Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 22:7 - ಕನ್ನಡ ಸಮಕಾಲಿಕ ಅನುವಾದ

7 ನೀನು ದಣಿದವರಿಗೆ ನೀರು ಕೊಡಲಿಲ್ಲ; ಹಸಿದವರಿಗೆ ಆಹಾರವನ್ನು ಬಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಳಲಿದವನಿಗೆ ನೀರು ಕೊಡದೆ, ಹಸಿದವನಿಗೆ ಅನ್ನಕೊಡದೆ ಹೋಗಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದಣಿದವನಿಗೆ ನೀ ಕೊಡಲಿಲ್ಲ ಪಾನ ಹಸಿದವನಿಗೆ ಬಡಿಸಲಿಲ್ಲ ಅನ್ನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಳಲಿದವನಿಗೆ ನೀರು ಕೊಡದೆ ಹಸಿದವನಿಗೆ ಅನ್ನವಿಕ್ಕದೆ ಹೋಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಯಾಸಗೊಂಡವರಿಗೆ ನೀರು ಕೊಡದೆ ಹಸಿದವರಿಗೆ ಊಟ ಕೊಡದೆಹೋಗಿರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 22:7
13 ತಿಳಿವುಗಳ ಹೋಲಿಕೆ  

ದಿಕ್ಕಿಲ್ಲದವರು ಊಟ ಉಣ್ಣದ ಹಾಗೆ, ನಾನು ಮಾತ್ರ ತುತ್ತನ್ನೆಲ್ಲಾ ಒಂಟಿಯಾಗಿ ತಿಂದೆನೋ?


ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ. ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.


ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ?


ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಾದವನಿಗೆ ವಸ್ತ್ರವನ್ನು ಹೊದಿಸಿ,


ಯಾರನ್ನೂ ಉಪದ್ರವಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸೆ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಿರುವವನಿಗೆ ಬಟ್ಟೆಯನ್ನು ಹೊದಿಸಿ,


“ಆದರೆ, ನಿನ್ನ ವೈರಿಯು ಹಸಿದಿದ್ದರೆ, ಅವನಿಗೆ ಆಹಾರ ಕೊಡು, ಅವನು ಬಾಯಾರಿದ್ದರೆ ಕುಡಿಯಲು ಕೊಡು. ಹೀಗೆ ಮಾಡುವುದರಿಂದ ನೀನು ಅವನ ತಲೆಯ ಮೇಲೆ ಉರಿಯುವ ಕೆಂಡವನ್ನು ಸುರಿದಂತಾಗುವುದು.”


ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ದಬ್ಬಾಳಿಕೆಗೆ ಒಳಗಾದವನ ಪ್ರಾಣವನ್ನು ತೃಪ್ತಿಪಡಿಸಿದರೆ, ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವುದು. ನಿನ್ನ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.


ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.


ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.


ನನ್ನ ಮನೆಯ ಕೆಲಸದವರು, ‘ಯೋಬನು ನೀಡಿದ ಭೋಜನದಿಂದ ತೃಪ್ತರಾಗದವರು ಯಾರು?’ ಎಂದು ಹೇಳಿಕೊಳ್ಳುತ್ತಿದ್ದರಲ್ಲವೆ?


“ನಾನು ಬಡವರ ಬಯಕೆಗಳನ್ನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನ್ನು ನಾನು ಮಂಕಾಗಿಸಿದೆನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು