Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:12 - ಕನ್ನಡ ಸಮಕಾಲಿಕ ಅನುವಾದ

12 “ದೇವರು ಸ್ವರ್ಗದಲ್ಲಿ ಇದ್ದಾರಲ್ಲವೇ? ನಕ್ಷತ್ರಮಂಡಲವನ್ನು ನೋಡು, ಅವು ಎಷ್ಟು ಉನ್ನತ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೇವರು ಉನ್ನತ ಆಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದೇವರು ಉನ್ನತ ಆಕಾಶದಲ್ಲಿ ಇದ್ದಾನಲ್ಲವೇ? ನಕ್ಷತ್ರಗಳನ್ನು ನೋಡು, ಎಷ್ಟು ಗಹನವಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೇವರು ಉನ್ನತಾಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ದೇವರು ಅತ್ಯುನ್ನತವಾದ ಪರಲೋಕದಲ್ಲಿ ವಾಸಿಸುತ್ತಾನೆ. ಆತನು ಅತ್ಯಂತ ಎತ್ತರದಲ್ಲಿರುವ ನಕ್ಷತ್ರಗಳನ್ನು ಬಗ್ಗಿ ನೋಡುವನು. ನಕ್ಷತ್ರಗಳು ಎಷ್ಟು ಎತ್ತರದಲ್ಲಿವೆ ಎಂಬುದನ್ನು ನೀನು ನೋಡಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:12
10 ತಿಳಿವುಗಳ ಹೋಲಿಕೆ  

ನೀನು ದುಡುಕಿ ಮಾತನಾಡಬೇಡ, ದೇವರ ಮುಂದೆ ಮಾತನಾಡಲು ನಿನ್ನ ಹೃದಯವು ಆತುರಪಡದೇ ಇರಲಿ. ದೇವರು ಪರಲೋಕದಲ್ಲಿದ್ದಾರೆ. ನೀನಾದರೋ ಭೂಮಿಯ ಮೇಲೆ ಇರುವೆ, ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.


ಅದು ಆಕಾಶಕ್ಕಿಂತಲೂ ಎತ್ತರವಾಗಿದೆ; ಆಗ ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳವಾಗಿದೆ; ಆಗ ನೀನೇನು ತಿಳುಕೊಳ್ಳುವಿ?


ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?


ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.


ಉನ್ನತ ಆಕಾಶಗಳು ಯೆಹೋವ ದೇವರದೇ, ಆದರೆ ಅವರು ಭೂಮಿಯನ್ನು ಮಾನವರಿಗೆ ಕೊಟ್ಟಿದ್ದಾರೆ.


ನಮ್ಮ ದೇವರು ಪರಲೋಕದಲ್ಲಿದ್ದಾರೆ; ಅವರು ಇಚ್ಛಿಸುವುದನ್ನೆಲ್ಲಾ ಮಾಡುತ್ತಾರೆ.


“ನೀನು ದೇವರ ರಹಸ್ಯಗಳನ್ನು ಕಂಡುಕೊಳ್ಳುವಿಯಾ? ಸರ್ವಶಕ್ತರ ಮಿತಿಯನ್ನು ನಿನ್ನಿಂದ ಪರೀಕ್ಷಿಸಲಾದೀತೇ?


ಆಕಾಶಗಳನ್ನು ದೃಷ್ಟಿಸಿ ನೋಡು; ನಿನಗಿಂತಲೂ ಎತ್ತರವಾಗಿರುವ ಮೇಘಗಳನ್ನು ದೃಷ್ಟಿಸು.


ದೇವರ ಆಲಯಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂರ್ಖರು ಅರ್ಪಿಸುವ ಯಜ್ಞಕ್ಕಿಂತ, ದೇವರ ಸಮೀಪವಾಗಿದ್ದು ಅವರಿಗೆ ಕಿವಿಗೊಟ್ಟು ಆಲಿಸುವುದು ಲೇಸು. ತಾವು ತಪ್ಪು ಮಾಡುತ್ತಿದ್ದಾರೆಂದು ಮೂಢರಿಗೆ ತಿಳಿಯುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು