Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:20 - ಕನ್ನಡ ಸಮಕಾಲಿಕ ಅನುವಾದ

20 ‘ನಮಗೆ ವಿರುದ್ಧವಾಗಿ ಎದ್ದವರು ಹಾಳಾಗಿ ಹೋದರು. ಅವರ ಸೊತ್ತನ್ನು ಬೆಂಕಿಯು ನಾಶಮಾಡಿತು!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ‘ಅವರ ಉಳಿದ ಸೊತ್ತನ್ನು ಬೆಂಕಿಯು ನಾಶಮಾಡಿತು’ ಎಂದು, ನಿರ್ದೋಷಿಗಳು ದುಷ್ಟರನ್ನು ಅಣಕಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ‘ನೋಡಿ, ನಮ್ಮ ವೈರಿಗಳು ಹೇಗೆ ಹಾಳಾಗಿಹೋದರು! ಅವರು ಬಿಟ್ಟುಹೋದ ಆಸ್ತಿ ಬೆಂಕಿಯಿಂದ ಭಸ್ಮವಾಯಿತು!’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವರ ಉಳಿದ ಸೊತ್ತನ್ನು ಬೆಂಕಿಯು ನಾಶಮಾಡಿತು ಎಂದು ನಿರ್ದೋಷಿಗಳು ದುಷ್ಟರನ್ನು ಅಣಕಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ‘ನಮ್ಮ ಶತ್ರುಗಳು ನಾಶವಾದರು! ಬೆಂಕಿಯು ಅವರ ಐಶ್ವರ್ಯವನ್ನು ಸುಟ್ಟುಹಾಕಿತು!’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:20
14 ತಿಳಿವುಗಳ ಹೋಲಿಕೆ  

ಅವನ ನಿಕ್ಷೇಪಗಳಲ್ಲಿ ಅಂಧಕಾರವು ಪೂರ್ಣವಾಗಿ ಕವಿಯುವುದು; ಯಾರೂ ಹೊತ್ತಿಸದ ಬೆಂಕಿ ಅವನನ್ನು ದಹಿಸುವುದು; ಅವನ ಗುಡಾರದಲ್ಲಿ ಉಳಿದದ್ದೆಲ್ಲ ನಾಶವಾಗುವುದು.


ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬ ದೂತನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ ಸೇವಕರನ್ನೂ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


ಕತ್ತಲೆಯೊಳಗಿಂದ ಅವನು ಪಾರಾಗುವದಿಲ್ಲ; ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು; ದೇವರ ಬಾಯಿಯ ಶ್ವಾಸದಿಂದ ಅವನು ತೊಲಗಿ ಹೋಗುವನು.


“ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿವಂತರು ಅಳಿದು ಹೋದದ್ದು ಎಲ್ಲಿ?


ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.


ಅವನು ನಮ್ಮನ್ನು ಹೊರಗಿನವರಂತೆ ಎಣಿಸಿದ್ದಾನಲ್ಲಾ. ಅವನು ನಮ್ಮನ್ನು ಮಾರಿ, ನಮ್ಮ ಹಣವನ್ನೂ ನುಂಗೇ ಬಿಟ್ಟನಲ್ಲಾ.


ದುಷ್ಟನಿಗೆ ದೇವರಿಂದ ಬರುವ ಪಾಲೂ, ಅವನಿಗೆ ನೇಮವಾಗಿರುವ ಬಾಧ್ಯತೆಯೂ ಇವೇ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು