ಅವನಿಗಿಂತ ಹಿಂದೆ ಲೆಕ್ಕವಿಲ್ಲದಷ್ಟು ಜನರು ಹೀಗೆಯೇ ಇದ್ದರು, ಇನ್ನು ಮುಂದೆ ಸಮಸ್ತರೂ ಹೀಗೆಯೇ ಅವನನ್ನು ಹಿಂಬಾಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆ ದುಷ್ಟನಿಗೆ ಕಣಿವೆಯ ಮಣ್ಣು ಸಿಹಿಯಾಗಿರುವುದು. ಅವನ ಶವಸಂಸ್ಕಾರದ ಮೆರವಣಿಗೆಯಲ್ಲಿ ಸಾವಿರಾರು ಜನರು ಸೇರಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 21:33
11 ತಿಳಿವುಗಳ ಹೋಲಿಕೆ  

ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.


ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, ಸೇರಿಸುವಿರಿ ಎಂದು ನನಗೆ ಗೊತ್ತಿದೆ.


ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.


ನಮ್ಮ ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ಸಾಯುವ ಸಮಯವನ್ನು ತಡೆಯುವ ಶಕ್ತಿಯು ಸಹ ಯಾರಿಗೂ ಇಲ್ಲ. ಯುದ್ಧ ಸಮಯದಲ್ಲಿ ಹೇಗೆ ವಿರಾಮ ಇರುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತ್ವದಿಂದ ಬಿಡುಗಡೆಯೇ ಇಲ್ಲ.


ಸಂತತಿಗಳು ಬರುತ್ತವೆ, ಸಂತತಿಗಳು ಹೋಗುತ್ತವೆ; ಆದರೆ ಭೂಮಿಯು ಶಾಶ್ವತವಾಗಿ ಉಳಿಯುತ್ತದೆ.


ಅವರು ಸ್ವಲ್ಪಕಾಲ ಉನ್ನತವಾಗಿದ್ದು ನಂತರ ಇಲ್ಲದೆ ಹೋಗುತ್ತಾರೆ; ಅವರು ಎಲ್ಲಾ ಮನುಷ್ಯರಂತೆ ಕೊಯ್ದ ತೆನೆಯ ಹಾಗೆ ಕೆಳಗೆ ಬಿದ್ದು ಕಾಳಿನಂತೆ ಬೇರ್ಪಡುತ್ತಾರೆ.


ನಿರೀಕ್ಷೆಯು ನನ್ನ ಸಂಗಡ ಪಾತಾಳಕ್ಕೆ ಇಳಿದು ಬರುವುದೇ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?”


ಅವರು ಸಮಾಧಿ ಸೇರಿದ ಮೇಲೆ ಸಂತೋಷ ಸಂಭ್ರಮದಿಂದ ಹರ್ಷಿಸುವರೋ?


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ದುಷ್ಟರನ್ನು ಸಮಾಧಿಗೆ ಒಯ್ಯುತ್ತಾರೆ. ಅವರ ಗೋರಿಗೆ ಕಾವಲು ಇಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು